ಉತ್ತರ ಪ್ರದೇಶ: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಮಕ್ಕಳಿಗೆ ಸೂಚಿಸಿದ ಶಿಕ್ಷಕಿ, ಇದು ಕೋಮುವಾದ ಎಂದ ನೆಟ್ಟಿಗರು

|

Updated on: Aug 26, 2023 | 1:10 PM

ಉತ್ತರ ಪ್ರದೇಶದಲ್ಲಿ ಶಿಕ್ಷಕಿಯೊಬ್ಬರು ಅನ್ಯಕೋಮಿನ ವಿದ್ಯಾರ್ಥಿಗೆ ಇತರ ವಿದ್ಯಾರ್ಥಿಗಳು ಸಾಲು ಸಾಲಾಗಿ ಬಂದು ಕಪಾಳಕ್ಕೆ ಹೊಡೆಯುವಂತೆ ಹೇಳುತ್ತಿರುವ ವೀಡಿಯೋ ಇದೀಗ ಎಲ್ಲ ಕಡೆ ವೈರಲ್​ ಆಗುತ್ತಿದೆ. ಈ ಬಗ್ಗೆ ಪತ್ರಕರ್ತ ಮೊಹಮ್ಮದ್ ಜುಬೇರ್​​​ ತಮ್ಮ ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶ: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಮಕ್ಕಳಿಗೆ ಸೂಚಿಸಿದ ಶಿಕ್ಷಕಿ, ಇದು ಕೋಮುವಾದ ಎಂದ ನೆಟ್ಟಿಗರು
ಸಾಂದರ್ಭಿಕ ಚಿತ್ರ
Follow us on

ಮುಜಾಫರ್‌ನಗರ, ಆ.26: ಉತ್ತರ ಪ್ರದೇಶದಲ್ಲಿ (Uttar Pradesh) ಶಿಕ್ಷಕಿಯೊಬ್ಬರು ಅನ್ಯಕೋಮಿನ ವಿದ್ಯಾರ್ಥಿಗೆ ಇತರ ವಿದ್ಯಾರ್ಥಿಗಳು ಸಾಲು ಸಾಲಾಗಿ ಬಂದು ಕಪಾಳಕ್ಕೆ ಹೊಡೆಯುವಂತೆ ಹೇಳುತ್ತಿರುವ ವೀಡಿಯೋ ಇದೀಗ ಎಲ್ಲ ಕಡೆ ವೈರಲ್​ ಆಗುತ್ತಿದೆ. ಈ ಬಗ್ಗೆ ಪತ್ರಕರ್ತ ಮೊಹಮ್ಮದ್ ಜುಬೇರ್​​​ ತಮ್ಮ ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಎಲ್ಲ ಕಡೆ ಅಕ್ರೋಶ ವ್ಯಕ್ತವಾಗಿದ್ದು, ಶಿಕ್ಷಕಿಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ವರದಿಗಳ ಪ್ರಕಾರ ಈ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದ ಖಾಸಗಿ ಶಾಲೆ ನಡೆದಿದೆ ಎಂದು ಹೇಳಲಾಗಿದೆ.

ಇನ್ನು ಈ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪೊಲೀಸರು ಶಿಕ್ಷಕಿಯ ಮೇಲೆ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದ್ದಾರೆ. ಶಿಕ್ಷಕಿಯನ್ನು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಈ ವಿಡಿಯೋದಲ್ಲಿ ಕೋಮುವಾದಿ ಪದಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿದ್ಯಾರ್ಥಿ ಗಣಿತ ಕೋಷ್ಟಕಗಳನ್ನು ಕಲಿಯಲಿಲ್ಲ ಎಂದು ಇತರ ವಿದ್ಯಾರ್ಥಿಗಳು ಬಂದು ಆತನ ಕಪಾಳಕ್ಕೆ ಹೊಡೆಯುವ ಶಿಕ್ಷೆಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ವಿಡಿಯೋದಲ್ಲಿ ಆಕ್ಷೇಪಾರ್ಹ ಹೇಳಿಕೆಗಳ ಬಗ್ಗೆ ನಾವು ಶಾಲೆಯ ಪ್ರಾಂಶುಪಾಲರೊಂದಿಗೆ ಮಾತನಾಡಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ ಪ್ರಜಾಪತ್ ಹೇಳಿದ್ದಾರೆ. ಇಲ್ಲಿ ಮುಸ್ಲಿಂ ಮಕ್ಕಳು ಶಿಕ್ಷಣದಿಂದ ಹಿಂದುಳಿದಿದ್ದಾರೆ. ಅವರ ಶೈಕ್ಷಣಿಕ ಕುಸಿತಕ್ಕೆ ಅವರ ತಾಯಂದಿರೇ ಕಾರಣ ಎಂದು ಶಾಲೆಯ ಪ್ರಾಂಶುಪಾಲರು ಹೇಳಿದ್ದಾರೆ. ಶಿಕ್ಷಕಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಇಲಾಖೆಗೆ ತಿಳಿಸಿದ್ದೇವೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳ ಸಂಸ್ಥೆಯು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದು, ವೈರಲ್​​ ಆಗಿರುವ ವಿಡಿಯೋವನ್ನು ಡಿಲಿಟ್​​ ಮಾಡುವಂತೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿಯ ತಂದೆ, ಅಧಿಕಾರಿಗಳ ಜತೆಗೆ ಶಾಲಾ ಶಿಕ್ಷಕರು ಒಪ್ಪಂದ ಮಾಡಿಕೊಂಡಿದ್ದಾರೆ. ಅವರು ನಮ್ಮ ಕಷ್ಟವನ್ನು ಕೇಳುವುದಿಲ್ಲ ಎಂದು ಆರೋಪಿಸಿದ್ದಾರೆ. ನನ್ನ ಮಗುವನ್ನು ಈ ಶಾಲೆಗೆ ಇನ್ನು ಮುಂದೆ ಕಳುಹಿಸುವುದಿಲ್ಲ, ನಾವು ನೀಡಿದ ಶಾಲಾ ಶುಲ್ಕವನ್ನು ಹಿಂದಿರುಗಿಸಿ, ಈ ವಿಚಾರವನ್ನು ಮುಂದುವರಿಸಲು ನಾನು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನಿನ್ನ ಲಿಂಗ ಬದಲಿಸುತ್ತೇನೆ ಎಂದು ಹೇಳಿ ಮಹಿಳೆಯ ಪ್ರಾಣವನ್ನೇ ತೆಗೆದ ಮಂತ್ರವಾದಿ

ಈ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಕೂಡ ಟ್ವೀಟ್​​ ಮಾಡಿದ್ದು, ಮುಗ್ಧ ಮಕ್ಕಳ ಮನದಲ್ಲಿ ತಾರತಮ್ಯದ ವಿಷಬೀಜ ಬಿತ್ತುವುದು, ಶಾಲೆಯಂತಹ ಪವಿತ್ರ ಸ್ಥಳವನ್ನು ದ್ವೇಷದ ಮಾರುಕಟ್ಟೆಯನ್ನಾಗಿ ಮಾಡುವುದು. ಶಿಕ್ಷಕನಿಂದ ದೇಶಕ್ಕೆ ಇದಕ್ಕಿಂತ ಕೆಟ್ಟದ್ದೇನೂ ಮಾಡಲು ಸಾಧ್ಯವಿಲ್ಲ. ಇದೇ ಬಿಜೆಪಿಯವರು ಸೀಮೆಎಣ್ಣೆ ಹರಡಿ ದೇಶದ ಮೂಲೆಮೂಲೆಗೂ ಹಾಕಿದ್ದಾರೆ. ಹೊತ್ತಿ ಉರಿಯುತ್ತಿರುವ ಭಾರತ, ಮಕ್ಕಳು ಭಾರತದ ಭವಿಷ್ಯ ಅವರನ್ನು ದ್ವೇಷಿಸಬೇಡಿ, ನಾವೆಲ್ಲರೂ ಒಟ್ಟಾಗಿ ಪ್ರೀತಿಯನ್ನು ಕಲಿಸಬೇಕು ಎಂದು ಹೇಳಿದ್ದಾರೆ.

ರಾಹುಲ್​​ ಗಾಂಧಿ ಟ್ವೀಟ್​​

ಮುಜಾಫರ್‌ನಗರ ಶಾಲೆಯ ವೈರಲ್​​ ಆಗಿರುವ ಈ ವೀಡಿಯೊ ಧಾರ್ಮಿಕ ವಿಭಜನೆಗೆ ಕಾರಣವಾಗಿದೆ. ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹಿಂಸಾಚಾರವನ್ನು ಹೇಗೆ ಪ್ರಚೋದಿಸುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಮುಜಫರ್‌ನಗರದ ನಮ್ಮ ಶಾಸಕರು ಮತ್ತು ಯುಪಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಮಗುವಿನ ಶಿಕ್ಷಣಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುತ್ತಾರೆ ಎಂದು ರಾಷ್ಟ್ರೀಯ ಲೋಕ ದಳದ ನಾಯಕ ಜಯಂತ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 1:08 pm, Sat, 26 August 23