AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ನಿಲ್ದಾಣದಲ್ಲಿ ನಿಲುಗಡೆ ಮರೆತ ನಂತರ ವೇನಾಡ್ ಎಕ್ಸ್​​ಪ್ರೆಸ್​​ನ್ನು 700 ಮೀಟರ್ ರಿವರ್ಸ್ ಚಲಾಯಿಸಿದ ಲೋಕೋ ಪೈಲಟ್

ಮಾವೇಲಿಕ್ಕರ ಮತ್ತು ಚೆಂಗನ್ನೂರು ನಿಲ್ದಾಣಗಳ ನಡುವೆ ಇರುವ ಸಣ್ಣ ನಿಲ್ದಾಣವಾದ ಚೆರಿಯನಾಡ್ ನಿಲ್ದಾಣದಲ್ಲಿ ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರಿಂದ ಯಾವುದೇ ದೂರುಗಳು ಬಂದಿಲ್ಲ

ರೈಲು ನಿಲ್ದಾಣದಲ್ಲಿ ನಿಲುಗಡೆ ಮರೆತ ನಂತರ ವೇನಾಡ್ ಎಕ್ಸ್​​ಪ್ರೆಸ್​​ನ್ನು 700 ಮೀಟರ್ ರಿವರ್ಸ್ ಚಲಾಯಿಸಿದ ಲೋಕೋ ಪೈಲಟ್
ವೇನಾಡ್ ಎಕ್ಸ್ ಪ್ರೆಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 22, 2023 | 3:09 PM

Share

ಪ್ರಯಾಣಿಕರು ಹತ್ತಲು ಕಾಯುತ್ತಿದ್ದ ರೈಲು ನಿಲ್ದಾಣದಲ್ಲಿ ನಿಲುಗಡೆ ಮಿಸ್ ಮಾಡಿದ ಕೇರಳದ (Kerala) ರೈಲೊಂದು 500 ಮೀಟರ್‌ಗೂ ಹೆಚ್ಚು ಹಿಮ್ಮುಖವಾಗಿ ಚಲಿಸಿದ ಘಟನೆ ನಡೆದಿದೆ. ಕೇರಳದ ಆಲಪ್ಪುಳ (Alappuzha) ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಶೋರನೂರ್‌ಗೆ ತೆರಳುತ್ತಿದ್ದ ವೇನಾಡ್ ಎಕ್ಸ್‌ಪ್ರೆಸ್‌ನ(Venad Express) ಲೋಕೋ ಪೈಲಟ್, ಚೆರಿಯನಾಡ್ ಎಂಬ ಸಣ್ಣ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಮರೆತಿದ್ದಾರೆ. ಈ ತಪ್ಪು ಅರಿವಿಗೆ ಬಂದ ಕೂಡಲೇ ಲೋಕೋ ಪೈಲಟ್ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರಿಗಾಗಿ ರೈಲನ್ನು 700 ಮೀಟರ್‌ ರಿವರ್ಸ್ ಚಲಾಯಿಸಿದ್ದಾರೆ.

ಮಾವೇಲಿಕ್ಕರ ಮತ್ತು ಚೆಂಗನ್ನೂರು ನಿಲ್ದಾಣಗಳ ನಡುವೆ ಇರುವ ಸಣ್ಣ ನಿಲ್ದಾಣವಾದ ಚೆರಿಯನಾಡ್ ನಿಲ್ದಾಣದಲ್ಲಿ ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರಿಂದ ಯಾವುದೇ ದೂರುಗಳು ಬಂದಿಲ್ಲ. ಏಕೆಂದರೆ ಅವರಲ್ಲಿ ಯಾರೂ ಯಾವುದೇ ಅನಾನುಕೂಲತೆಯನ್ನು ಎದುರಿಸಲಿಲ್ಲ. ರೈಲು ಸರಿಯಾದ ಸಮಯಕ್ಕೆ ತನ್ನ ಗಮ್ಯಸ್ಥಾನವನ್ನು ತಲುಪಿತು.

ಇದನ್ನೂ ಓದಿ: ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದೆ: ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಖರ್ಗೆ

ಚೆರಿಯನಾಡು ನಿಲ್ದಾಣದಲ್ಲಿ ಸಿಗ್ನಲ್ ಅಥವಾ ಸ್ಟೇಷನ್ ಮಾಸ್ಟರ್ ಇಲ್ಲ. ಹಾಗಾಗಿ ಲೊಕೊ ಪೈಲಟ್‌ನ ನಿಲ್ಲಿಸದೇ ಹೋಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕೋ ಪೈಲಟ್‌ಗಳಿಂದ ವಿವರಣೆ ಕೇಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್