ಕೊಚ್ಚಿ: ಭಾರತೀಯ ರೈಲ್ವೇ ಇಂದು ತಿರುವನಂತಪುರಂನಿಂದ ಕಣ್ಣೂರಿಗೆ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಪ್ರಾಯೋಗಿಕ ಓಡಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತಿರುವನಂತಪುರ ರೈಲು ನಿಲ್ದಾಣದಿಂದ ಬೆಳಗ್ಗೆ 5:10ಕ್ಕೆ ಆರಂಭವಾದ ಪ್ರಾಯೋಗಿಕ ರೈಲು ಓಡಾಟ ಮಧ್ಯಾಹ್ನ 12:30ಕ್ಕೆ ಕಣ್ಣೂರು ತಲುಪಿದೆ. ತಿರುವನಂತಪುರ ವಿಭಾಗದ ಉನ್ನತ ಅಧಿಕಾರಿಗಳು ಮತ್ತು ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಕಣ್ಣೂರಿನತ್ತ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣ ಬೆಳೆಸಿದರು. ಈ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಕೇರಳಕ್ಕೆ ವಂದೇ ಭಾರತ್ ರೈಲುನ್ನು ವಿಶುಕೈನೀಟ್ಟಂ(ಉಡುಗೊರೆ) ನೀಡಿದ್ದಾರೆ ಎಂದು ಏಪ್ರಿಲ್ 14ರಂದು, ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಹೇಳಿದ್ದಾರೆ.
ಕೇರಳಕ್ಕೆ ಹೈಸ್ಪೀಡ್ ರೈಲಿನ ಬೇಡಿಕೆ ಈಗ ಈಡೇರಿದೆ. ಪ್ರಧಾನಿ ಕೇರಳದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ ಕೇಂದ್ರವು ಕೇರಳದ ಅಭಿವೃದ್ಧಿಗೆ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು. ಕೇರಳಕ್ಕೆ ವಂದೇ ಭಾರತ್ ರೈಲು ಯೋಜನೆಯನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರವು ಈ ಹಿಂದೆ ಹೇಳಿತ್ತು, ಈ ಬಗ್ಗೆ ವಿರೋಧಿಗಳು ರಾಜ್ಯಕ್ಕೆ ರೈಲು ನಿರಾಕರಿಸಲಾಗಿದೆ ಎಂಬ ಅಭಿಯಾನವನ್ನು ನಡೆಸಿದ್ದರು, ಆದರೆ ಇಂದು ಎಲ್ಲ ಸವಾಲುಗಳು ದಾಟಿ ಕೇರಳಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಬಂದಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಏ.24ರಂದು ಕೇರಳಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ:PM Modi Kerala Visit: ಪ್ರಧಾನಿ ಮೋದಿ ಏಪ್ರಿಲ್ 24ರಂದು ಕೇರಳಕ್ಕೆ; 2 ವಂದೇ ಭಾರತ್ ರೈಲು ಘೋಷಣೆ
ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ತಯಾರಿಸಿದ, ಅರೆ-ಹೈ ಸ್ಪೀಡ್ ಮತ್ತು ಸ್ವಯಂ ಚಾಲಿತ ರೈಲು ಸೆಟ್ ಆಗಿದೆ. ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ಹೆಚ್ಚು ಅನುಕೂಲಕರ ಪ್ರಯಾಣದ ಅನುಭವವನ್ನು ಒದಗಿಸುತ್ತದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:50 pm, Mon, 17 April 23