AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

vice president election 2022: ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಖರ್‌ಗೆ ಬೆಂಬಲ ಘೋಷಿಸಿದ ಮಾಯಾವತಿ

ಸಾರ್ವಜನಿಕ ಹಿತಾಸಕ್ತಿ ಮತ್ತು ತನ್ನದೇ ಆದ ಚಳುವಳಿಯ ದೃಷ್ಟಿಯಿಂದ, ಉಪರಾಷ್ಟ್ರಪತಿ ಹುದ್ದೆಯ ಚುನಾವಣೆಯಲ್ಲಿ ಶ್ರೀ ಜಗದೀಪ್ ಧನಕರ್ ಅವರಿಗೆ ಬೆಂಬಲವನ್ನು ನೀಡಲು ಬಿಎಸ್ಪಿ ನಿರ್ಧರಿಸಿದೆ, ನಾನು ಇಂದು ಔಪಚಾರಿಕವಾಗಿ ಘೋಷಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

vice president election 2022: ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಖರ್‌ಗೆ ಬೆಂಬಲ ಘೋಷಿಸಿದ ಮಾಯಾವತಿ
Mayawati
TV9 Web
| Edited By: |

Updated on:Aug 03, 2022 | 10:55 AM

Share

ಲಕ್ನೋ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಖರ್‌ಗೆ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಿದ್ದಾರೆ. ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸರಕಾರ ಹಾಗೂ ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡದ ಕಾರಣ ಕೊನೆಗೂ ಅದಕ್ಕೆ ಚುನಾವಣೆ ನಡೆದಿದ್ದು, ಈಗ ಅದೇ ಪರಿಸ್ಥಿತಿಯಿಂದ ಉಪರಾಷ್ಟ್ರಪತಿ ಹುದ್ದೆಗೆ ಕೂಡ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಮಾಯಾವತಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಮತ್ತು ತನ್ನದೇ ಆದ ಚಳುವಳಿಯ ದೃಷ್ಟಿಯಿಂದ, ಉಪರಾಷ್ಟ್ರಪತಿ ಹುದ್ದೆಯ ಚುನಾವಣೆಯಲ್ಲಿ ಶ್ರೀ ಜಗದೀಪ್ ಧನಕರ್ ಅವರಿಗೆ ಬೆಂಬಲವನ್ನು ನೀಡಲು ಬಿಎಸ್ಪಿ ನಿರ್ಧರಿಸಿದೆ, ನಾನು ಇಂದು ಔಪಚಾರಿಕವಾಗಿ ಘೋಷಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10 ರಂದು ಕೊನೆಗೊಳ್ಳುವ ಕಾರಣ ಈ ಚುನಾವಣೆ ನಡೆಯಲಿದೆ.

ಎನ್‌ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಘೋಷಿಸಿದರೆ, ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಿಸಿವೆ. ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್ ಧನಕರ್ ಅವರು 1989 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು. ಅವರು ಜುಲೈ 2019 ರಲ್ಲಿ ಪಶ್ಚಿಮ ಬಂಗಾಳದ ಗವರ್ನರಾಗಿದ್ದರು ಮತ್ತು ಮಮತಾ ಬ್ಯಾನರ್ಜಿ ಸರ್ಕಾರದೊಂದಿಗಿನ ಅವರ ಪ್ರಕ್ಷುಬ್ಧ ಸಂಬಂಧಗಳ ಬಗ್ಗೆ ನಂತರ ಸುದ್ದಿಯಾಗಿದ್ದರು. ಈಗಾಗಲೇ ಪಶ್ಚಿಮ ಬಂಗಾಳದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿರುವ ಭಾರತದ ಉಪರಾಷ್ಟ್ರಪತಿಯನ್ನು ರಾಜ್ಯಸಭೆ ಮತ್ತು ಲೋಕಸಭೆಯ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಹಿಂದೆ, ಬಿಜು ಜನತಾ ದಳ (ಬಿಜೆಡಿ) ಮುಂಬರುವ ಚುನಾವಣೆಯಲ್ಲಿ ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನಕರ್‌ಗೆ ತನ್ನ ಬೆಂಬಲವನ್ನು ಘೋಷಿಸಿತು. ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷವು ಮತದಾನದಿಂದ ದೂರವಿರುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

2017 ರಲ್ಲಿ, NDA ವೆಂಕಯ್ಯ ನಾಯ್ಡು ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿತು ಮತ್ತು ಅವರು ಭಾರತದ 15 ನೇ ಉಪರಾಷ್ಟ್ರಪತಿಯಾದರು. ಅವರ ಅಧಿಕಾರಾವಧಿಯು ಆಗಸ್ಟ್ 10ರಂದು ಕೊನೆಗೊಳ್ಳುತ್ತದೆ.

Published On - 10:55 am, Wed, 3 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ