Vande Bharat Express: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ವಂದೇ ಭಾರತ್ ಎಕ್ಸ್‌ಪ್ರೆಸ್ ಕರ್ನಾಟಕದಲ್ಲೂ ಸೇವೆ ನೀಡುತ್ತಿದೆ. ಪ್ರಧಾನಿ ಮೋದಿಯವರ ಕನಸಿನ ಯೋಜನೆಯ ವಂದೇ ಭಾರತ್ ಎಕ್ಸ್‌ಪ್ರೆಸ್ ಅಡಿ ಹೊಸದಾಗಿ ಘೋಷಣೆಯಾಗಿರುವ ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಅಜ್ಮೀರ್-ದೆಹಲಿ ಕಂಟೋನ್ಮೆಂಟ್ ಮಾರ್ಗದಲ್ಲಿ ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಈ ಮಾರ್ಗದಲ್ಲಿ ಓಡುತ್ತಿರುವ ಪ್ರಸ್ತುತ ವೇಗದ ರೈಲಿಗಿಂತ ಒಂದು ಗಂಟೆ ಮುಂಚಿತವಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಯಾಣವನ್ನು ಪೂರ್ಣಗೊಳಿಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಜೈಪುರ, ಅಲ್ವಾರ್ ಮತ್ತು ಗುರುಗ್ರಾಮ್‌ನಲ್ಲಿ ನಿಲುಗಡೆಯೊಂದಿಗೆ ಅಜ್ಮೀರ್ ಮತ್ತು ದೆಹಲಿ ಕಂಟೋನ್ಮೆಂಟ್ ನಡುವೆ ಕಾರ್ಯನಿರ್ವಹಿಸಲಿದೆ. ರೈಲು ದೆಹಲಿ ಕಂಟೋನ್ಮೆಂಟ್ ಮತ್ತು ಅಜ್ಮೀರ್ ನಡುವಿನ ದೂರವನ್ನು 5 ಗಂಟೆ 15 ನಿಮಿಷಗಳಲ್ಲಿ ಕ್ರಮಿಸುತ್ತದೆ. ಶತಾಬ್ದಿ ಎಕ್ಸ್‌ಪ್ರೆಸ್, ಪ್ರಸ್ತುತ ಈ ಮಾರ್ಗದಲ್ಲಿ ಅತ್ಯಂತ ವೇಗದ ರೈಲು ಆಗಿದ್ದು, ಇದು ಇದೇ ದೂರವನ್ನು 6 ಗಂಟೆ 15 ನಿಮಿಷಗಳಲ್ಲಿ ಕ್ರಮಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ವಂದೇ ಭಾರತ್ ಎಕ್ಸ್‌ಪ್ರೆಸ್, ದೇಶದಾದ್ಯಂತ ವೇಗದ ಮತ್ತು ಆರಾಮದಾಯಕ ರೈಲು ಸೇವೆ ನೀಡಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಕರ್ನಾಟಕದಲ್ಲೂ ಸೇವೆ ನೀಡುತ್ತಿದೆ. ಪ್ರಧಾನಿ ಮೋದಿಯವರ ಕನಸಿನ ಯೋಜನೆಯ ವಂದೇ ಭಾರತ್ ಎಕ್ಸ್‌ಪ್ರೆಸ್ ಅಡಿ ಹೊಸದಾಗಿ ಘೋಷಣೆಯಾಗಿರುವ ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.