ಉತ್ತರ ಪ್ರದೇಶ: ಬೀದಿಯಲ್ಲಿ ಮಹಿಳೆಯರಿಗೆ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್, ವಿಡಿಯೊ ವೈರಲ್
ಇತ್ತೀಚೆಗೆ ಈ ಪ್ರದೇಶದಲ್ಲಿ ಬಿಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ವಿರುದ್ಧ ಪೊಲೀಸರು ಈ ರೀತಿ ವರ್ತಿಸಿದ್ದಾರೆ.
ಅಂಬೇಡ್ಕರ್ ನಗರ: ಉತ್ತರ ಪ್ರದೇಶದ (Uttar Pradesh) ಪೊಲೀಸರು ಮಹಿಳೆಯರ ಮೇಲೆ ಲಾಠಿ ಪ್ರಹಾರ (lathicharge) ಮಾಡುತ್ತಾ ಬೈಯುತ್ತಿರುವ ವಿಡಿಯೊವೊಂದು ವೈರಲ್ ಆಗಿದ್ದು, ಪೊಲೀಸರ ಅತಿರೇಕದ ವರ್ತನೆಯನ್ನು ಜನರು ಖಂಡಿಸಿದ್ದಾರೆ. ಮಹಿಳೆಯರು ನಮ್ಮ ವಾಹನಗಳ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ ನಂತರ ನಾವು ಬಲಪ್ರಯೋಗ ಮಾಡಿದೆವು ಎಂದು ಪೊಲೀಸರು ಹೇಳಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೊ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದ್ದು. ಇತ್ತೀಚೆಗೆ ಈ ಪ್ರದೇಶದಲ್ಲಿ ಬಿಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ವಿರುದ್ಧ ಪೊಲೀಸರು ಈ ರೀತಿ ವರ್ತಿಸಿದ್ದಾರೆ. ಪ್ರತಿಮೆ ಇರುವ ಭೂಮಿಯ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದೆ. ಭಾನುವಾರ ಘಟನಾ ಸ್ಥಳದಲ್ಲಿ ಮಹಿಳೆಯರ ಗುಂಪು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಅವರನ್ನು ಚದುರಿಸಲು ಆಗಮಿಸಿದ್ದರು. ಪೊಲೀಸರ ಪ್ರಕಾರ, ಕೆಲವು ಪ್ರತಿಭಟನಾಕಾರರು ಹಿರಿಯ ಅಧಿಕಾರಿ ಸೇರಿದಂತೆ ಪೊಲೀಸರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದರು.
ಮತ್ತೊಂದು ವಿಡಿಯೊದಲ್ಲಿ ಕೆಲವು ಮಹಿಳೆಯರು ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೂದಲನ್ನು ಎಳೆದಾಡುತ್ತಿರುವುದು ಕಂಡುಬಂದಿದೆ. ಈ ಹೊತ್ತಲ್ಲೇ ಕೆಲವು ಪ್ರತಿಭಟನಾಕಾರರು ಪೊಲೀಸ್ ಕಾರಿನ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು ಎಂದು ಅಂಬೇಡ್ಕರ್ ನಗರ ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ಕುಮಾರ್ ಸಿನ್ಹಾ ಹೇಳಿದರು.
यूपी: अम्बेडकर नगर में कल से ही विवाद चल रहा था. किसी ने अम्बेडकर की तस्वीर पर कालिख पोत दी थी.
आज विवाद उग्र हो गया, पथराव होने लगा, पुलिस ने लाठीचार्ज भी किया. pic.twitter.com/sieSVuFXDe
— Ranvijay Singh (@ranvijaylive) November 6, 2022
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಸಣ್ಣ ಬಲ ಪ್ರಯೋಗಿಸಬೇಕಾಯಿತು ಎಂದು ಅವರು ಹೇಳಿದರು.
Published On - 1:55 pm, Mon, 7 November 22