Vande Bharat Express: ಕೇರಳದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜುಗಳಿಗೆ ಹಾನಿ

|

Updated on: May 02, 2023 | 10:10 AM

ಕೇರಳದಲ್ಲಿ ವಂದೇ ಭಾರತ್(Vande Bharat) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕಿಟಕಿ ಗಾಜುಗಳಿಗೆ ಹಾನಿಯುಂಟಾಗಿದೆ. ಇತ್ತೀಚೆಗಷ್ಟೇ ಕೇರಳದಲ್ಲಿ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು.

Vande Bharat Express: ಕೇರಳದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜುಗಳಿಗೆ ಹಾನಿ
ವಂದೇ ಭಾರತ್ ಎಕ್ಸ್​ಪ್ರೆಸ್​
Image Credit source: The Hindu
Follow us on

ಕೇರಳದಲ್ಲಿ ವಂದೇ ಭಾರತ್(Vande Bharat) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕಿಟಕಿ ಗಾಜುಗಳಿಗೆ ಹಾನಿಯುಂಟಾಗಿದೆ. ಇತ್ತೀಚೆಗಷ್ಟೇ ಕೇರಳದಲ್ಲಿ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುಣವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ, ರೈಲು ಕಾಸರಗೋಡಿನಿಂದ ತಿರುವನಂತಪುರಂಗೆ ತೆರಳುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು.

ಯಾರೂ ಗಾಯಗೊಂಡಿಲ್ಲ ಒಂದು ಕೋಚ್‌ನ ವಿಂಡ್‌ಶೀಲ್ಡ್​ಗೆ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾವು ರೈಲು ಭದ್ರತೆಯನ್ನು ಬಲಪಡಿಸಲು ನಿರ್ಧರಿಸಿದ್ದೇವೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ಈ ಹಿಂದೆ ಏಪ್ರಿಲ್ 6 ರಂದು ವಿಶಾಖಪಟ್ಟಣಂ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಹೊಸ ಘಟನೆ ವರದಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟದ ಮೂರನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಕಿಡಿಗೇಡಿಗಳು ಕಲ್ಲು ತೂರಾಟದಿಂದ ಕೋಚ್ ಕಿಟಕಿ ಗಾಜು ಒಡೆದಿದೆ.

ಮತ್ತಷ್ಟು ಓದಿ:ಕೇರಳದ ವಂದೇ ಭಾರತ್ ಎಕ್ಸ್​​ಪ್ರೆಸ್ ಮೇಲೆ ಪಾಲಕ್ಕಾಡ್ ಸಂಸದನ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು; ಬಿಜೆಪಿ ಕಿಡಿ

ಸಿಕಂದರಾಬಾದ್‌ನಿಂದ ಬರುವಾಗ ಖಮ್ಮಂ ಮತ್ತು ವಿಜಯವಾಡ ರೈಲು ನಿಲ್ದಾಣಗಳ ನಡುವೆ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ದಕ್ಷಿಣ ಮಧ್ಯ ರೈಲ್ವೆ ವಲಯ ಆವರಣದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ ಎಂದು ವಾಲ್ಟೇರ್ ಡಿವಿಷನ್ ರೈಲ್ವೇ ಪತ್ರಿಕಾ ಟಿಪ್ಪಣಿ ತಿಳಿಸಿದೆ.

ಈ ಹಿಂದೆ ಜನವರಿಯಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂ ನಗರದಲ್ಲಿ ವಂದೇ ಭಾರತ್ ರೈಲಿನ ನಿರ್ವಹಣೆ ವೇಳೆ ಕಲ್ಲು ತೂರಾಟ ನಡೆದಿತ್ತು. ವಿಶಾಖಪಟ್ಟಣಂನ ಕಂಚರಪಾಲೆಂ ಬಳಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕೋಚ್​ಗೆ ಹಾನಿಯಾಗಿತ್ತು.

ಈ ಹಿಂದೆ ಮಾರ್ಚ್ 12 ರಂದು ಪಶ್ಚಿಮ ಬಂಗಾಳದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟದ ಘಟನೆ ವರದಿಯಾಗಿದೆ, ಇದರಲ್ಲಿ ಹೈಸ್ಪೀಡ್ ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾದವು ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ