Video Viral: ಬೇಟಿ ಬಚಾವೋ ಕಾರ್ಯಕ್ರಮದ ವೇದಿಕೆ ಮೇಲೆ ವ್ಯಕ್ತಿಯೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ

ದೆಹಲಿಯಲ್ಲಿ ನಡೆದ ಮಹಿಳಾ ಸಬಲೀಕರಣ ಕಾರ್ಯಕ್ರಮದ ವೇದಿಕೆಯಲ್ಲಿ ತನ್ನ ಸಮಸ್ಯೆಗಳನ್ನು ಹೇಳಲು ವೇದಿಕೆಗೆ ಬಂದ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಪಕ್ಕಕ್ಕೆ ತಿರುಗಿ ವ್ಯಕ್ತಿಯೊಬ್ಬನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ.

Video Viral: ಬೇಟಿ ಬಚಾವೋ ಕಾರ್ಯಕ್ರಮದ ವೇದಿಕೆ ಮೇಲೆ ವ್ಯಕ್ತಿಯೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ
Video Viral
Updated By: ಅಕ್ಷಯ್​ ಪಲ್ಲಮಜಲು​​

Updated on: Nov 29, 2022 | 4:11 PM

ಚತ್ತರ್‌ಪುರ: ದೆಹಲಿಯಲ್ಲಿ ನಡೆದ ಮಹಿಳಾ ಸಬಲೀಕರಣ ಕಾರ್ಯಕ್ರಮದ ವೇದಿಕೆಯಲ್ಲಿ ತನ್ನ ಸಮಸ್ಯೆಗಳನ್ನು ಹೇಳಲು ವೇದಿಕೆಗೆ ಬಂದ ಮುಸುಕುಧಾರಿ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಪಕ್ಕಕ್ಕೆ ತಿರುಗಿ ವ್ಯಕ್ತಿಯೊಬ್ಬನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ರಾಜಧಾನಿಯ ಚತ್ತರ್‌ಪುರ ಪ್ರದೇಶದ ಮಹಾಪಂಚಾಯತ್‌ನಲ್ಲಿ ನಡೆದ ಹಿಂದೂ ಏಕತಾ ಮಂಚ್‌ನ ‘ಬೇಟಿ ಬಚಾವೋ’ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಇದನ್ನು ಓದಿ: ಐವರು ಜೈಶ್ ಉಗ್ರರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವಿಡಿಯೊ ಒಂದನ್ನು ಹಂಚಿಕೊಂಡಿದೆ. ವೀಡಿಯೊದಲ್ಲಿ, ಮಹಿಳೆಯೊಬ್ಬರು ವೇದಿಕೆಯಲ್ಲಿ ತಾನು ಅನುಭವಿಸಿದ ಕಷ್ಟಗಳನ್ನು ವಿವರಿಸುತ್ತಿರುವಾಗ ಒಬ್ಬ ವ್ಯಕ್ತಿ ಹತ್ತಿರ ನಿಂತಿರುವುದು ಕಂಡು. ತಕ್ಷಣ ಮಹಿಳೆ ಮಾತನಾಡುವುದನ್ನು ನಿಲ್ಲಿಸಿ ಆ ವ್ಯಕ್ತಿಯ ಕಡೆಗೆ ತಿರುಗಿ ತನ್ನ ಚಪ್ಪಲಿಗಳನ್ನು ತೆಗೆದು ಮೈಕ್‌ನಿಂದ ದೂರ ತಳ್ಳಿ ಆತನಿಗೆ ಹೊಡೆಯಲು ಪ್ರಾರಂಭಿಸಿದ್ದಾಳೆ. ವೇದಿಕೆಯಲ್ಲಿದ್ದ ಇತರರು ತಕ್ಷಣ ಅಲ್ಲಿಗೆ ಬಂದು ಆಕೆಯನ್ನು ವೇದಿಕೆಯಿಂದ ಕರೆದೊಯ್ದು ಸಮಾಧಾನ ಪಡಿಸಿದ್ದಾರೆ. ಇದುವರೆಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ. ಆದರೆ ಆಕೆ ಯಾಕೆ? ಆತನ ಮೇಲೆ ಹಲ್ಲೆ ಮಾಡಿದ್ದಾಳೆ ಎಂದು ತಿಳಿದು ಬಂದಿಲ್ಲ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಭೀಕರ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದೇ ರೀತಿಯ ಮತ್ತೊಂದು ಕೊಲೆ ಭಾನುವಾರ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ