Video Viral: ರೈಲಿನ ಎಸಿ ಕೋಚ್‌ನ ಮೇಲ್ಛಾವಣಿ ಸೋರಿಕೆ, ರೈಲ್ವೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ

ರೈಲಿನ ಮೇಲ್ಛಾವಣಿನಿಂದ ನೀರು ಸೋರುತ್ತಿರುವ ವೀಡಿಯೊ ಇದೀಗ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಅಕ್ರೋಶ ಕೂಡ ವ್ಯಕ್ತವಾಗಿದೆ. ಪ್ಯಾಸೆಂಜರ್ ರೈಲು ಕೋಚ್‌ನ ಮೇಲ್ಛಾವಣಿಯಿಂದ ನೀರು ಸೋರುತ್ತಿದ್ದು, ಇದೀಗ ಭಾರತೀಯ ರೈಲ್ವೇಯು ಅಪಹಾಸ್ಯಕ್ಕೆ ಕಾರಣವಾಗಿದೆ.

Video Viral: ರೈಲಿನ ಎಸಿ ಕೋಚ್‌ನ ಮೇಲ್ಛಾವಣಿ ಸೋರಿಕೆ, ರೈಲ್ವೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 26, 2023 | 10:53 AM

ಬಸ್​​, ಆಟೋ, ಕಾರು, ಇನ್ನಿತರ ವಾಹನಗಳ ಮೇಲ್ಛಾವಣಿನಿಂದ ನೀರು ಸೋರುವುದು ಸಹಜ, ಆದರೆ ರೈಲಿನ ಮೇಲ್ಛಾವಣಿನಿಂದ ನೀರು ಸೋರುತ್ತಿರುವ ವೀಡಿಯೊ ಇದೀಗ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಅಕ್ರೋಶ ಕೂಡ ವ್ಯಕ್ತವಾಗಿದೆ. ಪ್ಯಾಸೆಂಜರ್ ರೈಲು ಕೋಚ್‌ನ ಮೇಲ್ಛಾವಣಿಯಿಂದ ನೀರು ಸೋರುತ್ತಿದ್ದು, ಇದೀಗ ಭಾರತೀಯ ರೈಲ್ವೇಯು ಅಪಹಾಸ್ಯಕ್ಕೆ ಕಾರಣವಾಗಿದೆ. ಆವಂತಿಕಾ ಎಕ್ಸ್‌ಪ್ರೆಸ್‌ನ ಪ್ರಯಾಣಿಕರೊಬ್ಬರು ಮಳೆಯ ಸಮಯದಲ್ಲಿ ಎಸಿ ಕೋಚ್‌ನ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗಿರುವುದನ್ನು ವೀಡಿಯೊ ಮಾಡಿದ್ದಾರೆ.

ಈ ವೀಡಿಯೊವನ್ನು ಕಾಂಗ್ರೆಸ್ ಟ್ವಿಟರ್​​​ನಲ್ಲಿ​​ ಮರುಹಂಚಿಕೊಂಡಿದ್ದು, “ರೈಲ್ವೆಗೆ ಸಂಬಂಧಿಸಿದಂತೆ ಪೊಳ್ಳು ಪ್ರಚಾರದ ಬದಲು ಒಂದಿಷ್ಟು ಕೆಲಸ ಮಾಡಿದ್ದರೆ ಒಳ್ಳೆಯದು ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದೆ. ಹೊಸ ರೈಲು ಬಂದಾಗ ಅನಾವರಣಗೊಳಿಸುವ ವ್ಯಕ್ತಿ (ಪ್ರಧಾನಿ)ಪ್ರಸ್ತುತ ವಿದೇಶದಲ್ಲಿದ್ದಾರೆ, ಈ ಬಗ್ಗೆ ರೈಲ್ವೆ ಸಚಿವರು ಗಮನಹರಿಸಬೇಕು, ಜತೆಗೆ ಇಲ್ಲಿಯವರೆಗೆ 18 ವಂದೇ ಭಾರತ್ ಎಕ್ಸ್‌ಪ್ರೆಸ್​​ನ್ನು ಫ್ಲ್ಯಾಗ್ ಆಫ್ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರೇ ನೀವು ಆಗಮಿಸಿಬೇಕು ಎಂದು ಅವರಿಗೂ ಟ್ಯಾಗ್​​​ ಮಾಡಿದೆ.

ಈ ಬಗ್ಗೆ ಮಹಿಳಾ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜಾ ಟ್ವೀಟ್ ಮಾಡಿದ್ದು, ಭಾರತೀಯ ರೈಲ್ವೇ ದುಸ್ಥಿತಿಗೆ ಯಾರು ಹೊಣೆ? ಎಂದು ಪ್ರಶ್ನೆ ಮಾಡಿದ್ದಾರೆ. ಈ ವೀಡಿಯೊವನ್ನು ನೋಡಿದ ಅನೇಕರು ಭಾರತೀಯ ರೈಲ್ವೆಯು ತೆರೆದ ಶವರ್ ಸೌಲಭ್ಯದೊಂದಿಗೆ ಹೊಸ ಸೂಟ್ ಕೋಚ್ ಅನ್ನು ಪ್ರಾರಂಭಿಸಿದೆ ಎಂದು ಟ್ವಿಟರ್ ಬಳಕೆದಾರರು ವ್ಯಂಗ್ಯವಾಗಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಭಾರತೀಯ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಶವರ್ ಜೆಲ್, ಶಾಂಪೂ ಮತ್ತು ಬಾತ್ರೋಬ್​​ನ್ನು ಒದಗಿಸಲು ಚರ್ಚಿಸುತ್ತಿವೆ ಎಂದು ಬಳಕೆದಾರರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Viral Video: ಕೋಕ್​ ಸ್ಟುಡಿಯೋದ ‘ಕನ ಯಾರೀ’ ಹಾಡಿಗೆ ಫ್ರೀ ಸ್ಟೈಲ್​ ನೃತ್ಯ

ವೆಸ್ಟರ್ನ್ ರೈಲ್ವೇ ಈ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಿದೆ ಮತ್ತು ಆವಂತಿಕಾ ಎಕ್ಸ್‌ಪ್ರೆಸ್‌ನ ಎಲ್ಲಾ ಕೋಚ್‌ಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈಗ ಎಲ್ಲವೂ ಸರಿಯಾಗಿದೆ ಮತ್ತೆ ಆ ರೈಲು ಪ್ರಯಾಣಿಸಲಿದೆ. ಈಗ ಅಂತಹ ಯಾವುದೇ ಸಮಸ್ಯೆಗಳು ಬರುವುದಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Mon, 26 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ