AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಚಿತೆ ಉರಿಯುತ್ತಿದ್ದಾಗ ಇನ್ನೂ ಎಷ್ಟು ಟೈಮ್ ಬೇಕೆಂದು ವಿಡಿಯೋ ಕಾಲ್​ನಲ್ಲಿ ಕೇಳಿದ ಮಗಳು

ಒಂದು ಕಾಲದಲ್ಲಿ ಮುಂಬೈನ ಬೃಹತ್ ಜವಳಿ ಉದ್ಯಮದಲ್ಲಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದ್ದ ವ್ಯಕ್ತಿ, ತನ್ನ ಜೀವನದ ಕಡೆಗಾಲದಲ್ಲಿ ವೃದ್ಧಾಶ್ರಮದಲ್ಲಿ ಒಂಟಿಯಾಗಿ ಪ್ರಾಣ ಬಿಡುವ ಪರಿಸ್ಥಿತಿ  ಬಂದೊದಗಿತ್ತು. ಎಂದು ಯಾರೂ ಊಹಿಸಿರಲಿಲ್ಲ. ಹರಿಯಾಣದ ಸೋನಿಪತ್‌ನಲ್ಲಿರುವ ವೃದ್ಧಾಶ್ರಮವೊಂದರಲ್ಲಿ ನಿಧನರಾದ 74 ವರ್ಷದ ಶಿವಚರಣ್ ರಾಮರತನ್ ಗುಪ್ತಾ ಅವರ ದಾರುಣ ಅಂತ್ಯ, ಇಂದಿನ ಆಧುನಿಕ ಸಮಾಜದಲ್ಲಿ ಹೆತ್ತವರ ಸ್ಥಾನಮಾನ ಹಾಗೂ ನಶಿಸುತ್ತಿರುವ ಸೋದರ-ಕುಟುಂಬ ಸಂಬಂಧಗಳ ಕಠೋರ ವಾಸ್ತವಕ್ಕೆ ಕನ್ನಡಿ ಹಿಡಿದಿದೆ.

ಅಪ್ಪನ ಚಿತೆ ಉರಿಯುತ್ತಿದ್ದಾಗ ಇನ್ನೂ ಎಷ್ಟು ಟೈಮ್ ಬೇಕೆಂದು ವಿಡಿಯೋ ಕಾಲ್​ನಲ್ಲಿ ಕೇಳಿದ ಮಗಳು
ಅಂತ್ಯಕ್ರಿಯೆ ವೀಕ್ಷಿಸಿದ ಮಗಳು
ನಯನಾ ರಾಜೀವ್
|

Updated on:Aug 06, 2026 | 11:19 AM

Share

ಸೋನಿಪತ್, ಆಗಸ್ಟ್​ 06:: ಒಂದು ಕಾಲದಲ್ಲಿ ಮುಂಬೈನ ಬೃಹತ್ ಜವಳಿ ಉದ್ಯಮದಲ್ಲಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದ್ದ ವ್ಯಕ್ತಿ, ತನ್ನ ಜೀವನದ ಕಡೆಗಾಲದಲ್ಲಿ ವೃದ್ಧಾಶ್ರಮದಲ್ಲಿ ಒಂಟಿಯಾಗಿ ಪ್ರಾಣ ಬಿಡುವ ಪರಿಸ್ಥಿತಿ  ಬಂದೊದಗಿತ್ತು. ಎಂದು ಯಾರೂ ಊಹಿಸಿರಲಿಲ್ಲ. ಹರಿಯಾಣದ ಸೋನಿಪತ್‌ನಲ್ಲಿರುವ ವೃದ್ಧಾಶ್ರಮವೊಂದರಲ್ಲಿ ನಿಧನರಾದ 74 ವರ್ಷದ ಶಿವಚರಣ್ ರಾಮರತನ್ ಗುಪ್ತಾ ಅವರ ದಾರುಣ ಅಂತ್ಯ, ಇಂದಿನ ಆಧುನಿಕ ಸಮಾಜದಲ್ಲಿ ಹೆತ್ತವರ ಸ್ಥಾನಮಾನ ಹಾಗೂ ನಶಿಸುತ್ತಿರುವ ಸೋದರ-ಕುಟುಂಬ ಸಂಬಂಧಗಳ ಕಠೋರ ವಾಸ್ತವಕ್ಕೆ ಕನ್ನಡಿ ಹಿಡಿದಿದೆ.

ಶಿವಚರಣ್ ಗುಪ್ತಾ ಅವರು ಮುಂಬೈನಲ್ಲಿ ಯಶಸ್ವಿ ಜವಳಿ ಉದ್ಯಮಿಯಾಗಿದ್ದರು. ಆದರೆ, ಕಾಲಕ್ರಮೇಣ ವ್ಯವಹಾರದಲ್ಲಾದ ಹಿನ್ನಡೆ ಮತ್ತು ಕುಟುಂಬದ ದೂರದಿಂದಾಗಿ ಅವರು ತಮ್ಮ ಪತ್ನಿಯೊಂದಿಗೆ ಹರಿಯಾಣದ ಸೋನಿಪತ್‌ನಲ್ಲಿರುವ ವೃದ್ಧಾಶ್ರಮಕ್ಕೆ ಬಂದು ಸೇರಿದ್ದರು.

ಸುಮಾರು ಎರಡು ವರ್ಷಗಳ ಹಿಂದೆ ಅವರ ಪತ್ನಿಯೂ ಅದೇ ವೃದ್ಧಾಶ್ರಮದಲ್ಲಿ ನಿಧನರಾಗಿದ್ದರು. ಪತ್ನಿಯ ಅಗಲಿಕೆಯ ನಂತರ ಸಂಪೂರ್ಣವಾಗಿ ಒಂಟಿಯಾಗಿದ್ದ ಶಿವಚರಣ್, ಕಳೆದ ಮೂರು ವರ್ಷಗಳಿಂದ ವೃದ್ಧಾಶ್ರಮವನ್ನೇ ತಮ್ಮ ಮನೆಯಾಗಿಸಿಕೊಂಡಿದ್ದರು.

5,100 ರೂ. ಆನ್‌ಲೈನ್ನಲ್ಲಿ ವರ್ಗಾವಣೆ, ವೀಡಿಯೊ ಕರೆಯಲ್ಲಿ ಅಂತ್ಯಕ್ರಿಯೆ

ಮುಂಬೈಗೆ ಕೊಂಡೊಯ್ಯಲು ನಿರಾಕರಣೆ: ಶಿವಚರಣ್ ನಿಧನರಾದ ತಕ್ಷಣ ವೃದ್ಧಾಶ್ರಮದ ಆಡಳಿತ ಮಂಡಳಿಯು ಮುಂಬೈನಲ್ಲಿ ನೆಲೆಸಿರುವ ಅವರ ಮೂವರು ಹೆಣ್ಣುಮಕ್ಕಳನ್ನು ಸಂಪರ್ಕಿಸಿತು. ಆದರೆ, ಮೃತದೇಹವನ್ನು ಮುಂಬೈಗೆ ತರಲು ಅಥವಾ ತಾವು ಸೋನಿಪತ್‌ಗೆ ಬರಲು ಹೆಣ್ಣುಮಕ್ಕಳು ನಿರಾಕರಿಸಿದರು.ಕೊನೆಗೆ ಆನ್‌ಲೈನ್ ಮೂಲಕ 5,100 ರೂ. ಕಳುಹಿಸಿದ ಮಕ್ಕಳು, ಸೋನಿಪತ್‌ನಲ್ಲೇ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಪೂರ್ಣಗೊಳಿಸುವಂತೆ ಆಡಳಿತ ಮಂಡಳಿಗೆ ವಿನಂತಿಸಿದರು.

ಇನ್ನೂ ಎಷ್ಟು ಸಮಯ ಬೇಕು? ಮಗಳ ಅಮಾನವೀಯ ಪ್ರಶ್ನೆ

ವೃದ್ಧಾಶ್ರಮದ ನಿರ್ದೇಶಕ ಆನಂದ್ ಕುಮಾರ್ ಅವರು ತಾವೇ ನಿಂತು ಅಂತ್ಯಕ್ರಿಯೆಯ ವ್ಯವಹಾರಗಳನ್ನು ನೆರವೇರಿಸಿ, ಹೆಣ್ಣುಮಕ್ಕಳಿಗೆ ವೀಡಿಯೊ ಕರೆ ಮೂಲಕ ಪ್ರಕ್ರಿಯೆಯನ್ನು ತೋರಿಸಿದರು. ತಂದೆಯ ಚಿತೆ ಉರಿಯುತ್ತಿದ್ದಾಗ ಫೋನ್‌ನಲ್ಲಿದ್ದ ಮಗಳು, “ಈ ಅಂತ್ಯಕ್ರಿಯೆ ಮುಗಿಯಲು ಇನ್ನು ಎಷ್ಟು ಸಮಯ ತೆಗೆದುಕೊಳ್ಳುತ್ತದೆ?” ಎಂದು ಪದೇ ಪದೇ ಪ್ರಕ್ರಿಯೆಯ ಸಮಯದ ಕುರಿತು ಕೇಳುತ್ತಿದ್ದುದು ಅಲ್ಲಿದ್ದವರ ಕಣ್ಣುಗಳಲ್ಲಿ ನೀರು ತರಿಸಿತು. ಚಿತಾಭಸ್ಮವನ್ನು ಸಂಗ್ರಹಿಸಲು ಬರಬೇಕೆಂದು ಕೇಳಿಕೊಂಡಾಗಲೂ, “‘ನೋಡೋಣ,  ಆದ್ರೆ ಬರ್ತೀವಿ ಎಂಬ ಉತ್ತರ ನೀಡಿದ್ದಾರೆ.

ವಿಡಿಯೋ

ಈ ಘಟನೆ ಹೊರಬೀಳುತ್ತಿದ್ದಂತೆ ಇಂಟರ್ನೆಟ್‌ನಲ್ಲಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೆತ್ತ ತಂದೆ-ತಾಯಿಯನ್ನು ಕಡೆಗಣಿಸುವ ಇಂತಹ ಮಕ್ಕಳು ಯಾರಿಗೂ ಬೇಡ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ‘ಹಿರಿಯ ನಾಗರಿಕರ ಮತ್ತು ಪೋಷಕರ ಪೋಷಣೆ ಹಾಗೂ ಕಲ್ಯಾಣ ಕಾಯ್ದೆ-2007’ ಜಾರಿಯಲ್ಲಿದ್ದರೂ, ಅನೇಕ ವೃದ್ಧರು ಮಕ್ಕಳಿಂದ ಕಾನೂನಾತ್ಮಕ ಅಥವಾ ಭಾವನಾತ್ಮಕ ಬೆಂಬಲ ಸಿಗದೆ ವೃದ್ಧಾಶ್ರಮಗಳಲ್ಲಿ ಕಳೆಯುವಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Thu, 6 August 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ