AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಎಲ್‌ಕೆ ಅಡ್ವಾಣಿ, ಎಂಎಂ ಜೋಶಿಗೆ ವಿಎಚ್‌ಪಿ ಆಹ್ವಾನ

ರಾಮ ಮಂದಿರ ಆಂದೋಲನದ ಪ್ರವರ್ತಕರಾದ ಅಡ್ವಾಣಿ ಜಿ ಮತ್ತು ಮುರಳಿ ಮನೋಹರ್ ಜೋಷಿ ಜಿ ಅವರನ್ನು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ. ಇಬ್ಬರೂ ಬರಲು ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ ಎಂದು ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಎಲ್‌ಕೆ ಅಡ್ವಾಣಿ, ಎಂಎಂ ಜೋಶಿಗೆ ವಿಎಚ್‌ಪಿ ಆಹ್ವಾನ
ಅಡ್ವಾಣಿಗೆ ಆಮಂತ್ರಣ
ರಶ್ಮಿ ಕಲ್ಲಕಟ್ಟ
|

Updated on: Dec 19, 2023 | 8:36 PM

Share

ದೆಹಲಿ ಡಿಸೆಂಬರ್ 19: 1990ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾದ ರಥಯಾತ್ರೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಬಿಜೆಪಿ ದಿಗ್ಗಜರಾದ ಎಲ್‌ಕೆ ಅಡ್ವಾಣಿ (LK Advani) ಮತ್ತು ಮುರಳಿ ಮನೋಹರ ಜೋಶಿ (Murli Manohar Joshi) ಅವರನ್ನು ಅಯೋಧ್ಯೆಯಲ್ಲಿ (Ayodhya) ರಾಮಮಂದಿರದ  (Ram Mandir)ಉದ್ಘಾಟನೆಗೆ ವಿಶ್ವ ಹಿಂದೂ ಪರಿಷತ್ ಆಹ್ವಾನಿಸಿದೆ. ಈ ಹಿರಿಯ ನಾಯಕರ ವಯಸ್ಸನ್ನು ಪರಿಗಣಿಸಿ “ಬರಬೇಡಿ” ಎಂದು ವಿನಂತಿಸಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಯೊಬ್ಬರು ಹೇಳಿದ ಒಂದು ದಿನದ ನಂತರ ಆಹ್ವಾನ ಬಂದಿದೆ. ಜನವರಿ 22 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಜೆಪಿಯ ಹಿರಿಯರು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದರು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಧ್ಯಕ್ಷ ಅಲೋಕ್ ಕುಮಾರ್ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ರಾಮ ಮಂದಿರ ಆಂದೋಲನದ ಪ್ರವರ್ತಕರಾದ ಅಡ್ವಾಣಿ ಜಿ ಮತ್ತು ಮುರಳಿ ಮನೋಹರ್ ಜೋಷಿ ಜಿ ಅವರನ್ನು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ. ಇಬ್ಬರೂ ಬರಲು ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ ಎಂದು ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಥಯಾತ್ರೆಯ ನಂತರ ಕಾಂಗ್ರೆಸ್ ಪ್ರಾಬಲ್ಯ ಹೊಂದಿದ್ದ ದೇಶದ ರಾಜಕೀಯದಲ್ಲಿ ಬಿಜೆಪಿ ಪ್ರಬಲ ಶಕ್ತಿಯಾಯಿತು. ಅಡ್ವಾಣಿ ಅವರಿಗೆ 96 ವರ್ಷ. ಜೋಶಿ ಅವರು ಮುಂದಿನ ತಿಂಗಳು 90 ವರ್ಷಕ್ಕೆ ಕಾಲಿಡಲಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಸೋಮವಾರ ಈ ಕಾರ್ಯಕ್ರಮಕ್ಕೆ ಹಾಜರಾಗದಂತೆ ಹಿರಿಯರಲ್ಲಿ ಮನವಿ ಮಾಡಲಾಗಿದೆ . ಅವರು ಅದಕ್ಕೆ ಒಪ್ಪಿದ್ದಾರೆ ಎಂದು ಹೇಳಿದ್ದರು.

ಇಬ್ಬರೂ (ಸಂಘ) ಕುಟುಂಬದಲ್ಲಿ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು (ಅಯೋಧ್ಯೆಗೆ ಪವಿತ್ರೀಕರಣ ಕಾರ್ಯಕ್ರಮಕ್ಕೆ) ಬರದಂತೆ ವಿನಂತಿಸಲಾಗಿದೆ. ಇಬ್ಬರೂ ನಮ್ಮ ಮನವಿಯನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ:ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಎಲ್​ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಗೈರಾಗುವ ಸಾಧ್ಯತೆ 

ಜನವರಿ 22 ರಂದು ದೇವಸ್ಥಾನದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. 13 ಅಖಾರಾಗಳಿಂದ ಸೇರಿದಂತೆ 4000 ಸಂತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. 2200 ಇತರ ಗಣ್ಯರನ್ನು ಸಹ ಆಹ್ವಾನಿಸಲಾಗಿದೆ. “ಆಧ್ಯಾತ್ಮಿಕ ಗುರು ದಲೈಲಾಮಾ, ಕೇರಳದ ಮಾತಾ ಅಮೃತಾನಂದಮಯಿ, ಯೋಗ ಗುರು ಬಾಬಾ ರಾಮ್‌ದೇವ್, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್, ಅರುಣ್ ಗೋವಿಲ್ (‘ರಾಮಾಯಣ’ ದೂರದರ್ಶನ ಸರಣಿಯಲ್ಲಿ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿದವರು), ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್ ಮತ್ತು ಪ್ರಮುಖ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ಖ್ಯಾತ ಚಿತ್ರಕಲಾವಿದ ವಾಸುದೇವ್ ಕಾಮತ್, ಇಸ್ರೋದ ನಿರ್ದೇಶಕ ನೀಲೇಶ್ ದೇಸಾಯಿ ಸೇರಿದಂತೆ ಅನೇಕ ಖ್ಯಾತ ವ್ಯಕ್ತಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ