ಮುಂಬೈನ ವಿರಾರ್‌ನ ವಿಜಯ ವಲ್ಲಭ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ, 13 ಜನರ ಸಾವು
ಐಸಿಯುನಲ್ಲಾದ ಅಗ್ನಿ ದುರಂತ ಘಟನೆಯಲ್ಲಿ ಹಲವರು ಗಾಯಗೊಂಡಿರುವ ಮಾಹಿತಿ ಸಿಕ್ಕಿದೆ. ಇನ್ನು ಘಟನೆ ಬಳಿಕ ವಿಜಯ ವಲ್ಲಭ ಆಸ್ಪತ್ರೆಯ ರೋಗಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ.
ಮುಂಬೈ: ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ 13 ಜನ ಮೃತಪಟ್ಟಿರುವ ಘಟನೆ ಮುಂಬೈನ ವಿರಾರ್‌ನಲ್ಲಿರುವ ವಿಜಯ ವಲ್ಲಭ ಆಸ್ಪತ್ರೆಯಲ್ಲಿ ನಡೆದಿದೆ. ಇಂದು ಮುಂಜಾನೆ 3.15ರ ವೇಳೆಗೆ ಆಸ್ಪತ್ರೆಯ ICU ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದ್ದು ಐಸಿಯುನಲ್ಲಾದ ಅಗ್ನಿ ದುರಂತ ಘಟನೆಯಲ್ಲಿ ಹಲವರು ಗಾಯಗೊಂಡಿರುವ ಮಾಹಿತಿ ಸಿಕ್ಕಿದೆ. ಆಸ್ಪತ್ರೆಯ ICUನಲ್ಲಿ 17 ಜನರು ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ಘಟನೆ ಬಳಿಕ ವಿಜಯ ವಲ್ಲಭ ಆಸ್ಪತ್ರೆಯ ರೋಗಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಕೇಳಿ ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಘಟನಾಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುತ್ತಿದ್ದಾರೆ.
12 patients have died in the fire at Vasai Covid hospital: Corona Control Room, Vasai Virar Municipal Corporation
— ANI (@ANI) April 23, 2021
Maharashtra: Fire breaks out at a COVID Center in Vasai of Palghar district. Affected patients are being shifted to nearby hospitals. Details awaited. pic.twitter.com/QfclEgBvvj
— ANI (@ANI) April 23, 2021
ಮೃತರ ಕುಟುಂಬಕ್ಕೆ ಪ್ರಧಾನಿ ಪರಿಹಾರ ಮಹಾರಾಷ್ಟ್ರದ ವಿರಾರ್ ವಿಜಯ ವಲ್ಲಭ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಗಡ ದುರಂತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖಲಾಗಲೆಂದು ಹಾರೈಸಿದ್ದಾರೆ. ಹಾಗೂ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
PM @narendramodi has approved an ex-gratia of Rs. 2 lakh each from PMNRF for the next of kin of those who have lost their lives due to the hospital fire in Virar, Maharashtra. Rs. 50,000 would be given to those seriously injured.
— PMO India (@PMOIndia) April 23, 2021
ಇದನ್ನೂ ಓದಿ: ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು
Published On - 7:16 am, Fri, 23 April 21