ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ದೇಶಾದ್ಯಂತ ಹಲವು ವಿಶ್ವವಿದ್ಯಾಲಯಗಳ ಕುಲಪತಿಗಳು(Vice Chancellors) ಮತ್ತು ಶಿಕ್ಷಣ ತಜ್ಞರು ಬಹಿರಂಗ ಪತ್ರ ಬರೆದಿದ್ದಾರೆ.
ಈ ಪತ್ರದಲ್ಲಿ ರಾಹುಲ್ ಗಾಂಧಿಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿದೆ. ದೇಶಾದ್ಯಂತ ಸುಮಾರು 200 ವಿಶ್ವವಿದ್ಯಾಲಯಗಳ ಕುಲಪತಿ ಮತ್ತು ಶಿಕ್ಷಣ ತಜ್ಞರು ಈ ಪತ್ರ ಬರೆದಿದ್ದಾರೆ.
ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕವನ್ನು ಕೆಲವು ಸಂಸ್ಥೆಗಳೊಂದಿಗಿನ ಸಂಬಂಧದ ಆಧಾರದ ಮೇಲೆ ಮಾಡಲಾಗಿದೆಯೇ ಹೊರತು ಅರ್ಹತೆಯ ಆಧಾರದ ಮೇಲೆ ಮಾಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು. ಇವರ ಹೇಳಿಕೆಯಿಂದಾಗಿ ಕುಲಪತಿಗಳ ನೇಮಕದ ಬಗ್ಗೆ ಪ್ರಶ್ನೆಗಳು ಎದ್ದಿವೆ, ಅಂತಹ ಮಾತನ್ನು ನಾವು ತಿರಸ್ಕರಿಸುತ್ತೇವೆ. ಅರ್ಹತೆಯ ಆಧಾರದ ಮೇಲೆ ಪಾರದರ್ಶಕವಾಗಿ ಕುಲಪತಿಗಳ ನೇಮಕ ಪ್ರಕ್ರಿಯೆ ನಡೆಸಲಾಗುತ್ತಿದೆ.
ಇತ್ತೀಚೆಗಷ್ಟೇ ವಿಶ್ವವಿದ್ಯಾಲಯ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆ ಕುರಿತು ರಾಹುಲ್ ಪ್ರಶ್ನೆಗಳನ್ನು ಎತ್ತಿದ್ದರು. ಈ ವೇಳೆ ಕುಲಪತಿಗಳ ಆಯ್ಕೆ ಕುರಿತು ಪ್ರತಿಕ್ರಿಯಿಸಿದ್ದರು. ಇದೀಗ ಹಲವು ವಿಶ್ವವಿದ್ಯಾನಿಲಯದ ಕುಲಪತಿಗಳು ಮತ್ತು ಶಿಕ್ಷಣ ತಜ್ಞರು ಇದನ್ನು ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ.
ಬಹಿರಂಗ ಪತ್ರ
Vice Chancellors and academicians from several parts of the country write an open letter opposing Congress leader Rahul Gandhi’s remarks on the selection process of Vice Chancellors.
The letter reads “The process by which Vice Chancellors are selected is characterised by… pic.twitter.com/6jIQVai9m7
— ANI (@ANI) May 6, 2024
ಇದರೊಂದಿಗೆ ರಾಹುಲ್ ಗಾಂಧಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಆಯ್ಕೆಯು ಸಂಪೂರ್ಣವಾಗಿ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕೌಶಲ್ಯಗಳನ್ನು ಆಧರಿಸಿದೆ ಮತ್ತು ವಿಶ್ವವಿದ್ಯಾನಿಲಯಗಳನ್ನು ಮುಂದಕ್ಕೆ ಕೊಂಡೊಯ್ಯುವುದು ಎಂದು ಬರೆದಿದ್ದಾರೆ.
ಮತ್ತಷ್ಟು ಓದಿ: Rahul Gandhi: ರಾಹುಲ್ ಗಾಂಧಿ ಹೇಳಿದ 10 ಸುಳ್ಳುಗಳು
ದೇಶಾದ್ಯಂತದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಶೈಕ್ಷಣಿಕ ನಾಯಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಮಾಡಲಾದ ಆಧಾರರಹಿತ ಆರೋಪಗಳನ್ನು ನಿರಾಕರಿಸಲಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ರಾಹುಲ್ ಗಾಂಧಿಯವರು ಸುಳ್ಳು ಹೇಳಿ ಕುಲಪತಿಗಳಿಗೆ ಅಪಖ್ಯಾತಿ ತಂದಿದ್ದಾರೆ ಆದ್ದರಿಂದ ಅವರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ