AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಪ್ರಾಯೋಗಿಕ ಸಂಚಾರ ನಡೆಸಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು

ತಿರುವನಂತಪುರಂನಿಂದ ಕಣ್ಣೂರಿಗೆ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಾಯೋಗಿಕ ಓಡಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

Vande Bharat Express: ಪ್ರಾಯೋಗಿಕ ಸಂಚಾರ ನಡೆಸಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು
ತಿರುವನಂತಪುರಂನಿಂದ ಕಣ್ಣೂರಿಗೆ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಾಯೋಗಿಕ ಓಡಾಟ
ಅಕ್ಷಯ್​ ಪಲ್ಲಮಜಲು​​
|

Updated on:Apr 17, 2023 | 7:18 PM

Share

ಕೊಚ್ಚಿ: ಭಾರತೀಯ ರೈಲ್ವೇ ಇಂದು ತಿರುವನಂತಪುರಂನಿಂದ ಕಣ್ಣೂರಿಗೆ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ಪ್ರಾಯೋಗಿಕ ಓಡಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತಿರುವನಂತಪುರ ರೈಲು ನಿಲ್ದಾಣದಿಂದ ಬೆಳಗ್ಗೆ 5:10ಕ್ಕೆ ಆರಂಭವಾದ ಪ್ರಾಯೋಗಿಕ ರೈಲು ಓಡಾಟ ಮಧ್ಯಾಹ್ನ 12:30ಕ್ಕೆ ಕಣ್ಣೂರು ತಲುಪಿದೆ.  ತಿರುವನಂತಪುರ ವಿಭಾಗದ ಉನ್ನತ ಅಧಿಕಾರಿಗಳು ಮತ್ತು ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಕಣ್ಣೂರಿನತ್ತ ವಂದೇ ಭಾರತ್ ಎಕ್ಸ್‌ಪ್ರೆಸ್​​ನಲ್ಲಿ ಪ್ರಯಾಣ ಬೆಳೆಸಿದರು. ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಕೇರಳಕ್ಕೆ ವಂದೇ ಭಾರತ್ ರೈಲುನ್ನು ವಿಶುಕೈನೀಟ್ಟಂ(ಉಡುಗೊರೆ) ನೀಡಿದ್ದಾರೆ ಎಂದು ಏಪ್ರಿಲ್ 14ರಂದು, ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಹೇಳಿದ್ದಾರೆ.

ಕೇರಳಕ್ಕೆ ಹೈಸ್ಪೀಡ್ ರೈಲಿನ ಬೇಡಿಕೆ ಈಗ ಈಡೇರಿದೆ. ಪ್ರಧಾನಿ ಕೇರಳದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ ಕೇಂದ್ರವು ಕೇರಳದ ಅಭಿವೃದ್ಧಿಗೆ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು. ಕೇರಳಕ್ಕೆ ವಂದೇ ಭಾರತ್ ರೈಲು ಯೋಜನೆಯನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರವು ಈ ಹಿಂದೆ ಹೇಳಿತ್ತು, ಈ ಬಗ್ಗೆ  ವಿರೋಧಿಗಳು ರಾಜ್ಯಕ್ಕೆ ರೈಲು ನಿರಾಕರಿಸಲಾಗಿದೆ ಎಂಬ ಅಭಿಯಾನವನ್ನು ನಡೆಸಿದ್ದರು, ಆದರೆ ಇಂದು ಎಲ್ಲ ಸವಾಲುಗಳು ದಾಟಿ ಕೇರಳಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ಬಂದಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಏ.24ರಂದು  ಕೇರಳಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ:PM Modi Kerala Visit: ಪ್ರಧಾನಿ ಮೋದಿ ಏಪ್ರಿಲ್ 24ರಂದು ಕೇರಳಕ್ಕೆ; 2 ವಂದೇ ಭಾರತ್ ರೈಲು ಘೋಷಣೆ

ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ತಯಾರಿಸಿದ, ಅರೆ-ಹೈ ಸ್ಪೀಡ್ ಮತ್ತು ಸ್ವಯಂ ಚಾಲಿತ ರೈಲು ಸೆಟ್ ಆಗಿದೆ. ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಒದಗಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Mon, 17 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ