ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot) ಜತೆಗಿನ ಒಳ ಒಪ್ಪಂದದ ಬಗೆಗಿನ ಆರೋಪಗಳನ್ನು ಬಿಜೆಪಿ ನಾಯಕಿ ವಸುಂಧರಾ ರಾಜೆ(Vasundhara Raje) ತಳ್ಳಿ ಹಾಕಿದ್ದಾರೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕಿ ವಸುಂಧರಾ ರಾಜೆ ಅವರು ಕಾಂಗ್ರೆಸ್ ನಾಯಕ ಮತ್ತು ಸಿಎಂ ಅಶೋಕ್ ಗೆಹ್ಲೋಟ್ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಚಿನ್ ಪೈಲಟ್ ಆರೋಪಿಸಿದ್ದರು.
ಹಾಲು ಹಾಗೂ ನಿಂಬೆ ರಸ ಎಂದಾದರೂ ಒಂದಾಗಲೂ ಸಾಧ್ಯವೇ ಎಂದಿದ್ದಾರೆ. ಶ್ರೀಗಂಗಾನಗರ ಜಿಲ್ಲೆಯ ಸೂರತ್‌ಗಢ ಪಟ್ಟಣದ ಜಂಭೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು ಮತ್ತು ನಿಂಬೆ ರಸ ಎಂದಾದರೂ ಮಿಶ್ರಣ ಮಾಡಬಹುದೇ ಎಂದು ಹೇಳಿದ್ದಾರೆ.
ಉದ್ದೇಶಪೂರ್ವಕವಾಗಿಯೇ ಅಪ ಪ್ರಚಾರ ಮಾಡುತ್ತಿದ್ದಾರೆ, ವಸುಂಧರಾ ರಾಜೆ ಹಾಗೂ ಅಶೋಕ್ ಗೆಹ್ಲೋಟ್ ಭೇಟಿಯಾಗಿದ್ದಾರೆ, ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಯಾರ ಸಿದ್ಧಾಂತ, ತತ್ವಗಳು, ಭಾಷೆ ಯಾವುದರಲ್ಲೂ ಹೊಂದಾಣಿಕೆ ಇಲ್ಲವೋ ಅವರ ಜತೆ ಒಪ್ಪಂದ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಈ ಬಾರಿ ಸಚಿನ್ ಪೈಲಟ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ವಸುಂಧರಾ ರಾಜೆ ಹೇಳಿದ್ದರು, ಹಾಗಾಗಿ ಅಶೋಕ್ ಗೆಹ್ಲೋಟ್ ಹಾಗೂ ವಸುಂಧರಾ ರಾಜೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ.
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಜೈಪುರದಲ್ಲಿ ಗೆಹ್ಲೋಟ್ ಸರ್ಕಾರವನ್ನು ಗುರಿಯಾಗಿಸಿಟ್ಟುಕೊಂಡು ಉಪವಾಸ ಸತ್ಯಾಗ್ರಹ ಸತ್ಯಾಗ್ರಹ ನಡೆಸಿದ್ದರು.
ಬಿಜೆಪಿ ನಾಯಕಿ ಹಾಗೂ ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದರು. 2018ರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಮುಖ್ಯಮಂತ್ರಿ ಪದವಿಗೆ ಸಂಬಂಧಿಸಿದಂತೆ ಗೆಹ್ಲೋಟ್ ಹಾಗೂ ಪೈಲಟ್ ನಡುವೆ ಭಿನ್ನಾಭಿಪ್ರಾಯಗಳು ಎದ್ದಿವೆ.
ರಾಜ್ಯದಲ್ಲಿ ನಾಯಕತ್ವ ಬದಲಾಗಬೇಕು ಎಂದು 2022ರ ಜುಲೈನಲ್ಲಿ ಆಗ್ರಹಿಸಿ ಪೈಲಟ್ ಹಾಗೂ ಅವರ ಬೆಂಬಲಿಗ 18 ಶಾಸಕರು ಬಹಿರಂಗವಾಗಿಯೇ ಬಂಡಾಯವೆದ್ದಿದ್ದರು. ಇದು ರಾಜ್ಯದಲ್ಲಿ 1 ತಿಂಗಳ ಕಾಲ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿತ್ತು.
ಪೈಲಟ್ ವಿರುದ್ಧ ವಾಗ್ದಾಳಿ ನಡೆಸಿದ್ದ ಗೆಹ್ಲೋಟ್, ನನ್ನ ಸರ್ಕಾರ ಉರುಳಿಸಲು ಪೈಲಟ್ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದರು. ಕೆಲ ತಿಂಗಳುಗಳ ಹಿಂದೆಯೂ ಪೈಲಟ್ ನಂಬಿಕೆ ದ್ರೋಹಿ ಎಂದು ಗೆಹ್ಲೋಟ್ ಹೇಳಿಕೆ ನೀಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:04 am, Fri, 21 April 23