AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಬರೆ ಬಟ್ಟೆ ತೊಟ್ಟು, ಮನೆಗಳಿಗೆ ನುಗ್ಗಿ, ಜನರನ್ನು ಕಚ್ಚಿ ವಾರಾಣಸಿಯಲ್ಲಿ ವಿದೇಶಿ ಪ್ರಜೆಯ ಹೈಡ್ರಾಮಾ

ವಾರಾಣಸಿಯಲ್ಲಿ ಅರೆಬರೆ ಬಟ್ಟೆ ತೊಟ್ಟ ವಿದೇಶಿ ಪ್ರಜೆಯೊಬ್ಬ ದಾಂಧಲೆ ನಡೆಸಿದ್ದಾನೆ. ಮನೆಗಳಿಗೆ ನುಗ್ಗಿ, ಜನರನ್ನು ಕಚ್ಚಿ, ವಸ್ತುಗಳನ್ನು ಧ್ವಂಸಗೊಳಿಸಿದ್ದಾನೆ. ಮಾದಕವಸ್ತು ಸೇವನೆಯ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಘಟನೆಗೆ ನಿಖರ ಕಾರಣ ಮತ್ತು ಆತನ ಗುರುತು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಅರೆಬರೆ ಬಟ್ಟೆ ತೊಟ್ಟು, ಮನೆಗಳಿಗೆ ನುಗ್ಗಿ, ಜನರನ್ನು ಕಚ್ಚಿ ವಾರಾಣಸಿಯಲ್ಲಿ ವಿದೇಶಿ ಪ್ರಜೆಯ ಹೈಡ್ರಾಮಾ
ವ್ಯಕ್ತಿ
ನಯನಾ ರಾಜೀವ್
|

Updated on: Jul 17, 2026 | 1:25 PM

Share

ವಾರಾಣಸಿ, ಜುಲೈ 17: ಉತ್ತರ ಪ್ರದೇಶದ ವಾರಾಣಸಿ(Varanasi)ಯಲ್ಲಿ ವಿದೇಶ ಪ್ರಜೆಯ ದಾಂಧಲೆ ಹೆಚ್ಚಾಗಿತ್ತು. ಅರೆಬರೆ ಬಟ್ಟೆ ತೊಟ್ಟಿದ್ದ ಆತ, ಸುಮಾರು ಮನೆಗಳಿಗೆ ನುಗ್ಗಿ, ಜನರ ಜತೆ ಜಗಳವಾಡಿದ್ದಲ್ಲದೆ ಅವರನ್ನು ಕಚ್ಚಿರುವ ಕುರಿತು ದೂರುಗಳು ಕೇಳಿಬಂದಿದೆ. ವೈರಲ್ ಆದ ವಿಡಿಯೋದಲ್ಲಿ ಹುಚ್ಚನಂತೆ ಜನರ ಮುಂದೆ ನಿಂತು ಬಾಯಿಗೆ ಬಂದಂತೆ ಮಾತನಾಡುವುದನ್ನು ಕಾಣಬಹುದು.

ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ‘ಸಪ್ತಸಾಗರ ಔಷಧ ಮಾರುಕಟ್ಟೆ’ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮನೆಗಳಿಗೆ ನುಗ್ಗಿ ವಸ್ತುಗಳನ್ನು ಧ್ವಂಸಗೊಳಿಸಿದ ವಿದೇಶಿಗ, ಸ್ಥಳೀಯ ನಿವಾಸಿಯೊಬ್ಬರ ಕೈಯನ್ನು ಕಚ್ಚಿ ಗಾಯಗೊಳಿಸಿದ್ದಾನೆ. ಆತ ಮಾದಕವಸ್ತು ಪ್ರಭಾವದಲ್ಲಿ ಈ ರೀತಿ ಮಾಡಿರಬಹುದು ಎಂದು ಹೇಳಲಾಗಿದೆ.

ಕಿರಿದಾದ ಗಲ್ಲಿಗಳಲ್ಲಿ ಜನರ ಬೆನ್ನಟ್ಟಿದ ವಿದೇಶಿ ಪ್ರಜೆ ಸ್ಥಳೀಯರ ಪ್ರಕಾರ, ಈ ವಿದೇಶಿ ಪ್ರಜೆ ಮೊದಲು ರಸ್ತೆಯಲ್ಲಿ ವಿಚಿತ್ರವಾಗಿ ಓಡಾಡಿದ್ದಾನೆ. ನಂತರ ವಸತಿ ಕಟ್ಟಡವೊಂದರ ಮೇಲಿನ ಮಹಡಿಗೆ ನುಗ್ಗಿ ಅಲ್ಲಿನ ವಸ್ತುಗಳನ್ನು ಮನಬಂದಂತೆ ಹೊರಗೆ ಎಸೆಯಲು ಆರಂಭಿಸಿದ್ದಾನೆ. ಸ್ಥಳೀಯರು ಆತನನ್ನು ಶಾಂತಗೊಳಿಸಲು ಪ್ರಯತ್ನಿಸಿದಾಗ, ಆತ ಮತ್ತಷ್ಟು ಆಕ್ರೋಶಗೊಂಡು ಜನರ ಮೇಲೆ ದಾಳಿ ಮಾಡಿದ್ದಾನೆ. ಈ ಗದ್ದಲದ ನಡುವೆ ಆತ ನಿವಾಸಿಯೊಬ್ಬರ ಕೈಗೆ ಬಲವಾಗಿ ಕಚ್ಚಿದ್ದಾನೆ ಹಾಗೂ ಕಿರಿದಾದ ಹಾದಿಗಳಲ್ಲಿ ಸಾರ್ವಜನಿಕರನ್ನು ಬೆನ್ನಟ್ಟಿ ಭೀತಿ ಹುಟ್ಟಿಸಿದ್ದಾನೆ.

ವಿಷಯ ತಿಳಿದು ಕೊತ್ವಾಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಆತನಿಗೆ ಕೆಳಗಿಳಿಯುವಂತೆ ಮನವೊಲಿಸಲು ಯತ್ನಿಸಿದಾಗ, ಆತ ಪೊಲೀಸರ ಮೇಲೆಯೇ ತಿರುಗಿಬಿದ್ದು ‘ಹಿಂತಿರುಗಿ ಹೋಗಿ’ ಎಂದು ಜೋರಾಗಿ ಕಿರುಚಾಡಿದ್ದಾನೆ. ಕೊನೆಗೆ ಸ್ಥಳೀಯರು ಮತ್ತು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆತನನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.

ವಿಡಿಯೋ

ಬಂಧನದ ನಂತರ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆಗಾಗಿ ಕಬೀರ್‌ಚೌರಾ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೊತ್ವಾಲಿ ಇನ್ಸ್‌ಪೆಕ್ಟರ್ ದಯಾಶಂಕರ್, ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಆತನ ಈ ಆಕ್ರಮಣಕಾರಿ ನಡವಳಿಕೆಗೆ ಮಾನಸಿಕ ಆರೋಗ್ಯದ ಸಮಸ್ಯೆಯೇ ಕಾರಣ ಅಥವಾ ಆತ ಅತಿಯಾಗಿ ಮಾದಕ ವಸ್ತು ಸೇವಿಸಿದ್ದಾನೆಯೇ ಎಂಬ ಬಗ್ಗೆ ವೈದ್ಯಕೀಯ ವರದಿ ಬಂದ ನಂತರ ಸತ್ಯ ತಿಳಿಯಲಿದೆ ಎಂದಿದ್ದಾರೆ.

ಪ್ರಸ್ತುತ ಪೊಲೀಸರು ಆ ವ್ಯಕ್ತಿಯ ಗುರುತು, ಆತ ಯಾವ ದೇಶದವನು ಮತ್ತು ವಾರಾಣಸಿಗೆ ಬಂದ ಉದ್ದೇಶವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದು, ವರದಿ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ