ಕಾಲೇಜಿನ ಹಾಸ್ಟೆಲ್​ನಲ್ಲಿ ಕಿರಿಯ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ಥಳಿಸಿದ ಸೀನಿಯರ್ಸ್, ವಿಡಿಯೋ ವೈರಲ್

ಆಂಧ್ರಪ್ರದೇಶದ ನರಸರಾವ್‌ಪೇಟೆಯ ಖಾಸಗಿ ಕಾಲೇಜೊಂದರಲ್ಲಿ ಕೆಲವು ಹಿರಿಯ ವಿದ್ಯಾರ್ಥಿಗಳು ಜೂನಿಯರ್‌ಗಳ ಮೇಲೆ ಹಲ್ಲೆ ನಡೆಸಿ ಥಳಿಸುವ ಹಳೆ ವಿಡಿಯೋ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕಾಲೇಜಿನ ಹಾಸ್ಟೆಲ್​ನಲ್ಲಿ ಕಿರಿಯ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ಥಳಿಸಿದ ಸೀನಿಯರ್ಸ್, ವಿಡಿಯೋ ವೈರಲ್
ವಿದ್ಯಾರ್ಥಿಗಳುImage Credit source: India Today
Follow us
ನಯನಾ ರಾಜೀವ್
|

Updated on: Jul 25, 2024 | 1:37 PM

ಆಂಧ್ರಪ್ರದೇಶದ ಕಾಲೇಜು ಹಾಸ್ಟೆಲ್​ವೊಂದರಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ಮನಬಂದಂತೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಫೆಬ್ರವರಿಯಲ್ಲಿ ನರಸರಾವ್‌ಪೇಟೆಯ ಶ್ರೀ ಸುಬ್ಬರಾಯ ಮತ್ತು ನಾರಾಯಣ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಡಿಯೋ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಸಿಸಿ (ನ್ಯಾಷನಲ್ ಕೆಡೆಟ್ ಕಾರ್ಪ್ಸ್) ತರಬೇತಿ ನೆಪದಲ್ಲಿ ಜೂನಿಯರ್‌ಗಳನ್ನು ಹಾಸ್ಟೆಲ್‌ಗೆ ಕರೆದೊಯ್ದು ಮನಬಂದಂತೆ ಥಳಿಸಿದ್ದಾರೆ. ವ್ಯಕ್ತಿಯೊಬ್ಬ ವಿದ್ಯಾರ್ಥಿಯನ್ನು ಒಬ್ಬೊಬ್ಬರಾಗಿ ಕೋಣೆಗೆ ಕರೆತರುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ನಂತರ ಹಿರಿಯರ ಗುಂಪೊಂದು ವಿದ್ಯಾರ್ಥಿಗಳನ್ನು ದೊಣ್ಣೆಗಳಿಂದ ಥಳಿಸಿದ್ದಾರೆ.

ವಿಡಿಯೋ ಬೆಳಕಿಗೆ ಬಂದ ನಂತರ, ರ್ಯಾಗಿಂಗ್ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರ್ಯಾಗಿಂಗ್ ನಿಷೇಧ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.

ಈ ವರ್ಷ ಫೆಬ್ರವರಿ 2 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒನ್ ಟೌನ್ ಪೊಲೀಸ್ ಠಾಣೆಯ ಸಿಐ ಚಿಂತಲ ಕೃಷ್ಣಾ ರೆಡ್ಡಿ ಪ್ರಕಾರ, ಘಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಸಂಬಂಧ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರೆಡ್ಡಿ ತಿಳಿಸಿದ್ದಾರೆ.

ರ್ಯಾಗಿಂಗ್ ಶಿಕ್ಷಾರ್ಹ ಅಪರಾಧ ಎಂದು ಹೇಳಿದ ಇನ್ಸ್‌ಪೆಕ್ಟರ್, ವಿದ್ಯಾರ್ಥಿಗಳು ಇಂತಹ ಘಟನೆಗಳ ಬಗ್ಗೆ ಯಾವುದೇ ವಿಳಂಬ ಮಾಡದೆ ಆಡಳಿತ ಮಂಡಳಿ ಮತ್ತು ಪೊಲೀಸರಿಗೆ ತಿಳಿಸುವಂತೆ ಒತ್ತಾಯಿಸಿದರು.

ಆಂಧ್ರಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಈ ವೀಡಿಯೊವನ್ನು ಸಹ ಹಂಚಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ