ವಿಡಿಯೋ ವೈರಲ್: ಸಂಸದ ಅಸಾದುದ್ದೀನ್ ಓವೈಸಿ ತಮ್ಮ ಹಳೆ ಬಸ್ತಿಯಲ್ಲಿ ಬೈಕ್ ಸವಾರಿ ಮಾಡ್ತಾ ಸ್ವಾತಂತ್ರ್ಯ ಸಂಭ್ರಮಿಸಿದ್ದು ಹೇಗೆ ಗೊತ್ತಾ?

Asaduddin Owaisi Bike Riding: ಕಳೆದ ವರ್ಷ ಸಂಸದ ಅಸಾದುದ್ದೀನ್ ಚಾರ್ಮಿನಾರ್ ಬಳಿಯ ಮದೀನಾ ವೃತ್ತದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದರು. ಈ ವರ್ಷ ಅವರು ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲು ನಾನಾ ಸ್ಥಳಗಳಿಗೆ ಭೇಟಿ ನೀಡಿದರು. ಶಾಸ್ತ್ರಿಪುರಂನಲ್ಲಿರುವ ತಮ್ಮ ನಿವಾಸದಿಂದ ಬೈಕ್ ನಲ್ಲಿ ತೆರಳಿದ್ದರು. ಅವರೊಂದಿಗೆ ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ಅನುಯಾಯಿಗಳು ಬೈಕ್‌ನಲ್ಲಿ ಬಂದಿದ್ದರು. ಅಸಾದುದ್ದೀನ್ ಓವೈಸಿ ಅವರುಹೈದರಾಬಾದ್​ ರಸ್ತೆಗಳಲ್ಲಿ ಬೈಕ್ ಓಡಿಸುವುದನ್ನು ಇಷ್ಟಪಡುತ್ತೇನೆ ಎಂದು ಈ ಹಿಂದೆ ಹಲವು ಬಾರಿ ಹೇಳಿದ್ದರು.

ವಿಡಿಯೋ ವೈರಲ್: ಸಂಸದ ಅಸಾದುದ್ದೀನ್ ಓವೈಸಿ ತಮ್ಮ ಹಳೆ ಬಸ್ತಿಯಲ್ಲಿ ಬೈಕ್ ಸವಾರಿ ಮಾಡ್ತಾ ಸ್ವಾತಂತ್ರ್ಯ ಸಂಭ್ರಮಿಸಿದ್ದು ಹೇಗೆ ಗೊತ್ತಾ?
ಸಂಸದ ಅಸಾದುದ್ದೀನ್ ಓವೈಸಿ ತಮ್ಮ ಹಳೆ ಬಸ್ತಿಯಲ್ಲಿ ಬೈಕ್ ಸವಾರಿ
Follow us
ಸಾಧು ಶ್ರೀನಾಥ್​
|

Updated on: Aug 16, 2023 | 5:13 PM

ಹೈದರಾಬಾದ್, ಆಗಸ್ಟ್ 16: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ (Hyderabad) ಸಂಸದ ಅಸಾದುದ್ದೀನ್ ಓವೈಸಿ (AIMIM President Asaduddin Owaisi) ತಮ್ಮದೇ ಶೈಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ಬೈಕ್ ಹ್ಯಾಂಡಲ್ ಗೆ ಎರಡು ರಾಷ್ಟ್ರಧ್ವಜ ಕಟ್ಟಿ, ತಮ್ಮ ಹಳೆಯ ಬಸ್ತಿಯಲ್ಲಿ ಸವಾರಿ ಮಾಡ್ತಾ ಸಂಭ್ರಮಿಸಿದರು. ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಸದ ಅಸಾದುದ್ದೀನ್ ಗುಂಪುಗೂಡಿ ಬೈಕ್ (Triumph cruiser bike) ನಲ್ಲಿ ತೆರಳಿದರು. ಹಳೆ ಬಸ್ತಿಯ ವಿವಿಧೆಡೆ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ (Independence day celebration) ಭಾಗವಹಿಸಲು ಅವರು ಹೀಗೆ ಬೈಕ್ ನಲ್ಲಿ ತೆರಳಿದರು. ವಿವಿಧ ಪ್ರದೇಶಗಳಲ್ಲಿ ನಡೆದ ಧ್ವಜವಂದನೆಯಲ್ಲಿ ಸಂಸದರು ಭಾಗವಹಿಸಿದ್ದರು.

ಕಳೆದ ವರ್ಷ ಸಂಸದ ಅಸಾದುದ್ದೀನ್ ಚಾರ್ಮಿನಾರ್ ಬಳಿಯ ಮದೀನಾ ವೃತ್ತದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದರು. ಈ ವರ್ಷ ಅವರು ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲು ನಾನಾ ಸ್ಥಳಗಳಿಗೆ ಭೇಟಿ ನೀಡಿದರು. ಶಾಸ್ತ್ರಿಪುರಂನಲ್ಲಿರುವ ತಮ್ಮ ನಿವಾಸದಿಂದ ಬೈಕ್ ನಲ್ಲಿ ತೆರಳಿದ್ದರು. ಅವರೊಂದಿಗೆ ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಇಬ್ಬರು ಅನುಯಾಯಿಗಳು ಬೈಕ್‌ನಲ್ಲಿ ಬಂದಿದ್ದರು. ಅಸಾದುದ್ದೀನ್ ಓವೈಸಿ ಅವರು ಹೈದರಾಬಾದ್​ ರಸ್ತೆಗಳಲ್ಲಿ ಬೈಕ್ ಓಡಿಸುವುದನ್ನು ಇಷ್ಟಪಡುತ್ತೇನೆ ಎಂದು ಈ ಹಿಂದೆ ಹಲವು ಬಾರಿ ಹೇಳಿದ್ದರು.

Also Read: MiG-29 Fighter- ಶತ್ರುಗಳ ಎದೆಯನ್ನು ನಡುಗಿಸುವ ಮಿಗ್ 29 ಕಾರ್ಯಾಚರಣೆ ಹೇಗೆ ಇರುತ್ತೆ? ಟಿವಿ9 ಸಾಕ್ಷಾತ್​ ವರದಿ

ಏತನ್ಮಧ್ಯೆ, ಸಂಸದ ಅಸಾದುದ್ದೀನ್ ಓವೈಸಿ ಅವರ ತಂದೆ ದಿವಂಗತ ಸುಲ್ತಾನ್ ಸಲಾವುದ್ದೀನ್ ಓವೈಸಿ ಅವರು 1970 ಮತ್ತು 1980 ರ ದಶಕಗಳಲ್ಲಿ ಮೋಟಾರ್ ಸೈಕಲ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ಹೀಗೆಯೇ ಭೇಟಿ ನೀಡುತ್ತಿದ್ದರು. ಆ ವೇಳೆ ಸುಲ್ತಾನ್ ಸಲಾವುದ್ದೀನ್ ಓವೈಸಿ ಮೋಟಾರ್ ಸೈಕಲ್ ನಲ್ಲಿ ಹಲವು ಬಾರಿ ಪ್ರಯಾಣಿಸಿ ಪ್ರಸಿದ್ಧಿ ಪಡೆದಿದ್ದರು. ಮತ್ತು ಸಂಸದ ಅಸಾದುದ್ದೀನ್ ಓವೈಸಿ ಆಗಾಗ್ಗೆ ಕಾರಿನಲ್ಲಿಯೂ ಹೀಗೆ ಪ್ರಯಾಣಿಸುತ್ತಾರೆ.

ಆದರೆ ಆಗೊಮ್ಮೆ ಈಗೊಮ್ಮೆ ಅಸಾದುದ್ದೀನ್ ಮೋಟಾರು ಬೈಕ್‌ನಲ್ಲಿ ರಸ್ತೆಗಿಳಿಯುತ್ತಾರೆ. ಡಿಸೆಂಬರ್ 2018 ರಲ್ಲಿ ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನದ ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಅಸಾದುದ್ದೀನ್ ಓವೈಸಿ ಬೈಕ್‌ನಲ್ಲಿ ಸಂಚರಿಸಿದ್ದರು. ಓವೈಸಿ ಜೊತೆ ಬೈಕೇರಿ ತಮ್ಮ ಅಧಿಕೃತ ನಿವಾಸ ಪ್ರಗತಿ ಭವನ ತಲುಪಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್