Vande Bharat Express: ತಮಿಳುನಾಡಿನಲ್ಲಿ ಚೆನ್ನೈ-ಮೈಸೂರು ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

Tamil Nadu: ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದಾರೆ.

Vande Bharat Express: ತಮಿಳುನಾಡಿನಲ್ಲಿ ಚೆನ್ನೈ-ಮೈಸೂರು ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ
ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 14, 2023 | 1:59 PM

ಚೆನ್ನೈ: ಇತ್ತೀಚೆಗಿನ ದಿನಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನ ಮೇಲೆ ಕಲ್ಲು ತೂರಾಟ ಮಾಡುವ ಘಟನೆಗಳು ಹೆಚ್ಚಾಗಿದೆ, ಈ ರೈಲು ಶುರುವಾಗಿನಿಂದ ಅನೇಕ ಕಡೆ ಕಲ್ಲು ತೂರಾಟ ನಡೆಯುತ್ತಲೇ ಇದೆ. ನಮ್ಮ ಆಸ್ತಿಗೆ ನಾವೇ ಹಾನಿ ಮಾಡುವುದು ಸರಿಯಲ್ಲ. ಆ ಮನಸ್ಥಿತಿಯ ಜನರನ್ನು ಮೊದಲು ಮಟ್ಟ ಹಾಕಬೇಕು ಎಂದು ಪ್ರಯಾಣಿಕರೊಬ್ಬರು ಹೇಳಿರುವ ವೀಡಿಯೊ ಎಲ್ಲ ಕಡೆ ಸದ್ದು ಮಾಡಿತ್ತು. ಇದೀಗ ಮತ್ತೊಂದು ಘಟನೆ ಇಂದು (ಜುಲೈ.14) ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಗಾಜುಗಳು ಪುಡಿ ಪುಡಿಯಾಗಿದೆ. ಎಕ್ಸ್‌ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

2023 ಫೆಬ್ರವರಿಯಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಸ್ಟೇಷನ್ ಬಳಿ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದು ಕರ್ನಾಟಕದಲ್ಲಿ ನಡೆದ ಮೊದಲ ಕಲ್ಲು ತೂರಾಟ. ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್​​ನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದರು. ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಎಂಬ ಪ್ರಶಂಸೆಯನ್ನು ಪಡೆದಿತ್ತು.

ಇದನ್ನೂ ಓದಿ:ಚಿಕ್ಕಮಗಳೂರಿನಲ್ಲೂ ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೇಟು: ಸ್ಥಳಕ್ಕೆ ಪೊಲೀಸರ ಭೇಟಿ

ರಾಮನಗರದಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಇತ್ತಿಚೇಗಷ್ಟೇ ರಾಮನಗರದಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ​​ನಡೆದಿತ್ತು, ಈ ಸಮಯದಲ್ಲಿ ರೈಲಿನಲ್ಲಿದ್ದ ಪ್ಯಾಸೆಂಜರ್ ಮೇಲೆ ಕಲ್ಲುಗಳು ಬಿದಿತ್ತು. ಈ ಘಟನೆಯಿಂದ ಸುಮಿತ್ರಾ ಎಂಬವರ ಕತ್ತಿನ ಭಾಗಕ್ಕೆ ಗಾಯವಾಗಿದೆ. ಹೀಗೆ ಅನೇಕ ಕಡೆಗಳಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆದಿರುವ ಘಟನೆಗಳು ನಡೆಯುತ್ತಲೇ ಇದೆ. ಈ ಬಗ್ಗೆ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್