AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝಲರ್‌ಪತನ್‌ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಸುಂಧರಾ ರಾಜೆ: ಸಚಿವ ಪ್ರಲ್ಹಾದ್​ ಜೋಶಿ ಭಾಗಿ

ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಝಲರ್‌ಪತನ್‌ ವಿಧಾನಸಭಾ ಕ್ಷೇತ್ರದಿಂದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಶ್ರೀಮತಿ ವಸುಂಧರಾ ರಾಜೆ ಅವರು ಶನಿವಾರ ನಾಮಪತ್ರ ಸಲ್ಲಿದ್ದಾರೆ. ವೇಳೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಉಪಸ್ಥಿತರಿದ್ದರು.

ಝಲರ್‌ಪತನ್‌ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಸುಂಧರಾ ರಾಜೆ: ಸಚಿವ ಪ್ರಲ್ಹಾದ್​ ಜೋಶಿ ಭಾಗಿ
ನಾಮಪತ್ರ ಸಲ್ಲಿಸಿದ ಬಿಜೆಪಿ ನಾಯಕಿ ವಸುಂದರಾ ರಾಜೆ, ಪ್ರಲ್ಹಾದ್​ ಜೋಶಿ ಉಪಸ್ಥಿತಿ
ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 04, 2023 | 10:13 PM

Share

ಜೈಪುರ, ನವೆಂಬರ್​​​​ 04: ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಝಲರ್‌ಪತನ್‌ ವಿಧಾನಸಭಾ ಕ್ಷೇತ್ರದಿಂದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಶ್ರೀಮತಿ ವಸುಂಧರಾ ರಾಜೆ (Vasundhara Raje) ಅವರು ಶನಿವಾರ ನಾಮಪತ್ರ ಸಲ್ಲಿದ್ದಾರೆ. ವೇಳೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಉಪಸ್ಥಿತರಿದ್ದರು. ಈ ಕುರಿತಾಗಿ ಟ್ವೀಟ್ ಮಾಡಿರುವ ಸಚಿವ ಪ್ರಲ್ಹಾದ್​ ಜೋಶಿ, ರಾಜಸ್ಥಾನ ಝಲ್ರಾಪಾಟನ್ ವಿಧಾನಸಭಾ ಕ್ಷೇತ್ರದಿಂದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಶ್ರೀಮತಿ ವಸುಂಧರಾ ರಾಜೆ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಜೊತೆಗೆ ಭಾಗವಹಿಸಿದೆನು ಎಂದು ಬರೆದುಕೊಂಡಿದ್ದಾರೆ.

ರಾಜಸ್ಥಾನದಲ್ಲಿ ಸುಸ್ಥಿರ ಸರಕಾರ ಹಾಗೂ ಜನಪರ ಆಡಳಿತ ನೀಡಲು ಈ ಬಾರಿ ಭಾರತೀಯ ಜನತಾ ಪಕ್ಷದ ಸರಕಾರ ರಚಿಸುವತ್ತ, ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕಿ ಶ್ರೀಮತಿ ವಸುಂಧರಾ ರಾಜೆ ಸೇರಿದಂತೆ ನಮ್ಮ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದೆನು. ನಾಮನಿರ್ದೇಶನಕ್ಕೆ ನಮ್ಮ ಉತ್ಸಾಹಿ ಕಾರ್ಯಕರ್ತರೊಂದಿಗೆ ಅವರು ಮತ್ತು ಇತರೆ ಹಿರಿಯ ನಾಯಕರೊಂದಿಗೆ ಭಾಗವಹಿಸಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್​ 

ಐದು ವರ್ಷ ಆಡಳಿತ ನಡೆಸಿದ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರಕಾರ ಜನರಿಗೆ ಅನುಕೂಲವಾಗುವಂತೆ ಯಾವ ಕೆಲಸವನ್ನೂ ಮಾಡಿಲ್ಲ. ಈಗ ಚುನಾವಣೆ ಬಂದಾಗ ಉಚಿತ ಘೋಷಣೆ ಮಾಡಿ ಜನರನ್ನು ಆಕರ್ಷಿಸುವ ಕೆಲಸ ಮಾಡುತ್ತಿದೆ. ಇದು ಖಂಡಿತವಾಗಿಯೂ ಫಲಿಸುವುದಿಲ್ಲ, ಯಾಕೆಂದರೆ ಜನರು ಬುದ್ಧಿವಂತರಿದ್ದಾರೆ ಮತ್ತು ಕಾಂಗ್ರೆಸಿಗರ ಜನವಿರೋಧಿ ಆಡಳಿತಕ್ಕೆ ಮುಕ್ತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ದೊಡ್ಡ ಗೆಲುವು ಸಾಧಿಸಲಿದೆ: ವಸುಂಧರಾ ರಾಜೆ

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಶ್ರೀಮತಿ ವಸುಂಧರಾ ರಾಜೆ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:00 pm, Sat, 4 November 23

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ