Vasantrao Chavan death: ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್​ರಾವ್ ಚವಾಣ್ ನಿಧನ

ನಾಂದೇಡ್​ನ ಕಾಂಗ್ರೆಸ್ ಸಂಸದ ವಸಂತ್​ರಾವ್ ಚವಾಣ್ ವಿಧಿವಶರಾಗಿದ್ದಾರೆ. ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಸೋಮವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.ಯಕೃತ್ತಿನ ಸೋಂಕಿನಿಂದ ಚವಾಣ್ ಅವರನ್ನು ಆರಂಭದಲ್ಲಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಉಸಿರಾಟದ ತೊಂದರೆ ಮತ್ತು ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದರು.

Vasantrao Chavan death: ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್​ರಾವ್ ಚವಾಣ್ ನಿಧನ
ವಸಂತ್​ರಾವ್Image Credit source: India TV
Follow us
ನಯನಾ ರಾಜೀವ್
|

Updated on: Aug 26, 2024 | 8:44 AM

ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್​ರಾವ್ ಚವಾಣ್(Vasantrao Chavan)​ ನಿಧನರಾಗಿದ್ದಾರೆ. ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಸೋಮವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ. ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸಾವಿನೊಂದಿಗೆ ಅವರ ಹೋರಾಟ ವಿಫಲವಾಯಿತು.

ಆರಂಭದಲ್ಲಿ ಚವಾಣ್ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು. ಲೋ ಬಿಪಿ ಕೂಡ ಇತ್ತು. ಚವಾಣ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಹೈದರಾಬಾದ್‌ಗೆ ಕರೆದೊಯ್ಯಲಾಯಿತು.

ಅವರು ಪ್ರತಿ ತಿಂಗಳು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು, ನಾಂದೇಡ್‌ನಲ್ಲಿ ನಡೆದ ಕಾಂಗ್ರೆಸ್‌ ವಿಭಾಗೀಯ ಸಭೆಯಿಂದಾಗಿ ನಿತ್ಯ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ಚುನಾವಣೆಗೆ ಸಿದ್ಧತೆ ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿವೆ.ಪಕ್ಷದ ಪ್ರಮುಖ ನಾಯಕರು ಮಹಾರಾಷ್ಟ್ರ ಪ್ರವಾಸದಲ್ಲಿದ್ದಾರೆ. ಈ ವರ್ಷ ಲೋಕಸಭೆ ಚುನಾವಣೆಯಲ್ಲಿ ಲಾತೂರ್ ಮತ್ತು ನಾಂದೇಡ್‌ನಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದರಿಂದ ಸಭೆಯಲ್ಲಿ ವಿಭಿನ್ನ ಉತ್ಸಾಹ ಕಂಡುಬಂದಿದೆ. ಲಾತೂರ್ ಸಂಸದ ಶಿವಾಜಿರಾವ್ ಕಾಲ್ಗೆ ಮತ್ತು ನಾಂದೇಡ್ ಸಂಸದ ವಸಂತರಾವ್ ಚವಾಣ್ ಅವರೊಂದಿಗೆ ಸಭೆ ನಡೆಸಲು ಯೋಜಿಸಲಾಗಿತ್ತು.

ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅಶೋಕ್ ಚವಾಣ್ ಬಿಜೆಪಿ ಸೇರಿದ್ದರು. ಈ ಹಿನ್ನೆಲೆಯಲ್ಲಿ ನಾಂದೇಡ್ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು. ಕಾಂಗ್ರೆಸ್ ಭದ್ರಕೋಟೆಯಾಗಿರುವ ನಾಂದೇಡ್ ಕ್ಷೇತ್ರದಲ್ಲಿ 2004ರ ಚುನಾವಣೆಗೆ ಬಿಜೆಪಿ ಪ್ರವೇಶಿಸಿತ್ತು.

ಆದರೆ ಕಾಂಗ್ರೆಸ್ ಅಭ್ಯರ್ಥಿ ವಸಂತ್ ಚವಾಣ್ ಬಿಜೆಪಿಯ ಅಂದಿನ ಸಂಸದ ಪ್ರತಾಪ್ ಪಾಟೀಲ್ ಚಿಖ್ಲಿಕರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. ಚವಾಣ್ ಅವರು ಚಿಖ್ಲಿಕರ್ ಅವರನ್ನು 59 ಸಾವಿರದ 442 ಮತಗಳಿಂದ ಸೋಲಿಸಿದರು. ವಸಂತರಾವ್ ಚವಾಣ್ 5,28,894 ಹಾಗೂ ಚಿಖ್ಲಿಕರ್ 4,69,452 ಮತಗಳನ್ನು ಪಡೆದಿದ್ದರು.

ವಸಂತ್ ಚವಾಣ್ ಅವರು ಪ್ರಾಮಾಣಿಕ ಮತ್ತು ನಿಷ್ಠಾವಂತ ಕಾಂಗ್ರೆಸ್ ನಾಯಕ ಎಂದು ಹೆಸರಾಗಿದ್ದರು. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ನಾಂದೇಡ್ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಮಹಾವಿಕಾಸ್ ಅಘಾಡಿಯ ಎಲ್ಲಾ ಮೂರು ಪಕ್ಷದ ನಾಯಕರು ಅಂದು ಚವಾಣ್ ಪರ ಒಮ್ಮತದಿಂದ ಪ್ರಚಾರ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್