Sitaram Yechury Death: ತೀವ್ರ ಅನಾರೋಗ್ಯದಿಂದ ಹಿರಿಯ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನಿಧನ

|

Updated on: Sep 12, 2024 | 4:51 PM

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದ ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಇಂದು ನಿಧನರಾಗಿದ್ದಾರೆ.

Sitaram Yechury Death: ತೀವ್ರ ಅನಾರೋಗ್ಯದಿಂದ ಹಿರಿಯ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನಿಧನ
ಸೀತಾರಾಂ ಯೆಚೂರಿ
Follow us on

ನವದೆಹಲಿ: ಹಿರಿಯ ಎಡ ಪಂಥೀಯ ನಾಯಕ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವರ್ಷವಾಗಿತ್ತು. ತೀವ್ರ ಅನಾರೋಗ್ಯದಿಂದ ಕೆಲವು ದಿನಗಳಿಂದ ಸೀತಾರಾಂ ಯೆಚೂರಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ಗೆ ದಾಖಲಾಗಿದ್ದ ಸಿಪಿಐ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದರು. ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಅವರು ತೀವ್ರ ಉಸಿರಾಟದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.


ಇದನ್ನೂ ಓದಿ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್​ಗೆ ಮುಂಬೈ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ

ತೀವ್ರ ಜ್ವರದಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣದಿಂದ ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೀತಾರಾಂ ಯೆಚೂರಿ ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.


ಮೂರು ದಶಕಗಳಿಂದ ಸಿಪಿಎಂನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ ಪಾಲಿಟ್‌ಬ್ಯುರೊ ಸದಸ್ಯರಾಗಿದ್ದ ಸೀತಾರಾಂ ಯೆಚೂರಿ ಅವರು 2005ರಿಂದ 2017ರವರೆಗೆ ರಾಜ್ಯಸಭಾ ಸಂಸದರಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Thu, 12 September 24