Vande Bharat Express: ಗುಜರಾತ್​​ನಲ್ಲಿ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದು 54 ವರ್ಷದ ಮಹಿಳೆ ಸಾವು

| Updated By: ಸುಷ್ಮಾ ಚಕ್ರೆ

Updated on: Nov 09, 2022 | 10:59 AM

ಗುಜರಾತ್​ನ ಆನಂದ್ ರೈಲು ನಿಲ್ದಾಣದ ಬಳಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂಬ 54 ವರ್ಷದ ಮಹಿಳೆ ಹಳಿ ದಾಟುತ್ತಿದ್ದಾಗ ಅವರ ಮೇಲೆ ರೈಲು ಹಾದುಹೋಗಿದೆ.

Vande Bharat Express: ಗುಜರಾತ್​​ನಲ್ಲಿ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದು 54 ವರ್ಷದ ಮಹಿಳೆ ಸಾವು
ವಂದೇ ಭಾರತ್ ಎಕ್ಸ್‌ಪ್ರೆಸ್
Follow us on

ಅಹಮದಾಬಾದ್: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vande Bharat Express Train) ಡಿಕ್ಕಿ ಹೊಡೆದು 54 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಗುಜರಾತ್‌ನ (Gujarat) ಆನಂದ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು ಸೇವೆ ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಈ ರೀತಿಯ ಅವಘಡ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದೆ.

ಗುಜರಾತ್​ನ ಆನಂದ್ ರೈಲು ನಿಲ್ದಾಣದ ಬಳಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂಬ 54 ವರ್ಷದ ಮಹಿಳೆ ಹಳಿ ದಾಟುತ್ತಿದ್ದಾಗ ಅವರ ಮೇಲೆ ರೈಲು ಹಾದುಹೋಗಿದೆ. ಅಹಮದಾಬಾದ್‌ನ ನಿವಾಸಿಯಾಗಿದ್ದ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಆನಂದ್‌ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಇದನ್ನೂ ಓದಿ: ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಗಾಂಧಿನಗರದಿಂದ ಮುಂಬೈ ಸೆಂಟ್ರಲ್‌ಗೆ ತೆರಳುತ್ತಿತ್ತು. ಈ ರೈಲಿಗೆ ಆನಂದ್ ರೈಲು ನಿಲ್ದಾಣದಲ್ಲಿ ಸ್ಟಾಪ್ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 30ರಂದು ಗಾಂಧಿನಗರದ ನಿಲ್ದಾಣದಿಂದ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದರು.

ಕಳೆದ 1 ತಿಂಗಳಲ್ಲಿ ರೈಲ್ವೆ ಹಳಿಗಳ ಮೇಲೆ ಜಾನುವಾರುಗಳಿಗೆ ಡಿಕ್ಕಿ ಹೊಡೆದು 3 ಬಾರಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು ಹಾನಿಯಾಗಿತ್ತು. ಅಕ್ಟೋಬರ್ 6ರಂದು ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ 4 ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ವಂದೇ ಭಾರತ್ ಎಕ್ಸ್​ಪ್ರೆಸ್​ನ ಮುಂಭಾಗಕ್ಕೆ ಹಾನಿಯಾಗಿತ್ತು.

ಇದನ್ನೂ ಓದಿ: Vande Bharat Express: ಪ್ರಾಯೋಗಿಕ ಸಂಚಾರ -ಅತಿ ವೇಗವಾಗಿ ಚಲಿಸುವ ವಂದೇ ಭಾರತ್ ರೈಲು ಇಂದು ಬೆಂಗಳೂರಿಗೆ

ಅದಾದ ಮರುದಿನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿತ್ತು. ಮತ್ತೊಂದು ಘಟನೆಯಲ್ಲಿ ಗುಜರಾತ್‌ನ ಅತುಲ್ ರೈಲು ನಿಲ್ದಾಣದ ಬಳಿ ರೈಲು ಗೂಳಿಗೆ ಡಿಕ್ಕಿ ಹೊಡೆದಿತ್ತು. ಇದೀಗ ಮೊದಲ ಬಾರಿಗೆ ವಂದೇ ಭಾರತ್ ರೈಲು ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು, ಜೀವವನ್ನು ಬಲಿ ಪಡೆದಿದೆ. ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಮತ್ತು ತಯಾರಿಸಿದ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ್ ಸರಣಿಯಡಿಯಲ್ಲಿ ಮೂರನೆಯ ರೈಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ