AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Rally Stampede: ಕರೂರ್ ಕಾಲ್ತುಳಿತದ ಬೆನ್ನಲ್ಲೇ ನಟ ವಿಜಯ್‌ಗೆ ಬಾಂಬ್ ಬೆದರಿಕೆ

ತಮಿಳುನಾಡಿನ ಕರೂರಿನಲ್ಲಿ ಶನಿವಾರ ಟಿವಿಕೆ ಪ್ರಚಾರದ ರ‍್ಯಾಲಿ ವೇಳೆ ಕಾಲ್ತುಳಿತ ಉಂಟಾಗಿತ್ತು. ಈ ಘಟನೆಯಲ್ಲಿ 40 ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಮರುದಿನವೇ ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಚೆನ್ನೈ ನಿವಾಸಕ್ಕೆ ಭದ್ರತೆ ಬಿಗಿಗೊಳಿಸಲಾಗಿದೆ. ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದ್ದು, ಬಾಂಬ್ ಬೆದರಿಕೆ ಹಾಕಿದವರು ಯಾರೆಂಬುದರ ತನಿಖೆ ನಡೆಯುತ್ತಿದೆ.

Vijay Rally Stampede: ಕರೂರ್ ಕಾಲ್ತುಳಿತದ ಬೆನ್ನಲ್ಲೇ ನಟ ವಿಜಯ್‌ಗೆ ಬಾಂಬ್ ಬೆದರಿಕೆ
Actor Vijay
ಸುಷ್ಮಾ ಚಕ್ರೆ
|

Updated on: Sep 29, 2025 | 9:07 AM

Share

ಚೆನ್ನೈ, ಸೆಪ್ಟೆಂಬರ್ 29: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್ (Vijay) ಅವರಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಶನಿವಾರ ಟಿವಿಕೆ ರ‍್ಯಾಲಿ ವೇಳೆ ಕಾಲ್ತುಳಿತ (Karur Stampede) ಉಂಟಾಗಿ 40 ಜನರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

ಕರೂರ್‌ನಲ್ಲಿ ನಡೆದ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10 ಮಕ್ಕಳು, 17 ಮಹಿಳೆಯರು ಮತ್ತು 13 ಪುರುಷರು ಸೇರಿದಂತೆ 40 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಈ ಘಟನೆಯ ನಂತರ, ನಟ-ರಾಜಕಾರಣಿ ವಿಜಯ್ ಪ್ರತಿಕ್ರಿಯೆ ನೀಡಿದ್ದು, ಈ ಘಟನೆಯಿಂದ ನನ್ನ ಹೃದಯ ಛಿದ್ರಗೊಂಡಿದೆ ಎಂದು ಹೇಳಿದ್ದರು. ಎಕ್ಸ್ (ಹಿಂದೆ ಟ್ವಿಟರ್) ಪೋಸ್ಟ್‌ನಲ್ಲಿ 51 ವರ್ಷದ ವಿಜಯ್ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸಿದ್ದರು ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದರು. ಆದರೆ, ಇದುವರೆಗೂ ಅವರು ಆಸ್ಪತ್ರೆಗೆ ಭೇಟಿ ನೀಡಿಲ್ಲ, ಮೃತರ ಕುಟುಂಬಸ್ಥರನ್ನೂ ಭೇಟಿಯಾಗಿಲ್ಲ.

ಇದನ್ನೂ ಓದಿ: ಕರೂರಿನ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಸಹಾಯಧನ ಘೋಷಿಸಿದ ಪ್ರಧಾನಿ ಮೋದಿ

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ 20 ಲಕ್ಷ ರೂ.ಗಳನ್ನು ನೀಡುವುದಾಗಿ ವಿಜಯ್ ಘೋಷಿಸಿದ್ದಾರೆ. ಇದಲ್ಲದೆ, ಗಾಯಾಳುಗಳಿಗೆ ತಲಾ 2 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ವಿಜಯ್ ಅವರ ಪಕ್ಷವು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಕಾಲ್ತುಳಿತದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಅಥವಾ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ