AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ದಿಗ್ವಿಜಯ ಸಿಂಗ್ ನಾಳೆ ನಾಮಪತ್ರ ಸಲ್ಲಿಕೆ ಸಾಧ್ಯತೆ

ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯರಾದ ದಿಗ್ವಿಜಯ್ ಸಿಂಗ್ ಪಕ್ಷದ ಮುಖ್ಯಸ್ಥರಾಗಲು ನನಗೆ ಆಸಕ್ತಿಯಿಲ್ಲ ಎಂದು ಈ ಹಿಂದೆ ಹೇಳಿದ್ದರು.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ದಿಗ್ವಿಜಯ ಸಿಂಗ್ ನಾಳೆ ನಾಮಪತ್ರ ಸಲ್ಲಿಕೆ ಸಾಧ್ಯತೆ
ದಿಗ್ವಿಜಯ್ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 28, 2022 | 5:18 PM

Share

ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ (Digvijaya Singh) ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ (Congress president Poll) ನಾಮಪತ್ರ ಸಲ್ಲಿಸುವ ಸಾಧ್ಯತೆ  ಇದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯರಾದ ಸಿಂಗ್ ಪಕ್ಷದ ಮುಖ್ಯಸ್ಥರಾಗಲು ನನಗೆ ಆಸಕ್ತಿಯಿಲ್ಲ ಎಂದು ಈ ಹಿಂದೆ ಹೇಳಿದ್ದರು. ಇಂದು ರಾತ್ರಿ ದೆಹಲಿಗೆ ಮರಳಲಿರುವ ದಿಗ್ವಿಜಯ್ ಸಿಂಗ್ ಸೆಪ್ಟೆಂಬರ್ 30 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಂಡಾಯದ ನಂತರ ಅಶೋಕ್ ಗೆಹ್ಲೋಟ್ (Ashok Gehlot) ಅವರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಅನುಮಾನ ಹುಟ್ಟಿಸಿದ  ನಂತರ ದಿಗ್ವಿಜಯ್ ಸಿಂಗ್, ಕೆಸಿ ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಹೆಸರುಗಳು ಚುನಾವಣಾ ರೇಸ್​​ ನಲ್ಲಿದೆ. ಅಕ್ಟೋಬರ್ 17 ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷರ ಚುನಾವಣೆಗೆ ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಕೂಡ ಕಣದಲ್ಲಿದ್ದಾರೆ.

ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂಬ ನಿರ್ಧಾರದಲ್ಲಿ ರಾಹುಲ್ ಗಾಂಧಿ ದೃಢವಾಗಿದ್ದಾರೆ. 2019 ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಸತತ ಎರಡನೇ ಸೋಲು ಅನುಭವಿಸಿದ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಹಂಗಾಮಿ ಅಧ್ಯಕ್ಷರಾಗಿ ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಂಡ ಸೋನಿಯಾ ಗಾಂಧಿ, ಜಿ -23 ಎಂದು ಉಲ್ಲೇಖಿಸಲಾದ ನಾಯಕರ ಒಂದು ವಿಭಾಗದ ಬಹಿರಂಗ ಬಂಡಾಯದ ನಂತರ ಆಗಸ್ಟ್ 2020 ರಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದರು, ಆದರೆ ಸಿಡಬ್ಲ್ಯೂಸಿ ಅವರನ್ನು ಅಧ್ಯಕ್ಷರಾಗಿ ಮುಂದುವರಿಸಲು ಒತ್ತಾಯಿಸಿತ್ತು.

ಎಲ್ಲವೂ ಒಂದೆರಡು ದಿನದಲ್ಲಿ ಪರಿಹರಿಸಲ್ಪಡುತ್ತದೆ: ರಾಜಸ್ಥಾನ ಬಿಕ್ಕಟ್ಟು ಬಗ್ಗೆ ವೇಣುಗೋಪಾಲ್

ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಬಗ್ಗೆ ಸುದ್ದಿಸಂಸ್ಥೆ ಎಎನ್ಐ ಜತೆ ಮಾತನಾಡಿದ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್, ರಾಜಸ್ಥಾನದಲ್ಲಿ ನಾಟಕ ನಡೆಯುತ್ತಿಲ್ಲ. ಒಂದೆರಡುದಿನಗಳಲ್ಲಿ ಎಲ್ಲ ಪರಿಹರಿಸಲ್ಪಡುತ್ತದೆ. ಮಾಧ್ಯಮದವರು ಇದನ್ನು ನಾಟಕದಂತೆ ನೋಡಬಹುದು. ಕನಿಷ್ಠ ಪಕ್ಷ ನೀವು ಐಎನ್ ಸಿ ಅಧ್ಯಕ್ಷ ಚುನಾವಣೆ ಬಗ್ಗೆಯಾದರೂ ಮಾತನಾಡುತ್ತೀರಲ್ಲ. ನಾವು ಪ್ರಜಾಸತ್ತಾತ್ಮಕ ರೀತಿಯಲ್ಲಿ ಮಾಡುತ್ತಿದ್ದೇವೆ. ಅದು ಎರಡುದಿನಗಳಲ್ಲಿ ಸುಗಮವಾಗಿ ಮುಗಿಯುತ್ತದೆ ಎಂದಿದ್ದಾರೆ.

ರಾಹುಲ್ ಗಾಂಧಿ ಕಾಂಗ್ರೆಸ್ ನ್ನು ಸಂಪೂರ್ಣ ಹಾಳು ಮಾಡಿದರು: ಹರ್ಷ್ ಮಹಾಜನ್

ಕಾಂಗ್ರೆಸ್ ಗೆ ದಿಶೆ ಇಲ್ಲದಂತಾಗಿದೆ. ಹಿಮಾಚಲ ಪ್ರದೇಶದ ಕಾಂಗ್ರೆಸ್ ಗೆ ನಾಯಕರೂ ಇಲ್ಲ ಗುರಿಯೂ ಇಲ್ಲ. ರಾಷ್ಚ್ರೀಯ ಮಟ್ಟದಲ್ಲಿ ಅಳಿದುಳಿದಿರುವ ಕಾಂಗ್ರೆಸ್ ನ್ನು ರಾಹುಲ್ ಗಾಂಧಿ ಸಂಪೂರ್ಣವಾಗಿ ನಾಶ ಮಾಡಿದ್ದಾರೆ ಎಂದು ಹಿಮಾಚಲ ಪ್ರದೇಶದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿದ್ದ ಹರ್ಷ್ ಮಹಾಜನ್ ಹೇಳಿದ್ದಾರೆ. ಹರ್ಷ್ ಅವರು ಇಂದು ಬಿಜೆಪಿ ಸೇರಿದ್ದಾರೆ.

ಗೆಹ್ಲೋಟ್ ಇಂದು ರಾಜೀನಾಮೆ ನೀಡಲ್ಲ

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿಷ್ಠಾವಂತ ಸಚಿವ ಪಿಎಸ್ ಖಚರಿಯಾವಾಸ್, “ಗೆಹ್ಲೋಟ್ ಅವರು ಇಂದು ಸಂಜೆ ದೆಹಲಿಗೆ ಹೋಗಲಿದ್ದಾರೆ. 102 ಶಾಸಕರ ಅಭಿಪ್ರಾಯವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ತಿಳಿಸಲಿದ್ದಾರೆ. ಗೆಹ್ಲೋಟ್ ಇಂದು ರಾಜೀನಾಮೆ ನೀಡುತ್ತಿಲ್ಲ, ಅದರ ಬಗ್ಗೆ ಯಾವುದೇ ಮಾತುಕತೆ ಇಲ್ಲ ಎಂದಿದ್ದಾರೆ.

ಸೋನಿಯಾ ಗಾಂಧಿ ಹೇಳಿದರೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಸ್ಪರ್ಧೆ

ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಸ್ಪರ್ಧಿಸುವಂತೆ ಕೇಳಿದರೆ ಎಐಸಿಸಿ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಹಿರಿಯ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ ಹಿಂಜರಿಯುವುದಿಲ್ಲ ಎಂದು ಹಿರಿಯ ನಾಯಕನ ಆಪ್ತ ಮೂಲಗಳು ತಿಳಿಸಿವೆ. ಅಕ್ಟೋಬರ್ 17 ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಮಾಜಿ ಕೇಂದ್ರ ಸಚಿವ ಹಾಗೂ ನೆಹರೂ-ಗಾಂಧಿ ಕುಟುಂಬದ ನಿಷ್ಠಾವಂತ ಖರ್ಗೆ ಅವರಂತಹ ನಾಯಕರ ಹೆಸರು ಕೇಳಿಬರುತ್ತಿದ್ದು ನಾಮನಿರ್ದೇಶನ ಪ್ರಕ್ರಿಯೆಯು ಸೆಪ್ಟೆಂಬರ್ 30 ರವರೆಗೆ ನಡೆಯಲಿದೆ.

Published On - 4:36 pm, Wed, 28 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್