ರಸ್ತೆ ದಾಟುತ್ತಿದ್ದಾಗ ಬಸ್ಸಿನಡಿಗೆ ಬಿದ್ದ ವೃದ್ಧ; ಬಸ್ಸು ಹರಿದರೂ ಪ್ರಾಣಾಪಾಯದಿಂದ ಪಾರಾಗಿ ಎದ್ದು ಬಂದ ವಿಡಿಯೊ ವೈರಲ್

ಬಸ್ಸೊಂದು ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೊವೈ ಪ್ರದೇಶದಲ್ಲಿ ನಡೆದಿದೆ. ಇದೀಗ ಈ ಭಯಾನಕ ವಿಡಿಯೊ ಎಲ್ಲ ಕಡೆ ವೈರಲ್ ಆಗುತ್ತಿದೆ.

ರಸ್ತೆ ದಾಟುತ್ತಿದ್ದಾಗ ಬಸ್ಸಿನಡಿಗೆ ಬಿದ್ದ ವೃದ್ಧ; ಬಸ್ಸು ಹರಿದರೂ ಪ್ರಾಣಾಪಾಯದಿಂದ ಪಾರಾಗಿ ಎದ್ದು ಬಂದ ವಿಡಿಯೊ ವೈರಲ್
The old man who punched the bus, the terrible scene was found on CCTV Image Credit source: ANI
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 15, 2022 | 1:48 PM

ಮುಂಬೈ: ಬಸ್ಸೊಂದು ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೊವೈ ಪ್ರದೇಶದಲ್ಲಿ ನಡೆದಿದೆ. ಆದರೆ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಇದೀಗ ಈ ವಿಡಿಯೊ ವೈರಲ್ ಆಗಿದೆ.

ಪೊವೈನಲ್ಲಿ ಬಸ್ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಅವರನ್ನು ಕೆಳಗೆ ಹಾಕಿ ಬಸ್ ಮುಂದೆ ಚಲಿಸಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದಾರೆ. ಇದೀಗ ಈ ಘಟನೆಯು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಹಿಡಿಯಲ್ಪಟ್ಟಿದೆ. ಕುರ್ತಾ-ಪೈಜಾಮಾ ಧರಿಸಿದ್ದ ವ್ಯಕ್ತಿ ರಸ್ತೆ ದಾಟುತ್ತಿರುವಾಗ ವಿದ್ಯಾರ್ಥಿಗಳಿದ್ದ ಬಸ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ಇದನ್ನು ಓದಿ:ಮುಂಬೈ ಬಳಿ 10ನೇ ತರಗತಿ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಬರುತ್ತಿದ್ದಾಗ ಬಸ್ ಪಲ್ಟಿ; ಇಬ್ಬರು ಮಕ್ಕಳು ಸಾವು

ವೃದ್ಧ ವ್ಯಕ್ತಿ ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಬರುವ ವಾಹನಗಳಿಗೆ ದಾರಿ ಮಾಡಿಕೊಡಲು ಕಿರಿದಾದ ಮಾರ್ಗದಲ್ಲಿ ಬಸ್‌ ನಿಂತಿತ್ತು. ಆದರೆ ಈ ವಿಡಿಯೊದಲ್ಲಿ ವೃದ್ಧಗೆ ಬಸ್ ಡಿಕ್ಕಿ ಹೊಡೆದು ಕೆಳಗೆ ಬೀಳುತ್ತಾರೆ, ನಂತರ ಅವರನ್ನು ಬಸ್ಸಿನ ಕೆಳಗೆ ಹಾಕಿಕೊಂಡಿ ಹೋಗುವುದು ಕಾಣಬಹುದು. ಆ ವೃದ್ಧ ಎದ್ದೇಳಲು ಪ್ರಯತ್ನಿಸುತ್ತಾರೆ. ಬಸ್ ಬಳಿ ಬರುತ್ತಾರೆ.

ಫ್ಯಾಷನಬಲ್ ಪೊವೈ ಪ್ರದೇಶದ ಲೇಕ್‌ಸೈಡ್ ಸಂಕೀರ್ಣದ ಸಮೀಪವಿರುವ ಎವರೆಸ್ಟ್ ಹೈಟ್ಸ್ ಕಟ್ಟಡದ ಹೊರಗೆ ಮಂಗಳವಾರ ಈ ಘಟನೆ ನಡೆದಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವನ್ನು @mypowai Twitter ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ.

ಡಿವೈಡರ್ ಇಲ್ಲದ ಕಿರಿದಾದ ದಾರಿಯಲ್ಲಿ ಜನರು ಓಡಾಡುತ್ತಿರುವುದನ್ನು ಕಾಣಬಹುದು ಈ ರಸ್ತೆಯಲ್ಲಿ ವಾಹನಗಳು ನಿಧಾನವಾಗಿ ಚಲಿಸುತ್ತಿತ್ತು ಮತ್ತು ಹಲವಾರು ಪಾದಚಾರಿಗಳು ಸುತ್ತಲೂ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಆಘಾತಕ್ಕೊಳಗಾದ ಪಾದಚಾರಿಯನ್ನು ಕಂಡು ಭದ್ರತಾ ಸಿಬ್ಬಂದಿಗಳು ಬಸ್ ಚಾಲಕನನ್ನು ಕೂಗಿದ್ದಾರೆ, ಆತ ಬಸ್​ ನಿಲ್ಲಿಸಿ, ಬಸ್ಸಿನಿಂದ ಕೆಳಗೆ ಇಳಿದು ಅಲ್ಲಿ ಕೆಲವೊಂದು ವಾದ-ವಿವಾದಗಳು ನಡೆಯುತ್ತದೆ. ಆದರೆ ಈ ಘಟನೆಯ ಬಗ್ಗೆ ಯಾವುದೇ ದೂರು ದಾಖಲು ಆಗಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Thu, 15 December 22

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್