ಕಾನೂನು, ಸುವ್ಯವಸ್ಥೆ ಬಗ್ಗೆ ಭಾರತಕ್ಕೆ ಯಾರೂ ಪಾಠ ಹೇಳಬೇಕಿಲ್ಲ: ಅಮೆರಿಕ, ಜರ್ಮನಿ, ವಿಶ್ವಸಂಸ್ಥೆಗೆ ಉಪ ರಾಷ್ಟ್ರಪತಿ ತಿರುಗೇಟು

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕ, ವಿಶ್ವಸಂಸ್ಥೆ, ಜರ್ಮನಿಯ ಟೀಕೆಗಳಿಗೆ ಉಪ ರಾಷ್ಟ್ರಪತಿ ಜಗದೀಪ್ ಧನ್​ಕರ್ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದವರು, ಭಾರತಕ್ಕೆ ಕಾನೂನು ವ್ಯವಸ್ಥೆ ಬಗ್ಗೆ ಯಾರು ಪಾಠ ಹೇಳಿ ಕೊಡಬೇಕಾದ ಅಗತ್ಯ ಇಲ್ಲ ಎಂದು ಖಾರವಾಗಿ ಪ್ರತಕ್ರಿಯಿಸಿದ್ದಾರೆ.

ಕಾನೂನು, ಸುವ್ಯವಸ್ಥೆ ಬಗ್ಗೆ ಭಾರತಕ್ಕೆ ಯಾರೂ ಪಾಠ ಹೇಳಬೇಕಿಲ್ಲ: ಅಮೆರಿಕ, ಜರ್ಮನಿ, ವಿಶ್ವಸಂಸ್ಥೆಗೆ ಉಪ ರಾಷ್ಟ್ರಪತಿ ತಿರುಗೇಟು
ಜಗದೀಪ್ ಧನ್​ಕರ್
Follow us
Ganapathi Sharma
|

Updated on: Mar 30, 2024 | 9:02 AM

ನವದೆಹಲಿ, ಮಾರ್ಚ್ 30: ಕಾನೂನು ಸುವ್ಯವಸ್ಥೆ ಕುರಿತು ಭಾರತಕ್ಕೆ ಯಾರಿಂದಲೂ ಪಾಠದ ಅಗತ್ಯವಿಲ್ಲ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್​ಕರ್ (Jagdeep Dhankhar) ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಂಧನದ ಬಗ್ಗೆ ಜರ್ಮನಿ, ಅಮೆರಿಕ ಮತ್ತು ವಿಶ್ವಸಂಸ್ಥೆ ಟೀಕೆಗಳನ್ನು ಮಾಡಿದ ನಂತರ ಅವರು ಆ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಭಾರತ ದೇಶ ವಿಶಿಷ್ಟ ಪ್ರಜಾಪ್ರಭುತ್ವವನ್ನು ಹೊಂದಿದೆ ಎಂದು ಒತ್ತಿ ಹೇಳಿದರು. ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿರುವ ನಿರ್ಧಾರವನ್ನೂ ಅಮೆರಿಕ ಮತ್ತು ವಿಶ್ವಸಂಸ್ಥೆಯ ಪ್ರತಿನಿಧಿಗಳು ಪ್ರಶ್ನಿಸಿದ್ದವು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉಪರಾಷ್ಟ್ರಪತಿ, ‘ಭಾರತವು ದೃಢವಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿರುವ ಪ್ರಜಾಪ್ರಭುತ್ವವಾಗಿದೆ. ಇದನ್ನು ಯಾವುದೇ ವ್ಯಕ್ತಿ ಅಥವಾ ಯಾವುದೇ ಗುಂಪಿನಿಂದ ಬೇಕಾದಂತೆ ಬದಲಾಯಿಸಿಕೊಳ್ಳಲು ಸಾಧ್ಯವಾಗದು. ಭಾರತಕ್ಕೆ ಕಾನೂನಿನ ಆಳ್ವಿಕೆಯ ಬಗ್ಗೆ ಯಾರಿಂದಲೂ ಪಾಠ ಅಗತ್ಯವಿಲ್ಲ’ ಎಂದು ಹೇಳಿದರು.

ಭಾರತದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು. ತಾವು ಕಾನೂನಿಗಿಂತ ಮಿಗಿಲು ಎಂದು ಭಾವಿಸುವವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಭಾನುವಾರ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿಯ ಆಯೋಜಿಸಿರುವ ರ‍್ಯಾಲಿ ಬಗ್ಗೆ ಪ್ರತಿಕ್ರಿಯಿಸಿ, ಇದರಲ್ಲಿ ‘ಇಂಡಿಯಾ’ ಮೈತ್ರಿಕೂಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಇದರಿಂದ ನಾವು ತಿಳಿಯಬೇಕಾದದ್ದು ಏನು? ಕಾನೂನು ಅದರ ಕ್ರಮವನ್ನು ತೆಗೆದುಕೊಳ್ಳುತ್ತದೆ. ಅವರು (ಪ್ರತಿಪಕ್ಷಗಳ ಮೈತ್ರಿಕೂಟದ ನಾಯಕರು) ಬೀದಿಗಿಳಿಯುತ್ತಾರೆ. ಮಾನವ ಹಕ್ಕುಗಳ ನೆಪ ಹೇಳಿಕೊಂಡು ಅಪರಾಧವನ್ನು ಮರೆಮಾಚುತ್ತಾರೆ. ಇದು ನಮ್ಮ ಮೂಗಿನಡಿಯಲ್ಲೇ ನಡೆಯುತ್ತಿದೆ ಎಂದರು.

ಇದನ್ನೂ ಓದಿ: ಭಾರತದ ಆಂತರಿಕ ವಿಷಯಗಳ ಬಗ್ಗೆ ಮತ್ತೆ ಮಾತಾಡಿದ ಅಮೆರಿಕ, ಕೇಜ್ರಿವಾಲ್ ಬಂಧನ, ಕಾಂಗ್ರೆಸ್​ ಖಾತೆ ಸ್ಥಗಿತ ಪ್ರಸ್ತಾಪ

ಭಾರತೀಯ ನ್ಯಾಯಾಂಗ ವ್ಯವಸ್ಥೆಯು ಸದೃಢ, ಸ್ವತಂತ್ರ ಮತ್ತು ಜನಪರ ಎಂದು ಬಣ್ಣಿಸಿದ ಧನ್​ಕರ್, ಕಾನೂನು ತನ್ನ ಕ್ರಮ ಕೈಗೊಂಡಾಗ ಅದನ್ನು ಪ್ರತಿಭಟಿಸಿ ಬೀದಿಗಿಳಿಯುವುದರಲ್ಲಿ ಏನು ಅರ್ಥವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್‌ನ 70 ನೇ ಸಂಸ್ಥಾಪಕರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಧನಕರ್, ಕಾನೂನಿನ ಉಲ್ಲಂಘನೆ ಮಾಡಿರುವವರು ಈಗ ಬಲಿಪಶು ಎಂದು ಹೇಳಿಕೊಂಡು ಅನುಕಂಪ ಗಿಟ್ಟಿಸಲು ಯತ್ನಿಸುತ್ತಿದ್ದಾರೆ ಎಂದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್