Video Viral: ಬಾವಿಗೆ ಬಿದ್ದ ಪುಟ್ಟ ಆನೆಯನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿಗಳು

ಆನೆಯೊಂದು ಬಾವಿ ಬಿದ್ದ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸೋಮವಾರದಂದು ರಾತ್ರಿ ಆನೆಯು ಬಾವಿಗೆ ಬಿದ್ದಿದೆ. ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ.

Video Viral: ಬಾವಿಗೆ ಬಿದ್ದ ಪುಟ್ಟ ಆನೆಯನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿಗಳು
Video Viral Forest guards rescued a baby elephant that fell into a well
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 15, 2022 | 4:45 PM

ಚಿತ್ತೂರಿ: ಆನೆಯೊಂದು ಬಾವಿ ಬಿದ್ದ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸೋಮವಾರದಂದು ರಾತ್ರಿ ಆನೆಯು ಬಾವಿಗೆ ಬಿದ್ದಿದೆ. ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವೀಡಿಯೊದಲ್ಲಿ ಜೆಸಿಬಿ ಯಂತ್ರದಿಂದ ಬಾವಿಯ ಗೋಡೆಯ ಒಂದು ಭಾಗವನ್ನು ಧ್ವಂಸಗೊಳಿಸಿ ಆನೆಗೆ ಹೊರಬರಲು ಇಳಿಜಾರು ರೀತಿಯ ಹಾದಿಯನ್ನು ಮಾಡಿಕೊಟ್ಟಿದ್ದಾರೆ. ಈ ಬಾವಿ ತುಂಬಾ ಆಳವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾವಿಯೊಳಗೆ ಸಿಕ್ಕಿಬಿದ್ದ ಆನೆಯನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಈ ಪುಟ್ಟ ಆನೆಯು ಆತಂಕದಿಂದ ಬಾವಿಯೊಳಗೆ ತಿರುಗಾಡುತ್ತಾ ಗೋಡೆಯ ಮೇಲೆ ಏರಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದಾರಿ ಮಾಡಿಕೊಡಲು ಬಾವಿ ಗೋಡೆಯ ಒಂದು ಭಾಗವನ್ನು ಕೆಡವಿದಾಗ ಇದು ಆನೆಯ ಮರಿ ಎಂದು ಹೇಳಲಾಗಿದೆ. ನಂತರ ಆನೆ ಅಧಿಕಾರಿಗಳು ಮಾಡಿಕೊಟ್ಟ ದಾರಿಯಲ್ಲಿ ಹೊರಗೆ ಬರುತ್ತದೆ. ಅಪಾಯದಿಂದ ಪಾರದ ಆನೆಯು  ಕಾಡಿನತ್ತ ತೆರಳುತ್ತಿದ್ದಂತೆ ಸ್ಥಳೀಯರು ಮೊಬೈಲ್‌ ಕ್ಯಾಮೆರಾದಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ಇದೇ ರೀತಿಯ ಉತ್ತರ ಪ್ರದೇಶದ ಘಟನೆಯ ಬಗ್ಗೆ ಪ್ರಾಣಿ ರಕ್ಷಣಾ ಎನ್‌ಜಿಒ ಸದಸ್ಯರು ಹಂಚಿಕೊಂಡಿದ್ದಾರೆ. ಭಾನುವಾರ ಉತ್ತರ ಪ್ರದೇಶದ ಆಗ್ರಾದ ಹಳ್ಳಿಯೊಂದರಲ್ಲಿ 40 ಅಡಿ ತೆರೆದ ಬೋರ್‌ವೆಲ್‌ನಿಂದ ಗಂಡು ನರಿಯನ್ನು ರಕ್ಷಿಸಿದ್ದಾರೆ. ಅದನ್ನು ನಂತರದಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅದನ್ನು ಪ್ರಾಣಿಯನ್ನು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಬಿಡಲಾಗಿದೆ. ಅದೇ ದಿನ, ಎನ್‌ಜಿಒ ಎರಡು ದೊಡ್ಡ ಹಾವುಗಳನ್ನು ರಕ್ಷಿಸಿತು- ಏಳು ಅಡಿ ಭಾರತೀಯ ರಾಕ್ ಹೆಬ್ಬಾವು (ಆಗ್ರಾದಲ್ಲಿ ಕಂಡು ಬಂದ ಹಾವು) ಮತ್ತು ಆರು ಅಡಿ ಹೆಬ್ಬಾವನ್ನು ಏರ್ ಫೋರ್ಸ್ ಸ್ಟೇಷನ್‌ನಲ್ಲಿರುವ ಸಿವಿಲ್ ಏರ್‌ಪೋರ್ಟ್ ಆವರಣದಲ್ಲಿ ರಕ್ಷಿಸಲಾಗಿದೆ.

Published On - 4:43 pm, Tue, 15 November 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್