Video Viral: ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಮೊಬೈಲ್​​ನಲ್ಲಿ ಪೋರ್ನ್ ವೀಡಿಯೊ ವೀಕ್ಷಿಸಿದ ಬಿಜೆಪಿ ಶಾಸಕ

ತ್ರಿಪುರಾ ವಿಧಾನಸಭೆಯ ಅಧಿವೇಶನದ ವೇಳೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಜದಬ್ ಲಾಲ್ ನಾಥ್ ಅವರು ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ ಸಿಕ್ಕಿಬಿದ್ದಿದ್ದಾರೆ. ಕರ್ನಾಟಕದ 2012ರ ಘಟನೆ ಮತ್ತೆ ನೆನಪಿಸಿಕೊಳ್ಳುತ್ತಿದೆ ವಿರೋಧ ಪಕ್ಷಗಳು.

Video Viral: ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಮೊಬೈಲ್​​ನಲ್ಲಿ ಪೋರ್ನ್ ವೀಡಿಯೊ ವೀಕ್ಷಿಸಿದ ಬಿಜೆಪಿ ಶಾಸಕ
ಸದನದಲ್ಲಿ ವಿಡಿಯೋ ನೋಡಿದ ಶಾಸಕ
Follow us
|

Updated on:Mar 30, 2023 | 5:34 PM

ಅಗರ್ತಲ: ತ್ರಿಪುರಾ ವಿಧಾನಸಭೆಯ ಅಧಿವೇಶನದ ವೇಳೆ ಭಾರತೀಯ ಜನತಾ ಪಕ್ಷದ (BJP) ಶಾಸಕ ಜದಬ್ ಲಾಲ್ ನಾಥ್ ಅವರು ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ ಸಿಕ್ಕಿಬಿದ್ದಿದ್ದಾರೆ. ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕ ಅಧಿವೇಶನ ನಡೆಯುತ್ತಿರುವಾಗ ಅವರ ಮೋಬೈಲ್​ನಲ್ಲಿ ಪೋರ್ನ್ ವೀಡಿಯೊ ನೋಡುತ್ತಿರುವ ದೃಶ್ಯ ಪತ್ತೆಯಾಗಿದೆ. ಇದು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಈ ಘಟನೆಯು ಪ್ರತ್ಯೇಕವಲ್ಲ, ಇದರಲ್ಲಿ ನನ್ನ ತಪ್ಪು ಇಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2012 ರಲ್ಲಿ, ಕರ್ನಾಟಕದಲ್ಲೂ ಇಂತಹ ಘಟನೆ ನಡೆದಿತ್ತು, ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಇಬ್ಬರು ವ್ಯಕ್ತಿಗಳು ಸದನ ನಡೆಯಬೇಕಾದರೆ ಮೊಬೈಲ್​​ನಲ್ಲಿ ಪೋರ್ನ್ ಕ್ಲಿಪ್​​ನ ವೀಕ್ಷಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಂತರ, ಸಚಿವರೊಬ್ಬರು ಶೈಕ್ಷಣಿಕ ಉದ್ದೇಶಗಳಿಗಾಗಿ ಮತ್ತು ರೇವ್ ಪಾರ್ಟಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ವೀಡಿಯೊವನ್ನು ವೀಕ್ಷಿಸುತ್ತಿದ್ದೇವು ಎಂದು ಹೇಳಿದರು. 2012ರ ಘಟನೆಯ ಕ್ಲಿಪ್‌ಗಳನ್ನು ವೀಕ್ಷಿಸುತ್ತಿದ್ದ ಸಹಕಾರ ಸಚಿವ ಲಕ್ಷ್ಮಣ ಸವದಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸಿಸಿ ಪಾಟೀಲ್ ಅವರೊಂದಿಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ:Viral News: 10 ವರ್ಷದ ಬಾಲಕನಿಗೆ ದಂತ ಶಸ್ತ್ರಚಿಕಿತ್ಸೆ ಮಾಡಿದ ತ್ರಿಪುರಾ ಸಿಎಂ

ಈ ವಿಚಾರವಾಗಿ ಇಬ್ಬರು ಕೂಡ ತಮ್ಮ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದರು. 2019 ರಲ್ಲಿ, ಆಗಿನ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲಕ್ಷ್ಮಣ್ ಸವದಿ ಅವರನ್ನು ತಮ್ಮ ಮೂವರು ಉಪ ಮುಖ್ಯಮಂತ್ರಿಗಳಲ್ಲಿ ಒಬ್ಬರನ್ನಾಗಿ ನೇಮಿಸಿದರು. ಲಕ್ಷ್ಮಣ್ ಸವದಿ ಅವರ ನೇಮಕವನ್ನು ವಿರೋಧಿಸಿ ಕರ್ನಾಟಕ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಅಂದಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದರು.

ಇತ್ತೀಚಿಗೆ, ಬಿಹಾರದ ಪಾಟ್ನಾ ಜಂಕ್ಷನ್ ರೈಲು ನಿಲ್ದಾಣವು ಸುಮಾರು ಮೂರು ನಿಮಿಷಗಳ ಕಾಲ ಪ್ಲಾಟ್‌ಫಾರ್ಮ್‌ನ ಟಿವಿ ಪರದೆಯ ಮೇಲೆ ಪ್ರದರ್ಶಿಸಲಾದ ಅಶ್ಲೀಲ ವಿಡಿಯೋ ಭಾರಿ ಸದ್ದು ಮಾಡಿತ್ತು.

Published On - 5:28 pm, Thu, 30 March 23

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​