AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ, ಜೆಪಿ ನಡ್ಡಾಗೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ನೀಡಿದ VHP

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಭು ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುತ್ತಿರುವ ವಿಎಚ್​ಪಿ ಮತ್ತು ರಾಮ ಮಂದಿರ ನಿರ್ಮಾಣದ ಟ್ರಸ್ಟ್ ಇದೀಗ ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಆಹ್ವಾನ ನೀಡಿದೆ.

ಅಮಿತ್ ಶಾ, ಜೆಪಿ ನಡ್ಡಾಗೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ನೀಡಿದ VHP
ಅಮಿತ್ ಶಾ, ನಡ್ಡಾಗೆ ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ನೀಡಿದ ವಿಎಚ್​ಪಿ
TV9 Web
| Updated By: Rakesh Nayak Manchi|

Updated on: Jan 13, 2024 | 10:14 PM

Share

ನವದೆಹಲಿ, ಜ.13: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುತ್ತಿರುವ ವಿಎಚ್​ಪಿ ಮತ್ತು ರಾಮ ಮಂದಿರ ನಿರ್ಮಾಣದ ಟ್ರಸ್ಟ್ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah), ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಆಹ್ವಾನ ನೀಡಿದೆ.

ಈ ಬಗ್ಗೆ ವಿಶ್ವ ಹಿಂದೂ ಪರಿಷತ್ (ವಿಎಚ್​ಪಿ) ಟ್ವೀಟ್ ಮಾಡಿದ್ದು, ರಾಮ ಮಂದಿರ ನಿರ್ಮಾಣದ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕೊಡಗೆ ಇದೆ. ಈ ಮೂವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನವನ್ನು ಸ್ವೀಕರಿಸಿದ ಜೆಪಿ ನಡ್ಡಾ ಅವರು ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆಗೂ ಮುನ್ನ 11 ದಿನಗಳ ವಿಶೇಷ ವ್ರತ ಆಚರಣೆ, ಮೋದಿ ವಿಡಿಯೋ ಸಂದೇಶ

ವಿಶ್ವ ಹಿಂದೂ ಪರಿಷತ್ ಟ್ವೀಟ್

ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರು ಮಂದಿರ ನಿರ್ಮಾಣ ಕಾರ್ಯ ಮತ್ತು ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದ ಬಗ್ಗೆ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದೊಂದಿಗೆ ಚರ್ಚಿಸಿ ಭೇಟಿ ಮತ್ತು ದರ್ಶನದ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಹೇಳಿದ್ದಾಗಿ ಟ್ವೀಟ್​ನಲ್ಲಿ ವಿಎಚ್​ಪಿ ತಿಳಿಸಿದೆ.

ಜನವರಿ 22 ರಂದು ನಡೆಯಲಿರುವ ಮಹತ್ವದ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ದೇಶದ ವಿವಿಧ ಭಾಗಗಳಿಂದ 11,000 ಕ್ಕೂ ಹೆಚ್ಚು ಅತಿಥಿಗಳನ್ನು ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರು 11 ದಿನಗಳ ವಿಶೇಷ ಆಚರಣೆ ಆರಂಭಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಂದೇಶವನ್ನೂ ರವಾನಿಸಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಳೆ ಸುರಿಯುವುದು ನಿಂತರೂ ನದಿಯಲ್ಲಿ ನೀರಿನ ಪ್ರಮಾಣ ಏರಿಕೆ
ಮಳೆ ಸುರಿಯುವುದು ನಿಂತರೂ ನದಿಯಲ್ಲಿ ನೀರಿನ ಪ್ರಮಾಣ ಏರಿಕೆ
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ