Jagdeep Dhankhar: ಉಪರಾಷ್ಟ್ರಪತಿ ಜಗದೀಪ್​ ದಂಖರ್​ಗೆ ಎದೆನೋವು, ಆಸ್ಪತ್ರೆಗೆ ದಾಖಲು

Vice President Jagdeep Dhankhar: ಉಪರಾಷ್ಟ್ರಪತಿ ಜಗದೀಪ್​ ದಂಖರ್​ಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಸ್ತುತ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ (ಸಿಸಿಯು) ನಲ್ಲಿ ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದಲ್ಲಿ ಧಂಖರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Jagdeep Dhankhar: ಉಪರಾಷ್ಟ್ರಪತಿ ಜಗದೀಪ್​ ದಂಖರ್​ಗೆ ಎದೆನೋವು, ಆಸ್ಪತ್ರೆಗೆ ದಾಖಲು
ಜಗದೀಪ್ ದಂಖರ್

Updated on: Mar 09, 2025 | 10:24 AM

ನವದೆಹಲಿ, ಮಾರ್ಚ್​ 09: ಉಪರಾಷ್ಟ್ರಪತಿ ಜಗದೀಪ್​ ದಂಖರ್​ಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಸ್ತುತ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ (ಸಿಸಿಯು) ನಲ್ಲಿ ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದಲ್ಲಿ ಧಂಖರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವರದಿ ತಿಳಿಸಿದೆ. ಉಪರಾಷ್ಟ್ರಪತಿ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಉಪಾಧ್ಯಕ್ಷ ಧಂಖರ್ ಅವರ ಆರೋಗ್ಯ ವಿಚಾರಿಸಲು ಏಮ್ಸ್‌ಗೆ ಭೇಟಿ ನೀಡಿದರು.

 

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

Published On - 10:12 am, Sun, 9 March 25