Veer Gatha Project: ವೀರ ಗಾಥಾ ಯೋಜನೆ 3.0: 1.36 ಕೋಟಿಗೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಭಾಗಿ

Veer Gatha Project: ವೀರ್ ಗಾಥಾ ಯೋಜನೆಯ 3 ನೇ ಆವೃತ್ತಿಯಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 1.36 ಕೋಟಿಗೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು ಎಂದು ಶಿಕ್ಷಣ ಸಚಿವಾಲಯ ಪ್ರಕಟಣೆ ಹೊರಡಿಸಲಾಗಿದೆ. ಪ್ರತಿ ವಿಜೇತರಿಗೆ ರೂ. ಹತ್ತು ಸಾವಿರ ರೂ. ಬಹುಮಾನ ನೀಡಲಾಗುತ್ತಿದೆ. 

Veer Gatha Project: ವೀರ ಗಾಥಾ ಯೋಜನೆ 3.0: 1.36 ಕೋಟಿಗೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಭಾಗಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Oct 05, 2023 | 8:50 PM

ಹೊಸದೆಹಲಿ, ಅಕ್ಟೋಬರ್​​ 05: ವೀರ್ ಗಾಥಾ ಯೋಜನೆಯ (Veer Gatha Project) 3 ನೇ ಆವೃತ್ತಿಯಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 1.36 ಕೋಟಿಗೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಈ ಕುರಿತಾಗಿ ಶಿಕ್ಷಣ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಸಶಸ್ತ್ರ ಪಡೆ ಅಧಿಕಾರಿಗಳು, ಸಿಬ್ಬಂದಿಗಳ ಶೌರ್ಯ ಹಾಗೂ ತ್ಯಾಗವನ್ನು ವಿದ್ಯಾರ್ಥಿಗಳು ಕವಿತೆಗಳು, ವರ್ಣಚಿತ್ರಗಳು, ಪ್ರಬಂಧಗಳು ಮತ್ತು ವಿಡಿಯೋಗಳ ಮುಖಾಂತರ ಗೌರವಿಸಿದ್ದಾರೆ ಎಂದು ತಿಳಿಸಿದೆ.

ವೀರ್ ಗಾಥಾ ಯೋಜನೆಯನ್ನು 2021 ರಲ್ಲಿ ಶೌರ್ಯ ಪ್ರಶಸ್ತಿಗಳ ಪೋರ್ಟಲ್ (ಜಿಎಪಿ) ಅಡಿಯಲ್ಲಿ ಸ್ಥಾಪಿಸಲಾಗಿದೆ. ಇದು ಶೌರ್ಯ ಪ್ರಶಸ್ತಿ ಪುರಸ್ಕೃತರ ವಿವರಗಳನ್ನು ಮತ್ತು ಅವರ ಧೈರ್ಯಶಾಲಿ ಜೀವನ ಕಥೆಗಳನ್ನು ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಉತ್ಸಾಹವನ್ನು ಹೆಚ್ಚಿಸಲು ಮತ್ತು ಹುಟ್ಟುಹಾಕುವ ಗುರಿಯನ್ನು ಹೊಂದಿದೆ. ಜೊತೆಗೆ ನಾಗರಿಕ ಪ್ರಜ್ಞೆಯ ಮೌಲ್ಯಗಳನ್ನು ಸಹ ಹೊಂದಿದೆ. ಶೌರ್ಯ ಪ್ರಶಸ್ತಿ ವಿಜೇತರ ಆಧಾರದ ಮೇಲೆ ಸೃಜನಶೀಲ ಯೋಜನೆಗಳು, ಚಟುವಟಿಕೆಗಳನ್ನು ಮಾಡಲು ಶಾಲಾ ವಿದ್ಯಾರ್ಥಿಗಳಿಗೆ ವೇದಿಕೆಯನ್ನು ಒದಗಿಸುವ ಉದ್ದೇಶ ವೀರ್ ಗಾಥಾ ಯೋಜನೆ ಹೊಂದಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಎರಡು ಮನೆಗಳಿಗೆ ಬೆಂಕಿ

ವೀರ್ ಗಾಥಾ ಯೋಜನೆಯ ಎರಡು ಆವೃತ್ತಿಗಳನ್ನು ಈಗಾಗಲೇ ಕ್ರಮವಾಗಿ 2021 ಮತ್ತು 2022 ರಲ್ಲಿ ನಡೆಸಲಾಗಿದೆ. ವೀರ್ ಗಾಥಾ ಯೋಜನೆ 3.0 ಅಡಿಯಲ್ಲಿ, ಈ ಕೆಳಗಿನ ಚಟುವಟಿಕೆಗಳನ್ನು ಇಲ್ಲಿಯವರೆಗೆ ನಡೆಸಲಾಗಿದೆ.

ಶಾಲಾ ಹಂತದಲ್ಲಿನ ಚಟುವಟಿಕೆಗಳು

ಶಾಲೆಗಳಲ್ಲಿ ವಿವಿಧ ಯೋಜನೆಗಳು, ಚಟುವಟಿಕೆಗಳನ್ನು ನಡೆಸಲಾಗಿದೆ. ಪ್ರತಿ ಶಾಲೆಯಿಂದ ಒಟ್ಟು 04 ಅತ್ಯುತ್ತಮ ನಮೂದುಗಳನ್ನು MyGov ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಏಕಕಾಲದಲ್ಲಿ, ನಮ್ಮ ದೇಶದ ಶೌರ್ಯ ಪ್ರಶಸ್ತಿ ವಿಜೇತರ ಬಗ್ಗೆ ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು, ರಕ್ಷಣಾ ಸಚಿವಾಲಯವು ತನ್ನ ಕ್ಷೇತ್ರ ಸಂಸ್ಥೆಗಳು ಅಥವಾ ಸೇನೆ, ನೌಕಾಪಡೆ, ವಾಯುಪಡೆಯ ಮೂಲಕ ಶಾಲೆಗಳಿಗೆ ವರ್ಚುವಲ್​, ಮುಖಾಮುಖಿ ಜಾಗೃತಿ ಕಾರ್ಯಕ್ರಮಗಳು, ಅಧಿವೇಶನಗಳನ್ನು ಆಯೋಜಿಸಿತ್ತು.

ಇದನ್ನೂ ಓದಿ: 100 ರೂ. ತುಂಬಾ ಚಿಕ್ಕ ಲಂಚ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗೆ ಬಾಂಬೆ ಹೈಕೋರ್ಟ್​ ರಿಲೀಫ್

ವೀರ್​ ಗಾಥಾ ಯೋಜನೆ ಮೊದಲ ಆವೃತ್ತಿಯಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರೆ, 19 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎರಡನೇ ಆವೃತ್ತಿ ಭಾಗವಹಿಸಿದ್ದರು.

ವೀರ್ ಗಾಥಾ ಯೋಜನೆಯ ಮೂರನೇ ಆವೃತ್ತಿಯಲ್ಲಿ 100 ವಿಜೇತರನ್ನು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ. ಶಿಕ್ಷಣ ಸಚಿವಾಲಯ ಮತ್ತು ನವದೆಹಲಿಯ ರಕ್ಷಣಾ ಸಚಿವಾಲಯವು ಜಂಟಿಯಾಗಿ ಮಾಡಲಾಗುತ್ತದೆ ವಿಜೇತರನ್ನು ಸನ್ಮಾನಿಸಲಿದೆ. ಜೊತೆಗೆ ಪ್ರತಿ ವಿಜೇತರಿಗೆ ರೂ. ಹತ್ತು ಸಾವಿರ ರೂ. ಬಹುಮಾನ ನೀಡಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ