AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋ ವೈರಲ್; 8 ಮಂದಿ ಆತ್ಮಹತ್ಯೆಗೆ ಯತ್ನ, ಭುಗಿಲೆದ್ದ ಆಕ್ರೋಶ

ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ 8 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ.

60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋ ವೈರಲ್; 8 ಮಂದಿ ಆತ್ಮಹತ್ಯೆಗೆ ಯತ್ನ, ಭುಗಿಲೆದ್ದ ಆಕ್ರೋಶ
ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋ ವೈರಲ್; 8 ಮಂದಿ ಆತ್ಮಹತ್ಯೆಗೆ ಯತ್ನ, ಸ್ಥಳದಲ್ಲಿ ಭುಗಿಲೆದ್ದ ಆಕ್ರೋಶ
TV9 Web
| Edited By: |

Updated on:Sep 18, 2022 | 11:59 AM

Share

ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋವನ್ನು ಸೆರೆಹಿಡಿದ ವಿದ್ಯಾರ್ಥಿನಿಯೊಬ್ಬಳು ತನ್ನ ಸ್ನೇಹಿತನಿಗೆ ಕಳುಹಿಸಿದ್ದು, ಈ ವಿಡಿಯೋಗಳು ವೈರಲ್ ಆಗಿವೆ. ವಿಷಯ ತಿಳಿದ ಎಂಟು ಮಂದಿ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯನ್ನು ಖಂಡತುಂಡವಾಗಿ ಖಂಡಿಸುತ್ತಿರುವ ವಿದ್ಯಾರ್ಥಿನಿಯರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಸ್ಥಳಕ್ಕೆ ದೌಡಾಯಿಸಿದ ಪೊಲೀಸರ ಮೇಲೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ವಾಹನಗಳು ಕೂಡ ಆಕ್ರೋಶದ ಕಿಚ್ಚಿಗೆ ಧ್ವಂಸಗೊಂಡಿವೆ. ಈ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯು ಕ್ರಮ ಕೈಗೊಳ್ಳುವ ಬದಲು ವಿಷಯವನ್ನು ಹತ್ತಿಕ್ಕುತ್ತಿದೆ ಎಂದು ಬಾಲಕಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಹಿರಿಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ.

ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋವನ್ನು ಶಿಮ್ಲಾ ಮೂಲದ ವಿದ್ಯಾರ್ಥಿನಿಯೊಬ್ಬಳು ಶಿಮ್ಲಾದಲ್ಲಿ ವಾಸಿಸುವ ತನ್ನ ಗೆಳೆಯನೊಂದಿಗೆ ಹಂಚಿಕೊಂಡಿದ್ದಾಳೆ. ಅದನ್ನು ಆತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಡಿಯೋವನ್ನು ನೋಡಿದ ಎಂಟು ವಿದ್ಯಾರ್ಥಿನಿಯರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವಳ ಸ್ಥಿತಿ ಚಿಂತಾಜನಕವಾಗಿದೆ.

ಸದ್ಯ ಕೃತ್ಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ವೀಡಿಯೊಗಳನ್ನು ಸಂಗ್ರಹಿಸುವ ಉದ್ದೇಶವೇನು? ಎಂಬಿತ್ಯಾದಿ ಆಯಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡ ಶಿಮ್ಲಾದ ವ್ಯಕ್ತಿಯ ಬಂಧನಕ್ಕೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಶದಲ್ಲಿರುವ ವಿದ್ಯಾರ್ಥಿನಿಯೂ ಹಿಮಾಚಲದವಳೇ, ಹುಡುಗನೂ ಅಲ್ಲಿಯವನೇ. ಹಾಗಾದರೆ ಇವರಿಬ್ಬರು ಯಾಕೆ ಹೀಗೆ ಮಾಡಿದರು? ಈ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.

ವಿದ್ಯಾರ್ಥಿನಿಯನ್ನು ತರಾಟೆಗೆ ತೆಗೆದುಕೊಂಡ ವಾರ್ಡನ್

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 am, Sun, 18 September 22