Vande Bharat Express: ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ
ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಹೈಸ್ಪೀಡ್ ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.
ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಹೈಸ್ಪೀಡ್ ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. CPRO, ಪೂರ್ವ ರೈಲ್ವೆ ಸಿಯಾಡ್ ಕೌಶಿಕ್ ಮಿತ್ರ ಮಾತನಾಡಿ, ಇದು ಅತ್ಯಂತ ದುರದೃಷ್ಟಕರ ಘಟನೆ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಹೌರಾ ನಿಲ್ದಾಣದ ಬಳಿ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ಹೈಸ್ಪೀಡ್ ರೈಲಿನ ಕಿಟಕಿ ಗಾಜುಗಳು ಹಾನಿಗೊಳಗಾಗಿರುವುದನ್ನು ಎಎನ್‌ಐ ಪಡೆದುಕೊಂಡಿರುವ ದೃಶ್ಯಗಳು ತೋರಿಸುತ್ತವೆ. ಜನವರಿಯಲ್ಲಿ, ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದ ಬಳಿ ಎರಡು ಕೋಚ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿತ್ತು ಎಂದು ಹೇಳಿದೆ.
ಮತ್ತಷ್ಟು ಓದಿ: Vande Bharat Express: ಮುಂದಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪುರಿ ಮತ್ತು ಹೌರಾ ನಡುವೆ ಸಂಚರಿಸುವ ಸಾಧ್ಯತೆ
ಮಾಲ್ಡಾ ಬಳಿ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ರೈಲಿಗೆ ಕಲ್ಲು ತೂರಿದ್ದರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿ ಗಾಜುಗಳು ಪುಡುಪುಡಿಯಾಗಿದ್ದು, ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದ ಬಳಿ ಈ ಘಟನೆ ನಡೆದಿದೆ ಎಂದು ಆರ್‌ಪಿಎಫ್ ಕಮಾಂಡರ್ ಮಾಹಿತಿ ನೀಡಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕೋಚ್ C3 ಮತ್ತು C6 ಕಲ್ಲು ತೂರಾಟದಿಂದಾಗಿ ಹಾನಿಗೀಡಾಗಿರುವುದು ಕಂಡುಬಂದಿದೆ. ರೈಲು ನ್ಯೂ ಜಲ್ಪೈಗುರಿ ಕಡೆಗೆ ಚಲಿಸುತ್ತಿದ್ದಾಗ ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದ ಬಳಿ ಕಿಟಕಿಗಳು ಹಾನಿಗೊಳಗಾಗಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ