AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯಲ್ಲಿ ಉಕ್ಕಿ ಹರಿದ ಗಂಗೆ, ಘಾಟ್‌ಗಳು ಜಲಾವೃತ: ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲು ಅಧಿಕಾರಿಗಳಿಗೆ ಪಿಎಂ ಮೋದಿ ಕರೆ

ವಾರಾಣಸಿ ಪ್ರವಾಹ: ವಾರಾಣಸಿಯಲ್ಲಿ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಘಾಟ್‌ಗಳು ಜಲಾವೃತವಾಗಿವೆ. ಪ್ರಧಾನಿ ಮೋದಿ ಮೇಯರ್, ಡಿಸಿಗೆ ಕರೆ ಮಾಡಿ ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಸೂಚಿಸಿದ್ದಾರೆ. ಸಂತ್ರಸ್ತರಿಗೆ ಕುಡಿಯುವ ನೀರು, ಆಹಾರ, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಆದೇಶಿಸಿದ್ದು, ನದಿಯಲ್ಲಿ ದೋಣಿ ಸಂಚಾರ ನಿರ್ಬಂಧಿಸಲಾಗಿದೆ. ಎನ್‌ಡಿಆರ್‌ಎಫ್ ಪಡೆಗಳು ಸ್ಥಳದಲ್ಲಿದ್ದು, ಪರಿಸ್ಥಿತಿ ನಿರಂತರ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಕಾಶಿಯಲ್ಲಿ ಉಕ್ಕಿ ಹರಿದ ಗಂಗೆ, ಘಾಟ್‌ಗಳು ಜಲಾವೃತ: ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲು ಅಧಿಕಾರಿಗಳಿಗೆ ಪಿಎಂ ಮೋದಿ ಕರೆ
ಪ್ರಧಾನಿ ಮೋದಿ-ಪ್ರವಾಹ
ನಯನಾ ರಾಜೀವ್
|

Updated on: Sep 03, 2026 | 12:04 PM

Share

ವಾರಾಣಸಿ, ಸೆಪ್ಟೆಂಬರ್ 03: ತಮ್ಮ ಸ್ವಕ್ಷೇತ್ರವಾದ ವಾರಾಣಸಿಯಲ್ಲಿ ಗಂಗಾ ನದಿಯ ನೀರಿನ ಮಟ್ಟ ಅಪಾಯದ ಅಂಚಿಗೆ ತಲುಪಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಮೇಯರ್ ಹಾಗೂ ಜಿಲ್ಲಾಧಿಕಾರಿ ಸತ್ಯೇಂದ್ರ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರವಾಹ ಪೀಡಿತ ನಾಗರಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು ಮತ್ತು ಪರಿಹಾರ ಕಾರ್ಯಾಚರಣೆಯನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ವಾರಾಣಸಿಯಲ್ಲಿ ಗಂಗಾ ನದಿಯ ನೀರಿನ ಮಟ್ಟ ಎಚ್ಚರಿಕೆಯ ಮಟ್ಟವನ್ನು ಮೀರಿ ಹರಿಯುತ್ತಿದ್ದು, ನಗರದ ಪ್ರಸಿದ್ಧ ಘಾಟ್‌ಗಳು ಹಾಗೂ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ವಾರಣಾಸಿಯ ಮೇಯರ್ ಮತ್ತು ಜಿಲ್ಲಾಧಿಕಾರಿ ಸತ್ಯೇಂದ್ರ ಕುಮಾರ್ ಅವರಿಗೆ ಕರೆ ಮಾಡಿ ಪರಿಸ್ಥಿತಿಯ ಮಾಹಿತಿ ಪಡೆದಿದ್ದಾರೆ.

ಸಂತ್ರಸ್ತರಿಗಾಗಿ ತೆರೆಯಲಾಗಿರುವ ಪರಿಹಾರ ಶಿಬಿರಗಳಲ್ಲಿ ಶುದ್ಧ ಕುಡಿಯುವ ನೀರು, ಆಹಾರ ಮತ್ತು ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಯಾವುದೇ ಕೊರತೆಯಿಲ್ಲದಂತೆ ಒದಗಿಸಲು ಪ್ರಧಾನಿ ಆದೇಶಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿಯಲ್ಲಿ ದೋಣಿ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಹಾಗೂ ಸಂತ್ರಸ್ತರಿಗೆ  ಬೇಗ  ನೆರವು ತಲುಪಿಸಲು ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತ ಸ್ಥಳದಲ್ಲೇ ಬೀಡುಬಿಟ್ಟಿದೆ.

ವಿಡಿಯೋ

ತುರ್ತು ಪರಿಹಾರ ಮತ್ತು ನಿಗಾ: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಡಳಿತ ಸಂಪೂರ್ಣ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಆಡಳಿತಾತ್ಮಕ ಲೋಪಗಳಿಗೆ ಅವಕಾಶ ನೀಡದೆ, ಸಂತ್ರಸ್ತರಿಗೆ ತಕ್ಷಣವೇ ಅಗತ್ಯ ನೆರವು ತಲುಪಿಸಬೇಕು.

ಶಿಬಿರಗಳಲ್ಲಿ ಮೂಲಸೌಕರ್ಯ: ಸಂತ್ರಸ್ತರಿಗಾಗಿ ಸ್ಥಾಪಿಸಲಾಗಿರುವ ಪರಿಹಾರ ಶಿಬಿರಗಳಲ್ಲಿ ಶುದ್ಧ ಕುಡಿಯುವ ನೀರು, ಗುಣಮಟ್ಟದ ಆಹಾರ, ವಿದ್ಯುತ್, ನೈರ್ಮಲ್ಯ ಹಾಗೂ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು.

ಮತ್ತಷ್ಟು ಓದಿ: ಪ್ರಧಾನಿ ಮೋದಿ ಕಿರ್ಗಿಸ್ತಾನ ಭೇಟಿ: ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ

ಹೆಚ್ಚುವರಿ ಪರಿಹಾರ ಸಾಮಗ್ರಿ: ತೀವ್ರ ಬಾಧಿತ ವಲಯಗಳನ್ನು ಗುರುತಿಸಿ, ಅಲ್ಲಿಗೆ ಹೆಚ್ಚುವರಿ ಪರಿಹಾರ ಸಾಮಗ್ರಿಗಳನ್ನು ಮತ್ತು ದೋಣಿಗಳನ್ನು ವಿಳಂಬವಿಲ್ಲದೆ ರವಾನಿಸಬೇಕು.

ಪೋಸ್ಟ್

ಗಂಗಾ ನದಿಯ ಪ್ರಸ್ತುತ ನೀರಿನ ಮಟ್ಟ ಮತ್ತು ಪರಿಸ್ಥಿತಿ

ಎಚ್ಚರಿಕೆ ಮಟ್ಟ ಮೀರಿದ ಪ್ರವಾಹ: ಕೇಂದ್ರ ಜಲ ಆಯೋಗದ (CWC) ವರದಿಯ ಪ್ರಕಾರ, ರಾಜ್‌ಘಾಟ್ ಗೇಜ್‌ನಲ್ಲಿ ಗಂಗಾ ನದಿಯ ನೀರಿನ ಮಟ್ಟ 70.54 ಮೀಟರ್‌ಗೆ ತಲುಪಿದ್ದು, ಎಚ್ಚರಿಕೆಯ ಮಟ್ಟವಾದ70.262 ಮೀಟರ್‌ಗಿಂತ ಹೆಚ್ಚಾಗಿದೆ. ನೀರು ಗಂಟೆಗೆ ಸುಮಾರು 2 ಸೆಂಟಿಮೀಟರ್‌ಗಳಷ್ಟು ವೇಗದಲ್ಲಿ ಏರುತ್ತಿದೆ.

ಘಾಟ್‌ಗಳು ಜಲಾವೃತ: ಗಂಗಾ ಮತ್ತು ವರುಣಾ ನದಿಗಳ ನೀರಿನ ಮಟ್ಟ ಏರಿಕೆಯಿಂದಾಗಿ ವಾರಣಾಸಿಯ ಪ್ರಸಿದ್ಧ 86 ಘಾಟ್‌ಗಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಪ್ರಸಿದ್ಧ ಗಂಗಾ ಆರತಿಯನ್ನು ಮೇಲಿನ ಛಾವಣಿಗಳಿಗೆ ಸ್ಥಳಾಂತರಿಸಲಾಗಿದ್ದು, ನದಿಯಲ್ಲಿ ಎಲ್ಲಾ ರೀತಿಯ ದೋಣಿ ಸಂಚಾರವನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿದೆ.

ತಗ್ಗು ಪ್ರದೇಶಗಳಲ್ಲಿ ನೀರು: ವರುಣಾ ನದಿ ಪಾತ್ರದ ಸುಮಾರು 11ಕ್ಕೂ ಹೆಚ್ಚು ಬಡಾವಣೆಗಳಿಗೆ ನೀರು ನುಗ್ಗಿದ್ದು, ನೂರಾರು ಕುಟುಂಬಗಳನ್ನು ಸುರಕ್ಷಿತ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಹಾಗೂ ಜಲ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ನೇಪಾಳ ದುರಂತದ ಎಫೆಕ್ಟ್: ಹಿಮಾಲಯದಲ್ಲಿ ಸಂಭವಿಸಿದ ಹಿಮನದಿ ಕುಸಿತ ಮತ್ತು ಮೇಘಸ್ಫೋಟದಿಂದಾಗಿ ನೇಪಾಳದಲ್ಲಿ ಸಾವಿನ ಸಂಖ್ಯೆ 1,200 ದಾಟಿದೆ; ನದಿಗಳ ಉಕ್ಕಿ ಹರಿಯುವಿಕೆಯಿಂದಾಗಿ ಉತ್ತರ ಭಾರತದ ಬಯಲು ಸೀಮೆಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ಭಾರೀ ಮಳೆಯ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ಪೂರ್ವ ಮಧ್ಯಪ್ರದೇಶ, ಉತ್ತರ ಪ್ರದೇಶ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಗಂಗಾ ನದಿಯ ಒಳಹರಿವು ಮತ್ತಷ್ಟು ಹೆಚ್ಚುವ ಆತಂಕವಿದೆ.

ವಾರಾಣಸಿಯ ಘಾಟ್‌ಗಳು ಪ್ರವಾಹದ ನೀರಿನಲ್ಲಿ ಮುಳುಗಡೆಯಾಗಿರುವ ಮತ್ತು ದೈನಂದಿನ ಧಾರ್ಮಿಕ ವಿಧಿವಿಧಾನಗಳು ನದಿ ದಡದಿಂದ ಮೇಲೆ ಸ್ಥಳಾಂತರಗೊಂಡಿರುವ ನೈಜ ದೃಶ್ಯಾವಳಿಗಳನ್ನು ವೀಕ್ಷಿಸಲು ಈ ವಾರಾಣಸಿ ಪ್ರವಾಹದ ಗ್ರೌಂಡ್ ರಿಪೋರ್ಟ್ ವೀಡಿಯೊ ಸಹಕಾರಿಯಾಗಿದೆ. ಈ ವೀಡಿಯೊದಲ್ಲಿ ವಾರಾಣಸಿಯ ಗಂಗಾ ನದಿಯ ಪ್ರವಾಹ ಪರಿಸ್ಥಿತಿ ಮತ್ತು ಘಾಟ್‌ಗಳು ಜಲಾವೃತವಾಗಿರುವುದನ್ನು ನೇರವಾಗಿ ವಿವರಿಸಲಾಗಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ