AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ ಉಪವಾಸದ ಬದಲು ಭಾರತೀಯ ಸಂವಿಧಾನ ಓದಿ ಹೀಗೊಂದು ಪೋಸ್ಟ್​: ಅತಿಥಿ ಉಪನ್ಯಾಸಕರ ವಜಾ

ನವರಾತ್ರಿ ಉಪವಾಸದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಾರಾಣಸಿ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರನ್ನು ವಜಾಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನವರಾತ್ರಿ ಉಪವಾಸದ ಬದಲು ಭಾರತೀಯ ಸಂವಿಧಾನ ಓದಿ ಹೀಗೊಂದು ಪೋಸ್ಟ್​: ಅತಿಥಿ ಉಪನ್ಯಾಸಕರ ವಜಾ
UniversityImage Credit source: NDTV
TV9 Web
| Updated By: ನಯನಾ ರಾಜೀವ್|

Updated on: Oct 02, 2022 | 11:33 AM

Share

ನವರಾತ್ರಿ ಉಪವಾಸದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಾರಾಣಸಿ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರನ್ನು ವಜಾಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠವು ಅತಿಥಿ ಉಪನ್ಯಾಸಕನನ್ನು ವಜಾಗೊಳಿಸಿದೆ ಮತ್ತು ವಿಶ್ವವಿದ್ಯಾನಿಲಯದಲ್ಲಿನ ಹದಗೆಟ್ಟ ವಾತಾವರಣ ಮತ್ತು ಪರೀಕ್ಷೆಗಳ ಮೇಲೆ ಪರಿಣಾಮ ಬೀರುವ ದೃಷ್ಟಿಯಿಂದ ಅವರ ಪ್ರವೇಶವನ್ನು ನಿಷೇಧಿಸಿದೆ.

ಉಪನ್ಯಾಸಕರೊಬ್ಬರು ಒಂಬತ್ತು ದಿನಗಳ ಕಾಲ ಉಪವಾಸ ಮಾಡುವ ಬದಲು ಭಾರತೀಯ ಸಂವಿಧಾನವನ್ನು ಓದಿ ಎಂದು ಹೆಣ್ಣುಮಕ್ಕಳನ್ನು ಒತ್ತಾಯಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದರು. ಅತಿಥಿ ಉಪನ್ಯಾಸಕ ಮಿಥಿಲೇಶ್ ಕುಮಾರ್ ಗೌತಮ್ ವಿರುದ್ಧ ವಿದ್ಯಾರ್ಥಿಗಳು ಪತ್ರದ ಮೂಲಕ ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಿಜಿಸ್ಟ್ರಾರ್ ಸುನೀತಾ ಪಾಂಡೆ ತಿಳಿಸಿದ್ದಾರೆ.

ಉಪವಾಸ ಮಾಡುವ ಬದಲು ಭಾರತದ ಸಂವಿಧಾನ ಮತ್ತು ಹಿಂದೂ ಕೋಡ್ ಬಿಲ್ ಅನ್ನು ಓದುವುದು ಉತ್ತಮ. ಅವರ ಜೀವನವು ಭಯ ಮತ್ತು ಗುಲಾಮಗಿರಿಯಿಂದ ಮುಕ್ತವಾಗಿರುತ್ತದೆ. ಜೈ ಭೀಮ್ ಎಂದು ಬರೆದಿದ್ದರು. ಪಾಂಡೆ ಅವರು ಕಚೇರಿ ಆದೇಶದಲ್ಲಿ, “ಸೆಪ್ಟೆಂಬರ್ 29 ರಂದು, ಅತಿಥಿ ಉಪನ್ಯಾಸಕ ಡಾ.ಮಿಥಿಲೇಶ್ ಕುಮಾರ್ ಗೌತಮ್ ಅವರು ಹಿಂದೂ ಧರ್ಮಕ್ಕೆ ವಿರುದ್ಧವಾದ ಕೆಲವು ವಿಷಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಪತ್ರದ ಮೂಲಕ ದೂರಿದ್ದಾರೆ.

ಪದೇ ಪದೇ ಪ್ರಯತ್ನಿಸಿದರೂ ಪ್ರತಿಕ್ರಿಯೆಗಾಗಿ ಗೌತಮ್ ಅವರನ್ನು ಸಂಪರ್ಕಿಸಲಾಗಲಿಲ್ಲ. ಅವರ ಫೋನ್ ಸ್ವಿಚ್ಡ್​ ಆಫ್ ಆಗಿತ್ತು. ವಿಶ್ವವಿದ್ಯಾಲಯವು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ, ಲಕ್ನೋ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಸಹ ಪ್ರಾಧ್ಯಾಪಕ ರವಿಕಾಂತ್ ಚಂದನ್ ಈ ಕ್ರಮವನ್ನು ಪ್ರಶ್ನಿಸಿದ್ದಾರೆ.

“ನಾನು ಆ ಪೋಸ್ಟ್ ಅನ್ನು ನೋಡಿದೆ. ಅದರಲ್ಲಿ ಅಸಾಂವಿಧಾನಿಕ ಏನೂ ಇಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಮತ್ತು ಈ ಪೋಸ್ಟ್ ಮಹಿಳಾ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ. ಇದು ಸರಳ ಮತ್ತು ಸಾಮಾನ್ಯ ಪೋಸ್ಟ್ ಆಗಿದೆ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!