AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Politics: ಹಾಲು, ನಿಂಬೆ ರಸ ಒಟ್ಟಾಗಲು ಸಾಧ್ಯವೇ? ಅಶೋಕ್ ಗೆಹ್ಲೋಟ್ ಜತೆಗಿನ ಒಳ ಒಪ್ಪಂದ ತಿರಸ್ಕರಿಸಿದ ವಸುಂಧರಾ ರಾಜೆ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot)​ ಜತೆಗಿನ ಒಳ ಒಪ್ಪಂದದ ಬಗೆಗಿನ ಆರೋಪಗಳನ್ನು ಬಿಜೆಪಿ ನಾಯಕಿ ವಸುಂಧರಾ ರಾಜೆ(Vasundhara Raje) ತಳ್ಳಿ ಹಾಕಿದ್ದಾರೆ.

Rajasthan Politics: ಹಾಲು, ನಿಂಬೆ ರಸ ಒಟ್ಟಾಗಲು ಸಾಧ್ಯವೇ? ಅಶೋಕ್ ಗೆಹ್ಲೋಟ್ ಜತೆಗಿನ ಒಳ ಒಪ್ಪಂದ ತಿರಸ್ಕರಿಸಿದ ವಸುಂಧರಾ ರಾಜೆ
ವಸುಂಧರಾ ರಾಜೆ
ನಯನಾ ರಾಜೀವ್
|

Updated on:Apr 21, 2023 | 10:04 AM

Share

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot)​ ಜತೆಗಿನ ಒಳ ಒಪ್ಪಂದದ ಬಗೆಗಿನ ಆರೋಪಗಳನ್ನು ಬಿಜೆಪಿ ನಾಯಕಿ ವಸುಂಧರಾ ರಾಜೆ(Vasundhara Raje) ತಳ್ಳಿ ಹಾಕಿದ್ದಾರೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕಿ ವಸುಂಧರಾ ರಾಜೆ ಅವರು ಕಾಂಗ್ರೆಸ್ ನಾಯಕ ಮತ್ತು ಸಿಎಂ ಅಶೋಕ್ ಗೆಹ್ಲೋಟ್ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಚಿನ್ ಪೈಲಟ್ ಆರೋಪಿಸಿದ್ದರು.

ಹಾಲು ಹಾಗೂ ನಿಂಬೆ ರಸ ಎಂದಾದರೂ ಒಂದಾಗಲೂ ಸಾಧ್ಯವೇ ಎಂದಿದ್ದಾರೆ. ಶ್ರೀಗಂಗಾನಗರ ಜಿಲ್ಲೆಯ ಸೂರತ್‌ಗಢ ಪಟ್ಟಣದ ಜಂಭೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು ಮತ್ತು ನಿಂಬೆ ರಸ ಎಂದಾದರೂ ಮಿಶ್ರಣ ಮಾಡಬಹುದೇ ಎಂದು ಹೇಳಿದ್ದಾರೆ.

ಉದ್ದೇಶಪೂರ್ವಕವಾಗಿಯೇ ಅಪ ಪ್ರಚಾರ ಮಾಡುತ್ತಿದ್ದಾರೆ, ವಸುಂಧರಾ ರಾಜೆ ಹಾಗೂ ಅಶೋಕ್ ಗೆಹ್ಲೋಟ್ ಭೇಟಿಯಾಗಿದ್ದಾರೆ, ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಯಾರ ಸಿದ್ಧಾಂತ, ತತ್ವಗಳು, ಭಾಷೆ ಯಾವುದರಲ್ಲೂ ಹೊಂದಾಣಿಕೆ ಇಲ್ಲವೋ ಅವರ ಜತೆ ಒಪ್ಪಂದ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಈ ಬಾರಿ ಸಚಿನ್ ಪೈಲಟ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ವಸುಂಧರಾ ರಾಜೆ ಹೇಳಿದ್ದರು, ಹಾಗಾಗಿ ಅಶೋಕ್ ಗೆಹ್ಲೋಟ್ ಹಾಗೂ ವಸುಂಧರಾ ರಾಜೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಜೈಪುರದಲ್ಲಿ ಗೆಹ್ಲೋಟ್ ಸರ್ಕಾರವನ್ನು ಗುರಿಯಾಗಿಸಿಟ್ಟುಕೊಂಡು ಉಪವಾಸ ಸತ್ಯಾಗ್ರಹ ಸತ್ಯಾಗ್ರಹ ನಡೆಸಿದ್ದರು.

ಬಿಜೆಪಿ ನಾಯಕಿ ಹಾಗೂ ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದರು. 2018ರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಮುಖ್ಯಮಂತ್ರಿ ಪದವಿಗೆ ಸಂಬಂಧಿಸಿದಂತೆ ಗೆಹ್ಲೋಟ್ ಹಾಗೂ ಪೈಲಟ್ ನಡುವೆ ಭಿನ್ನಾಭಿಪ್ರಾಯಗಳು ಎದ್ದಿವೆ.

ರಾಜ್ಯದಲ್ಲಿ ನಾಯಕತ್ವ ಬದಲಾಗಬೇಕು ಎಂದು 2022ರ ಜುಲೈನಲ್ಲಿ ಆಗ್ರಹಿಸಿ ಪೈಲಟ್ ಹಾಗೂ ಅವರ ಬೆಂಬಲಿಗ 18 ಶಾಸಕರು ಬಹಿರಂಗವಾಗಿಯೇ ಬಂಡಾಯವೆದ್ದಿದ್ದರು. ಇದು ರಾಜ್ಯದಲ್ಲಿ 1 ತಿಂಗಳ ಕಾಲ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿತ್ತು.

ಪೈಲಟ್ ವಿರುದ್ಧ ವಾಗ್ದಾಳಿ ನಡೆಸಿದ್ದ ಗೆಹ್ಲೋಟ್, ನನ್ನ ಸರ್ಕಾರ ಉರುಳಿಸಲು ಪೈಲಟ್ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದರು. ಕೆಲ ತಿಂಗಳುಗಳ ಹಿಂದೆಯೂ ಪೈಲಟ್ ನಂಬಿಕೆ ದ್ರೋಹಿ ಎಂದು ಗೆಹ್ಲೋಟ್ ಹೇಳಿಕೆ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:04 am, Fri, 21 April 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ