ನಿಂತಿದ್ದ ನಾಯಿನ್ನ ಸರೋವರಕ್ಕೆ ಎಸೆದ ಪಾಪಿ: ವಿಡಿಯೋ ವೈರಲ್, FIR ದಾಖಲು

ಭೋಪಾಲ್: ವ್ಯಕ್ತಿಯೊಬ್ಬ ಸರೋವರಕ್ಕೆ ನಾಯಿಯನ್ನು ಎಸೆಯುವ ವಿಡಿಯೋ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಕೆದಾರರು, ಭೋಪಾಲ್‌ನ ಭಡಾ ತಾಲಾಬ್ ತೀರದಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಹೇಳಿದ್ದಾರೆ. ಸಲ್ಮಾನ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದು, ಭಾನುವಾರ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಈ ವ್ಯಕ್ತಿ ತನ್ನ ಹತ್ತಿರ ತಿರುಗಾಡುತ್ತಿರುವ ಎರಡು ನಾಯಿಗಳಲ್ಲಿ ಒಂದನ್ನು ಎತ್ತಿಕೊಂಡು ಅದನ್ನು ಸರೋವರಕ್ಕೆ ಎಸೆದಿದ್ದಾನೆ. ಭೋಪಾಲ್ ಉಪ […]

ನಿಂತಿದ್ದ ನಾಯಿನ್ನ ಸರೋವರಕ್ಕೆ ಎಸೆದ ಪಾಪಿ: ವಿಡಿಯೋ ವೈರಲ್, FIR ದಾಖಲು
Follow us
ಸಾಧು ಶ್ರೀನಾಥ್​
|

Updated on: Sep 14, 2020 | 2:45 PM

ಭೋಪಾಲ್: ವ್ಯಕ್ತಿಯೊಬ್ಬ ಸರೋವರಕ್ಕೆ ನಾಯಿಯನ್ನು ಎಸೆಯುವ ವಿಡಿಯೋ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಕೆದಾರರು, ಭೋಪಾಲ್‌ನ ಭಡಾ ತಾಲಾಬ್ ತೀರದಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಹೇಳಿದ್ದಾರೆ.

ಸಲ್ಮಾನ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದು, ಭಾನುವಾರ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಈ ವ್ಯಕ್ತಿ ತನ್ನ ಹತ್ತಿರ ತಿರುಗಾಡುತ್ತಿರುವ ಎರಡು ನಾಯಿಗಳಲ್ಲಿ ಒಂದನ್ನು ಎತ್ತಿಕೊಂಡು ಅದನ್ನು ಸರೋವರಕ್ಕೆ ಎಸೆದಿದ್ದಾನೆ.

ಭೋಪಾಲ್ ಉಪ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಇರ್ಷಾದ್ ವಾಲಿ ವಿಡಿಯೋವನ್ನು ಗಮನಿಸಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ಸನೇಹಿ ಮಿಶ್ರಾ ಅವರು ಭಾರತೀಯ ದಂಡ ಸಂಹಿತೆ ಸೆಕ್ಷನ್ 429 (ಯಾವುದೇ ಪ್ರಾಣಿಗಳನ್ನು ಕೊಲ್ಲುವ ಅಥವಾ ದುರ್ಬಲಗೊಳಿಸುವ ಮೂಲಕ ಕಿಡಿಗೇಡಿತನ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಮೇಲ್ ಸರೋವರದ ಬೋಟ್ ಕ್ಲಬ್ ರಸ್ತೆಯಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಎಂದು ತೋರುತ್ತದೆ ಎಂದು ಮಿಶ್ರಾ ಹೇಳಿದ್ದಾರೆ. ನೆಟ್ಟಿಗರು ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 429 ಅಡಿ ಸಲ್ಮಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು