Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​

ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Video: ದೆಹಲಿಯಲ್ಲಿ ಬಸ್​​ ಹರಿದು ಫುಡ್​​​ ಡೆಲಿವರಿ ಬಾಯ್ ಸ್ಥಿತಿ ಗಂಭೀರ, ವೀಡಿಯೊ ವೈರಲ್​​
ವೈರಲ್​​ ವೀಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 06, 2023 | 6:59 PM

ದೆಹಲಿ: ದೆಹಲಿಯಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ದೇಶದಲ್ಲಿ ಇಂತಹ ಅನೇಕ ಘಟನೆ ನಡೆಯುತ್ತಿದೆ. ಇಲ್ಲಿ ಜೀವಗಳಿಗೆ ಬೆಲೆಯೇ ಇಲ್ಲವೇ ಎಂದು ಅನಿಸುವಷ್ಟರ ಮಟ್ಟಿಗೆ ಜನ ವರ್ತಿಸುತ್ತಾರೆ. ಹೌದು ದೆಹಲಿಯ ಮಜು ಕಾ ತಿಲಾ ಪ್ರದೇಶದಲ್ಲಿ ಫುಡ್​​​ ಡೆಲಿವರಿ ಬಾಯ್​​​ಗೆ ಬಸ್​​ ಡಿಕ್ಕಿ ಹೊಡೆದು ನೋಡಿಯೂ ನೋಡುದಂತೆ ಆತನ ಮೇಲೆ ಹರಿದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯೂ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಿಂದ ಬಸ್​​ ಚಾಲಕನನ್ನು ಬಂಧಿಸಲು ನೆರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡೆಲಿವರಿ ಬಾಯ್​​ ಜೀಬ್ರಾ ಕ್ರಾಸಿಂಗ್​​ ರಸ್ತೆಯನ್ನು ದಾಟುತ್ತಿದ್ದ ವೇಳೆ ವೇಗವಾಗಿ ಬಂದ ನೀಲಿ ಮತ್ತು ಹಸಿರು ಬಸ್ ಆತನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಬಸ್​​ ಹರಿದ ಹೋಗುವುದನ್ನು ಈ ವೀಡಿಯೊದಲ್ಲಿ ನೋಡಬಹುದು.

ಡೆಲಿವರಿ ಬಾಯ್‌ನನ್ನು ರಾಷ್ಟ್ರ ರಾಜಧಾನಿಯ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಧನ್ವೀರ್ ಸಿಂಗ್ ಎಂದು ಗುರುತಿಸಲಾಗಿದೆ. ಶನಿವಾರ ನಡೆದ ಘಟನೆಯ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಕೇರಳದ ಪಾಲಕ್ಕಾಡ್​ನಲ್ಲಿ ಭೀಕರ ಅಪಘಾತ; ಸರ್ಕಾರಿ ಬಸ್​​ಗೆ ಶಾಲಾ ಮಕ್ಕಳಿದ್ದ ಬಸ್​ ಡಿಕ್ಕಿ ಹೊಡೆದು 9 ಜನ ಸಾವು

ಆರೋಪಿ ಬಸ್ ಚಾಲಕನನ್ನು ಉತ್ತರ ಪ್ರದೇಶದ ಅಮ್ರೋಹಾ ನಿವಾಸಿ ಫಿರೋಜ್ ಖಾನ್ ಎಂದು ಗುರುತಿಸಲಾಗಿದೆ. ಬಂಧನದ ನಂತರ ಫಿರೋಜ್ ಖಾನ್ ಜೂನ್ 3 ರಂದು ಬೆಳಿಗ್ಗೆ 5:30 ರ ಸುಮಾರಿಗೆ ಉತ್ತರಾಖಂಡದಿಂದ ಬಸ್ ಓಡಿಸುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದರು.

ಪೊಲೀಸರ ಪ್ರಕಾರ ಬಸ್ ಐಎಸ್‌ಬಿಟಿ ಮೋರಿ ಗೇಟ್‌ನಿಂದ ಆಗಮಿಸಿ ಇಂದ್ರಪ್ರಸ್ಥ ಕಾಲೇಜು ಬಳಿ ಯು-ಟರ್ನ್ ತೆಗೆದುಕೊಂಡಿದೆ. ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ನಲ್ಲಿ ಇಳಿಸಬೇಕಿದ್ದ, ಆದರೆ ಅಲ್ಲಿ ಇಳಿಸದೇ ತುಂಬಾ ಮುಂದೆ ಹೋಗಿ ನಿಲ್ಲಿಸಿದ್ದಾರೆ. ಇದು ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹೊಂದಿದ್ದ ಬಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Tue, 6 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್