ದೆಹಲಿ: ಫಿಲ್ಮಿಸ್ತಾನ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಬಂಧ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಳಗಿನ ಜಾವ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ದುರಂತದಲ್ಲಿ 43 ಮಂದಿ ಮೃತಪಟ್ಟಿದ್ದಾರೆ.
ಸುಮಾರು 200ಕ್ಕೂ ಹೆಚ್ಚು ಮಂದಿ ಬಿಹಾರದ ಮೂಲದ ಕೆಲಸಗಾರರು ಫ್ಯಾಕ್ಟರಿಯಲ್ಲೇ ಮಲಗಿದ್ರು ಎನ್ನಲಾಗಿದೆ. 150ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥರಿಗೆ LNJP, RML ಸೇರಿ 5 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎನ್ಡಿಆರ್ಎಫ್ ತಂಡ ಸಹ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.
ಅಗ್ನಿ ಅವಘಡ ಅತ್ಯಂತ ದುರಂತ ಸಂಗತಿ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ಸಿಬ್ಬಂದಿ ಒಳ್ಳೇ ಕೆಲಸ ಮಾಡ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
V v tragic news. Rescue operations going on. Firemen doing their best. Injured are being taken to hospitals. https://t.co/nWwoNB4u3Q
— Arvind Kejriwal (@ArvindKejriwal) December 8, 2019
Published On - 10:52 am, Sun, 8 December 19