
ನವದೆಹಲಿ, ಜ.13: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುತ್ತಿರುವ ವಿಎಚ್ಪಿ ಮತ್ತು ರಾಮ ಮಂದಿರ ನಿರ್ಮಾಣದ ಟ್ರಸ್ಟ್ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah), ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಆಹ್ವಾನ ನೀಡಿದೆ.
ಈ ಬಗ್ಗೆ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಟ್ವೀಟ್ ಮಾಡಿದ್ದು, ರಾಮ ಮಂದಿರ ನಿರ್ಮಾಣದ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕೊಡಗೆ ಇದೆ. ಈ ಮೂವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನವನ್ನು ಸ್ವೀಕರಿಸಿದ ಜೆಪಿ ನಡ್ಡಾ ಅವರು ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದೆ.
ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆಗೂ ಮುನ್ನ 11 ದಿನಗಳ ವಿಶೇಷ ವ್ರತ ಆಚರಣೆ, ಮೋದಿ ವಿಡಿಯೋ ಸಂದೇಶ
ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರು ಮಂದಿರ ನಿರ್ಮಾಣ ಕಾರ್ಯ ಮತ್ತು ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದ ಬಗ್ಗೆ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದೊಂದಿಗೆ ಚರ್ಚಿಸಿ ಭೇಟಿ ಮತ್ತು ದರ್ಶನದ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಹೇಳಿದ್ದಾಗಿ ಟ್ವೀಟ್ನಲ್ಲಿ ವಿಎಚ್ಪಿ ತಿಳಿಸಿದೆ.
ಜನವರಿ 22 ರಂದು ನಡೆಯಲಿರುವ ಮಹತ್ವದ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ದೇಶದ ವಿವಿಧ ಭಾಗಗಳಿಂದ 11,000 ಕ್ಕೂ ಹೆಚ್ಚು ಅತಿಥಿಗಳನ್ನು ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರು 11 ದಿನಗಳ ವಿಶೇಷ ಆಚರಣೆ ಆರಂಭಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಂದೇಶವನ್ನೂ ರವಾನಿಸಿದ್ದಾರೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ