AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್‌ಗೆ ಬಹುಮತ ಸಾಬೀತಿನ ಸವಾಲು ಹಾಕಿದ ರಾಜ್ಯಪಾಲರು, ಕೋರ್ಟ್ ಮೆಟ್ಟಿಲೇರಲು ಟಿವಿಕೆ ಸಿದ್ಧತೆ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಸರ್ಕಾರ ರಚನೆಗೆ ಹೆಣಗುತ್ತಿದೆ. ರಾಜ್ಯಪಾಲರು ಬಹುಮತ ಸಾಬೀತುಪಡಿಸಲು 118 ಶಾಸಕರ ಅಧಿಕೃತ ಪತ್ರ ಕೇಳಿದ್ದಾರೆ. 113 ಬೆಂಬಲ ಹೊಂದಿರುವ ವಿಜಯ್, ಇತರ ಪಕ್ಷಗಳ ಬೆಂಬಲದ ಭರವಸೆ ನೀಡಿದ್ದಾರೆ. ಮೈತ್ರಿ ಸವಾಲುಗಳು, ಶಾಸಕರ ರೆಸಾರ್ಟ್‌ ಸ್ಥಳಾಂತರ ಮತ್ತು ರಾಷ್ಟ್ರಪತಿ ಆಳ್ವಿಕೆಯ ಭೀತಿ ಎದುರಾಗಿದೆ.

ವಿಜಯ್‌ಗೆ ಬಹುಮತ ಸಾಬೀತಿನ ಸವಾಲು ಹಾಕಿದ ರಾಜ್ಯಪಾಲರು, ಕೋರ್ಟ್ ಮೆಟ್ಟಿಲೇರಲು ಟಿವಿಕೆ ಸಿದ್ಧತೆ
ವಿಜಯ್
ನಯನಾ ರಾಜೀವ್
|

Updated on:May 07, 2026 | 2:45 PM

Share

ಚೆನ್ನೈ, ಮೇ 07: ತಮಿಳುನಾಡು(Tamil Nadu) ವಿಧಾನಸಭಾ ಚುನಾವಣೆಯಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಜಯ ದಾಖಲಿಸಿರುವ ನಟ ವಿಜಯ್ ಅವರ ‘ತಮಿಳುಗ ವೆಟ್ರಿ ಕಳಗಂ’ (TVK) ಅಧಿಕಾರದ ಗದ್ದುಗೆ ಏರಲು ಕೊನೆಯ ಹಂತದ ಕಾನೂನು ಮತ್ತು ಸಂಖ್ಯಾಬಲದ ಹೋರಾಟ ನಡೆಸುತ್ತಿದೆ. ಗುರುವಾರ ಬೆಳಿಗ್ಗೆ ವಿಜಯ್ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಆರ್‌ವಿ ಅರ್ಲೇಕರ್, ಮೊದಲು 118 ಶಾಸಕರ ಬೆಂಬಲವಿರುವ ಅಧಿಕೃತ ಪತ್ರ ತನ್ನಿ ಎಂದು ಕಠಿಣ ಷರತ್ತು ವಿಧಿಸಿದ್ದಾರೆ.

ಸುಮಾರು ಎರಡು ದಿನಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್ ಅವರಿಗೆ ಸಂವಿಧಾನದ ಚೌಕಟ್ಟಿನೊಳಗೆ ಹಲವು ಪ್ರಶ್ನೆಗಳನ್ನು ಎದುರಿಸಬೇಕಾಯಿತು. ಕೇವಲ 113 ಶಾಸಕರನ್ನು (ಟಿವಿಕೆ 108 + ಕಾಂಗ್ರೆಸ್ 5) ಇಟ್ಟುಕೊಂಡು ಸರ್ಕಾರ ಹೇಗೆ ನಡೆಸುತ್ತೀರಿ? ಎನ್ನುವ ಪ್ರಶ್ನೆ ಕೇಳಲಾಗಿದೆ.

ಸಿಪಿಐ, ಸಿಪಿಐ(ಎಂ), ವಿಸಿಕೆ ಮತ್ತು ಪಿಎಂಕೆ ಪಕ್ಷಗಳ ಬೆಂಬಲದೊಂದಿಗೆ ನಮ್ಮ ಸಂಖ್ಯಾಬಲ 123 ಕ್ಕೆ ಏರಲಿದೆ. ಬಹುಮತ ಸಾಬೀತುಪಡಿಸಲು ನಾನು ಸಿದ್ಧ ಎಂದು ವಿಜಯ್ ಹೇಳಿದ್ದಾರೆ.

ಮತ್ತಷ್ಟು ಓದಿ: ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ

ರಾಜ್ಯಪಾಲರು ಮಾತ್ರ ಕೇವಲ ಬಾಯಿಮಾತಿನ ಭರವಸೆಗೆ ಒಪ್ಪುತ್ತಿಲ್ಲ. ಮೇಜಿನ ಮೇಲೆ ಭೌತಿಕವಾಗಿ ಬೆಂಬಲ ಪತ್ರಗಳಿಲ್ಲದ ಹೊರತು ಪ್ರಮಾಣವಚನಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರ್ಲೇಕರ್ ಪಟ್ಟು ಹಿಡಿದಿದ್ದಾರೆ. ವಿಜಯ್ ಅವರ ಮುಂದಿರುವ ಅತಿದೊಡ್ಡ ಸವಾಲೆಂದರೆ ತಮ್ಮ ಮೈತ್ರಿಕೂಟದ ಪಕ್ಷಗಳನ್ನು ಒಗ್ಗೂಡಿಸುವುದು. ಬಿಜೆಪಿ ಜೊತೆ ಟಿವಿಕೆ ಯಾವುದೇ ಸಂಬಂಧ ಇಟ್ಟುಕೊಳ್ಳಬಾರದು ಎಂಬ ಷರತ್ತಿನ ಮೇಲೆ ಕಾಂಗ್ರೆಸ್ ಬೆಂಬಲ ನೀಡಿದೆ.

ವಿಸಿಕೆ ಮತ್ತು ಪಿಎಂಕೆ ಗೊಂದಲ: ವಿಸಿಕೆ ಸದ್ಯ ಡಿಎಂಕೆ ಜೊತೆಗಿದ್ದರೆ, ಪಿಎಂಕೆ ಬಿಜೆಪಿಯ ಮಿತ್ರಪಕ್ಷವಾಗಿದೆ. ವಿಜಯ್ ಜೊತೆ ಸೇರಬೇಕೆಂದರೆ ಈ ಎರಡೂ ಪಕ್ಷಗಳು ತಮ್ಮ ಹಾಲಿ ಮೈತ್ರಿಕೂಟದಿಂದ ಹೊರಬರಬೇಕಿದೆ. ಒಂದು ವೇಳೆ ಈ ಎಲ್ಲಾ ಪಕ್ಷಗಳು ಒಂದಾದರೆ ವಿಜಯ್ ಅವರ ಸಂಖ್ಯಾಬಲ 122 (ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ನಂತರ) ತಲುಪಲಿದೆ.

ಇನ್ನೊಂದೆಡೆ, ಎಐಎಡಿಎಂಕೆಯ ಒಂದು ಬಣ ವಿಜಯ್ ಅವರಿಗೆ ಬೆಂಬಲ ನೀಡಲು ಉತ್ಸುಕವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸುಮಾರು ಒಂದು ಡಜನ್ ಎಐಎಡಿಎಂಕೆ ಶಾಸಕರು ಪುದುಚೇರಿಯ ರೆಸಾರ್ಟ್‌ಗೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ. ಆದರೆ, ಪಕ್ಷದ ಹಿರಿಯ ನಾಯಕರಾದ ಇಪಿಎಸ್ ಮತ್ತು ಕೆಪಿ ಮುನುಸಾಮಿ ಅವರು ಮೈತ್ರಿಯ ಸಾಧ್ಯತೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಈ ಅನಿಶ್ಚಿತತೆಯ ನಡುವೆ, ಯಾವುದೇ ಆಪರೇಷನ್ ನಡೆಯಬಾರದೆಂಬ ಮುನ್ನೆಚ್ಚರಿಕೆಯಿಂದ ವಿಜಯ್ ತಮ್ಮ 107 ಶಾಸಕರನ್ನು ಮಾಮಲ್ಲಪುರಂನ ರೆಸಾರ್ಟ್‌ನಲ್ಲಿ ಸುರಕ್ಷಿತವಾಗಿ ಇರಿಸಿದ್ದಾರೆ.

ಮುಂದೇನು? ರಾಷ್ಟ್ರಪತಿ ಆಳ್ವಿಕೆಯ ಭೀತಿ ಸದ್ಯಕ್ಕೆ ಟಿವಿಕೆ ನ್ಯಾಯಾಲಯದ ಮೊರೆ ಹೋಗುವ ನಿರ್ಧಾರ ಮಾಡಿಲ್ಲ. ಬದಲಾಗಿ ರಾಜಕೀಯವಾಗಿ ಸಂಖ್ಯಾಬಲ ಸಾಬೀತುಪಡಿಸಲು ಪ್ರಯತ್ನಿಸುತ್ತಿದೆ. ಒಂದು ವೇಳೆ ವಿಜಯ್ ಅವರಿಗೆ ಮೈತ್ರಿಕೂಟವನ್ನು ಭದ್ರಪಡಿಸಲು ಸಾಧ್ಯವಾಗದಿದ್ದರೆ, ರಾಜ್ಯಪಾಲರು ಅನಿವಾರ್ಯವಾಗಿ ವಿಧಾನಸಭೆಯನ್ನು ಅಮಾನತುಗೊಳಿಸಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ಇದು ರಾಜ್ಯವನ್ನು ಮತ್ತೆ ಚುನಾವಣೆಯತ್ತ ತಳ್ಳುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:02 pm, Thu, 7 May 26

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ