ವಂದೇ ಭಾರತ್ ರೈಲಿನ ಊಟದಲ್ಲಿ ಹುಳುಗಳು ಪತ್ತೆ; ಅಡುಗೆ ಕಂಪನಿಗೆ 50 ಲಕ್ಷ ರೂ. ದಂಡ

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ತಮಗೆ ನೀಡಿದ ಊಟದ ಜೊತೆ ನೀಡಲಾಗಿದ್ದ ಮೊಸರಿನಲ್ಲಿ ಹುಳುಗಳು ಇದ್ದವು ಎಂದು ಆರೋಪ ಮಾಡಿದ್ದರು. ರೈಲ್ವೆ ಅಧಿಕಾರಿಗಳು ಅದನ್ನು ಪರಿಶೀಲನೆ ಮಾಡುತ್ತಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ರೈಲಿನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಇಲಾಖೆ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮಕ್ಕೆ (ಐಆರ್‌ಸಿಟಿಸಿ) 10 ಲಕ್ಷ ರೂ. ದಂಡ ವಿಧಿಸಿದೆ.

ವಂದೇ ಭಾರತ್ ರೈಲಿನ ಊಟದಲ್ಲಿ ಹುಳುಗಳು ಪತ್ತೆ; ಅಡುಗೆ ಕಂಪನಿಗೆ 50 ಲಕ್ಷ ರೂ. ದಂಡ
Vande Bharat Express Food Video

Updated on: Mar 26, 2026 | 3:44 PM

ನವದೆಹಲಿ, ಮಾರ್ಚ್ 26: ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ (Vande Bharat Express) ನೀಡಲಾದ ಊಟದಲ್ಲಿ ಮೊಸರಿನಲ್ಲಿ ಹುಳುಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10 ಲಕ್ಷ ರೂ. ದಂಡ ವಿಧಿಸಿದೆ. ಹಾಗೇ, ಅಡುಗೆ ಒದಗಿಸುವವರಿಗೆ 50 ಲಕ್ಷ ರೂ. ದಂಡ ವಿಧಿಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿರುವ ಮೊಸರಿನಲ್ಲಿ ಹುಳುಗಳು ಕಂಡುಬಂದಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಸಚಿವಾಲಯ ಕಠಿಣ ಕ್ರಮ ಕೈಗೊಂಡಿದೆ. IRCTCಗೆ 1 ಮಿಲಿಯನ್ (10 ಲಕ್ಷ) ಮತ್ತು ಅಡುಗೆ ಕಂಪನಿಗೆ 5 ಮಿಲಿಯನ್ (50 ಲಕ್ಷ) ದಂಡ ವಿಧಿಸಿದೆ.

ಮಾರ್ಚ್ 15ರಂದು ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಊಟ ನೀಡಿದ ಸ್ವಲ್ಪ ಸಮಯದ ನಂತರ ಅವರು ತಮ್ಮ ಊಟದಲ್ಲಿ ಹುಳುಗಳಿವೆ ಎಂದು ಆರೋಪ ಮಾಡಿದ್ದರು. ಅಕ್ಕಪಕ್ಕದ ಸೀಟಿನವರು ಈ ಘಟನೆಯನ್ನು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದರು. ಮೊಸರಿನ ಬಾಕ್ಸ್​ನಿಂದ ಹುಳುಗಳು ಹರಿದಾಡಿ ರಿತೇಶ್ ಸಿಂಗ್ ಅವರ ಪ್ಲೇಟಿನಲ್ಲೂ ಬಿದ್ದಿದ್ದನ್ನು ವಿಡಿಯೋದಲ್ಲಿ ತೋರಿಸಲಾಗಿತ್ತು. ಈ ವಿಡಿಯೋ ವೈರಲ್ ಆಗಿ ರೈಲ್ವೆ ಇಲಾಖೆ ನೀಡುವ ಆಹಾರದ ಗುಣಮಟ್ಟದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: Vande Bharat Sleeper: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ವಿಶೇಷತೆ, ಟಿಕೆಟ್ ದರ ಏನು?

ಈ ಘಟನೆಯ ಬಗ್ಗೆ ದೂರು ಸ್ವೀಕರಿಸಿದ ಕೂಡಲೇ ರೈಲ್ವೆ ಇಲಾಖೆ ತಕ್ಷಣ ಕ್ರಮ ಕೈಗೊಂಡು, ಅಡುಗೆ ಕಂಪನಿಯ ಒಪ್ಪಂದವನ್ನು ರದ್ದುಗೊಳಿಸಿ 5 ಮಿಲಿಯನ್ ದಂಡ ವಿಧಿಸಿತು. ಐಆರ್‌ಸಿಟಿಸಿಗೂ 1 ಮಿಲಿಯನ್ ದಂಡ ವಿಧಿಸಲಾಗಿದೆ. ಈ ಬಗ್ಗೆ ರೈಲ್ವೆ ಇಲಾಖೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.


“ಮಾರ್ಚ್ 15, 2026ರಂದು ರೈಲು ಸಂಖ್ಯೆ 21896 (ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್)ರಲ್ಲಿ ನೀಡಲಾದ ಆಹಾರದ ಗುಣಮಟ್ಟದ ಕುರಿತು ಬಂದ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗಿದ್ದು, IRCTCಗೆ 10 ಲಕ್ಷ ರೂ. ಮತ್ತು ಅಡುಗೆ ಒದಗಿಸುವವರಿಗೆ 50 ಲಕ್ಷ ರೂ. ದಂಡ ವಿಧಿಸಲಾಗಿದೆ. ಅವರ ಒಪ್ಪಂದವನ್ನು ರದ್ದುಗೊಳಿಸಲು ಸಹ ಆದೇಶಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಗುಣಮಟ್ಟ ನಮ್ಮ ಪ್ರಮುಖ ಆದ್ಯತೆಗಳು” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್! ಯಶವಂತಪುರ-ತಾಳಗುಪ್ಪ ಸೇರಿದಂತೆ ಇನ್ನು ಮುಂದೆ 19 ವಿಶೇಷ ರೈಲುಗಳ ಖಾಯಂ ಸೇವೆ

ಭಾರತೀಯ ರೈಲ್ವೆ ವಕ್ತಾರರು ಕೂಡ ಈ ವಿಷಯವನ್ನು ಹಗುರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಗುಣಮಟ್ಟದ ಸೇವೆಯನ್ನು ಕಾಪಾಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಅದರಲ್ಲೂ ವಿಶೇಷವಾಗಿ ವಂದೇ ಭಾರತ್‌ನಂತಹ ಪ್ರೀಮಿಯಂ ರೈಲುಗಳಲ್ಲಿ ಪ್ರಯಾಣಿಕರು ಉತ್ತಮ ಸೌಲಭ್ಯಗಳನ್ನು ನಿರೀಕ್ಷಿಸುವುದರಿಂದ ಉತ್ತಮ ಗುಣಮಟ್ಟದ ಸೇವೆ ಮತ್ತು ಶುಚಿತ್ವವನ್ನು ಒದಗಿಸಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us