AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಹತ್ತಿದ 12 ಜನರಿಗೆ ಶಾಕ್, 140 ಕಿ.ಮೀ ಪ್ರಯಾಣ, 36 ಸಾವಿರ ರೂ. ದಂಡ

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ರೈಲು ಹತ್ತಿದ 12 ಮಂದಿ ರೈಲಿನ ಸ್ವಯಂಚಾಲಿತ ಬಾಗಿಲು ಮುಚ್ಚಿದ್ದರಿಂದ 140 ಕಿ.ಮೀ ಪ್ರಯಾಣಿಸುವಂತಾಯಿತು. ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರೋಪದ ಮೇಲೆ ಕಾನ್ಪುರದಿಂದ ಇಟಾವಾ ತಲುಪಿದ ಈ 12 ಜನರಿಗೆ ತಲಾ 3,000 ರೂ. ದಂಡ ವಿಧಿಸಿ, ಒಟ್ಟು 36,000 ರೂ. ಸಂಗ್ರಹಿಸಲಾಯಿತು. ವಂದೇ ಭಾರತ್ ನಿಯಮಗಳ ಬಗ್ಗೆ ಈ ಘಟನೆ ಅರಿವು ಮೂಡಿಸಿದೆ.

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಹತ್ತಿದ 12 ಜನರಿಗೆ ಶಾಕ್, 140 ಕಿ.ಮೀ ಪ್ರಯಾಣ, 36 ಸಾವಿರ ರೂ. ದಂಡ
ವಂದೇ ಭಾರತ್Image Credit source: PTI
ನಯನಾ ರಾಜೀವ್
|

Updated on: Nov 18, 2026 | 3:06 PM

Share

ಇಟಾವಾ, ನವೆಂಬರ್ 18: ಸಂಬಂಧಿಕರನ್ನು ಬೋಳ್ಕೊಡಲು ವಂದೇ ಭಾರತ್ ರೈಲು ಹತ್ತಿದ್ದ 12 ಮಂದಿ 36 ಸಾವಿರ ರೂ. ದಂಡ ವಿಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೇವಲ ರೈಲು ಹತ್ತಿದ್ದಕ್ಕಲ್ಲ ರೈಲು ಹತ್ತಿ ಸಂಬಂಧಿಕರನ್ನು ಸೀಟಿನಲ್ಲಿ ಕೂರಿಸುತ್ತಿರುವ ಸಂದರ್ಭದಲ್ಲಿ ರೈಲಿನ ಬಾಗಿಲುಗಳು ಸ್ವಯಂಚಾಲಿತವಾಗಿ ಮುಚ್ಚಿಕೊಂಡ ಪರಿಣಾಮ ಅವರೆಲ್ಲರಿಗೂ ಕೆಳಗೆ ಇಳಿಯಲಾಗದೆ 140 ಕಿ.ಮೀ ಪ್ರಯಾಣಿಸುವಂತಾಯಿತು. ಬಳಿಕ ಇಟಾವಾ ನಿಲ್ದಾಣದಲ್ಲಿ ಇಳಿದಿದ್ದಾರೆ. ಬಳಿಕ ರೈಲ್ವೆ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಪ್ರತಿಯೊಬ್ಬರಿಗೂ ತಲಾ 3 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಸಂಬಂಧಿಕರನ್ನು ಬೀಳ್ಕೊಡಲು ಹೋಗಿ ರೈಲಿನೊಳಗೆ ಲಾಕ್

ಈ ಘಟನೆ ವಾರಾಣಸಿಯಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ. ರೈಲು ಸಂಖ್ಯೆ 22415 ಕಾನ್ಪುರ ಸೆಂಟ್ರಲ್ ನಿಲ್ದಾಣಕ್ಕೆ ಬಂದಾಗ, ಅಲ್ಲಿನ 12 ಮಂದಿ ತಮ್ಮ ಸಂಬಂಧಿಕರನ್ನು ಬೀಳ್ಕೊಡಲು ರೈಲು ಹತ್ತಿದ್ದಾರೆ. ಕುಟುಂಬ ಸದಸ್ಯರು ರೈಲಿನಲ್ಲಿ ಆರಾಮವಾಗಿ ಕುಳಿತುಕೊಳ್ಳಲು ಸಹಾಯ ಮಾಡುವ ಉದ್ದೇಶದಿಂದ ಅವರು ಒಳಗೆ ಹೋಗಿದ್ದರು ಎನ್ನಲಾಗಿದೆ.

ಆದರೆ ಅವರು ರೈಲಿನಿಂದ ಕೆಳಗಿಳಿಯುವಷ್ಟರಲ್ಲಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿಕೊಂಡಿವೆ. ರೈಲು ಹೊರಡುವ ಸಮಯವಾಗಿದ್ದರಿಂದ ಬಾಗಿಲುಗಳು ಲಾಕ್ ಆಗಿವೆ. ಇದರಿಂದಾಗಿ ಒಳಗಿದ್ದ 12 ಮಂದಿಗೆ ಕಾನ್ಪುರ ನಿಲ್ದಾಣದಲ್ಲೇ ಇಳಿಯಲು ಸಾಧ್ಯವಾಗಿಲ್ಲ.

140 ಕಿ.ಮೀ ದೂರ ಪ್ರಯಾಣಿಸಿದ ಸಂಬಂಧಿಕರು

ರೈಲು ಚಲಿಸಲು ಆರಂಭಿಸಿದ ಬಳಿಕ ತಾವು ರೈಲಿನೊಳಗೆ ಸಿಲುಕಿರುವುದು ಅವರಿಗೆ ಅರಿವಾಗಿದೆ. ತಕ್ಷಣ ರೈಲ್ವೆ ಸಿಬ್ಬಂದಿಗೆ ವಿಷಯ ತಿಳಿಸಿ ಬಾಗಿಲು ತೆರೆಯುವಂತೆ ಮನವಿ ಮಾಡಿದ್ದಾರೆ. ಆದರೆ ರೈಲು ಚಲಿಸುತ್ತಿರುವಾಗ ಸುರಕ್ಷತಾ ನಿಯಮಗಳ ಕಾರಣಕ್ಕೆ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ. ಮಹಿಳೆಯರು ಮತ್ತು ಮಕ್ಕಳು ಕೂಡ ಈ ಗುಂಪಿನಲ್ಲಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ:

ಬೆಂಗಳೂರು-ಗೋವಾ ವಂದೇ ಭಾರತ್​ ಸಂಚಾರ ಶುರು: ರೈಲಿನ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡ ಪ್ರಯಾಣಿಕರು

ವಿಷಯ ತಿಳಿದ ರೈಲು ಸಿಬ್ಬಂದಿ ತುಂಡ್ಲಾ ರೈಲ್ವೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಂದ ಸೂಚನೆ ಬಂದ ಬಳಿಕ ಭಾನುವಾರ ಬೆಳಗ್ಗೆ 10.49ರ ಸುಮಾರಿಗೆ ರೈಲನ್ನು ಇಟಾವಾ ಜಂಕ್ಷನ್‌ನಲ್ಲಿ ನಿಲ್ಲಿಸಲಾಗಿದೆ. ಕಾನ್ಪುರದಿಂದ ಸುಮಾರು 140 ಕಿಲೋಮೀಟರ್ ದೂರದಲ್ಲಿರುವ ಇಟಾವಾದಲ್ಲಿ ಕೊನೆಗೂ 12 ಮಂದಿ ರೈಲಿನಿಂದ ಕೆಳಗಿಳಿದಿದ್ದಾರೆ.

ರೈಲ್ವೆ ಅಧಿಕಾರಿಗಳಿಂದ ವಿಚಾರಣೆ, 36 ಸಾವಿರ ರೂ. ದಂಡ ಇಟಾವಾ ನಿಲ್ದಾಣದಲ್ಲಿ ರೈಲು ನಿಂತ ತಕ್ಷಣ ರೈಲ್ವೆ ರಕ್ಷಣಾ ಪಡೆ (RPF) ಮತ್ತು ಸರ್ಕಾರಿ ರೈಲ್ವೆ ಪೊಲೀಸ್ (GRP) ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಟೇಷನ್ ಸೂಪರಿಂಟೆಂಡೆಂಟ್ ಪಿ.ಎಂ. ಮೀನಾ, ಆರ್‌ಪಿಎಫ್ ಇನ್ಸ್‌ಪೆಕ್ಟರ್ ದಿನೇಶ್ ಕುಮಾರ್ ಸಿಂಗ್ ಹಾಗೂ ಜಿಆರ್‌ಪಿ ಇನ್ಸ್‌ಪೆಕ್ಟರ್ ಯದುವೀರ್ ಸಿಂಗ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ನಂತರ 12 ಮಂದಿಯನ್ನು ಸುರಕ್ಷಿತವಾಗಿ ರೈಲಿನಿಂದ ಕೆಳಗಿಳಿಸಿ ಆರ್‌ಪಿಎಫ್ ಕಚೇರಿಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರನ್ನು ವಿಚಾರಣೆ ನಡೆಸಿ ಘಟನೆಯ ವಿವರಗಳನ್ನು ದಾಖಲಿಸಿಕೊಳ್ಳಲಾಗಿದೆ.

ಪ್ರತಿಯೊಬ್ಬರಿಗೂ ತಲಾ 3 ಸಾವಿರ ರೂ. ದಂಡ ರೈಲ್ವೆ ಅಧಿಕಾರಿಗಳ ಪ್ರಕಾರ, ಮಾನ್ಯ ಟಿಕೆಟ್ ಅಥವಾ ಅನುಮತಿಯಿಲ್ಲದೆ ರೈಲನ್ನು ಪ್ರವೇಶಿಸಿರುವುದು ನಿಯಮ ಉಲ್ಲಂಘನೆಯಾಗಿದೆ. ಹೀಗಾಗಿ ವಾಣಿಜ್ಯ ವಿಭಾಗವು ಪ್ರತಿಯೊಬ್ಬರಿಗೂ 3,000 ರೂಪಾಯಿಯಂತೆ ದಂಡ ವಿಧಿಸಿದೆ. ಒಟ್ಟು 12 ಮಂದಿಯಿಂದ 36,000 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಬಳಿಕ ಎಚ್ಚರಿಕೆ ನೀಡಿ ಅವರನ್ನು ಬಿಡುಗಡೆ ಮಾಡಲಾಗಿದೆ.

ವಂದೇ ಭಾರತ್ ರೈಲಿನ ಬಾಗಿಲುಗಳ ವೈಷಿಷ್ಟ್ಯವೇನು?

ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರತದ ಸೆಮಿ ಹೈ-ಸ್ಪೀಡ್ ರೈಲುಗಳಲ್ಲಿ ಒಂದಾಗಿದೆ. ಈ ರೈಲಿನಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳನ್ನು ಅಳವಡಿಸಲಾಗಿದೆ. ರೈಲು ನಿಗದಿತ ನಿಲ್ದಾಣದಲ್ಲಿ ನಿಂತಾಗ ಮಾತ್ರ ಬಾಗಿಲು ತೆರೆಯುವ ವ್ಯವಸ್ಥೆ ಇದೆ. ರೈಲು ಚಲಿಸುವಾಗ ಬಾಗಿಲುಗಳು ಮುಚ್ಚಿರುತ್ತವೆ.

ಹೀಗಾಗಿ ಟಿಕೆಟ್ ಅಥವಾ ಸರಿಯಾದ ಅನುಮತಿ ಇಲ್ಲದೆ ರೈಲು ಹತ್ತುವುದು ಅನಗತ್ಯ ತೊಂದರೆಗೆ ಕಾರಣವಾಗಬಹುದು. ಈ ಘಟನೆ ವಂದೇ ಭಾರತ್‌ನಂತಹ ಆಧುನಿಕ ರೈಲುಗಳಲ್ಲಿ ಬೋರ್ಡಿಂಗ್ ನಿಯಮಗಳನ್ನು ಪಾಲಿಸುವುದು ಎಷ್ಟು ಮುಖ್ಯ ಎಂಬುದನ್ನು ಮತ್ತೊಮ್ಮೆ ನೆನಪಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ