AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ 1 ಕೋಟಿಗೂ ಅಧಿಕ ಜನರು ಭಾಗಿ

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 15 ರಂದು ಜಾರ್ಖಂಡ್​ನ ಖುಂಟಿಯಲ್ಲಿ ಉದ್ಘಾಟಿಸಿದರು. ಅಂದಿನಿಂದ ಶುರುವಾದ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಷ್ಟ್ರವ್ಯಾಪಿ ನಾಗರಿಕರೊಂದಿಗೆ ಸಂಪರ್ಕವನ್ನು ಬೆಳೆಸುವ ಪರಿವರ್ತಕ ಯಾತ್ರೆಯಾಗಿ ಹೊರಹೊಮ್ಮಿದೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ 1 ಕೋಟಿಗೂ ಅಧಿಕ ಜನರು ಭಾಗಿ
ವಿಕಸಿತ ಭಾರತ್ ಸಂಕಲ್ಪ ಯಾತ್ರೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 08, 2023 | 5:25 PM

Share

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆ (Viksit Bharat Sankalp Yatra)ಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ನವೆಂಬರ್ 15 ರಂದು ಜಾರ್ಖಂಡ್​ನ ಖುಂಟಿಯಲ್ಲಿ ಉದ್ಘಾಟಿಸಿದರು. ಅಂದಿನಿಂದ ಶುರುವಾದ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಷ್ಟ್ರವ್ಯಾಪಿ ನಾಗರಿಕರೊಂದಿಗೆ ಸಂಪರ್ಕವನ್ನು ಬೆಳೆಸುವ ಪರಿವರ್ತಕ ಯಾತ್ರೆಯಾಗಿ ಹೊರಹೊಮ್ಮಿದೆ.

ಡಿಸೆಂಬರ್ 7, 2023 ರವರೆಗೆ, ಈ ಯಾತ್ರೆಯು ದೇಶಾದ್ಯಂತ 36,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಲುಪಿದ್ದು, ಮತ್ತು ಬರೊಬ್ಬರಿ 1 ಕೋಟಿಗೂ ಹೆಚ್ಚು ನಾಗರಿಕರು ಇದರಲ್ಲಿ ಭಾಗವಹಿಸಿದ್ದಾರೆ ಎಂದು ಎಂಇಐಟಿಐ ಅಭಿವೃದ್ಧಿಪಡಿಸಿದ ಕಸ್ಟಮೈಸ್ ಮಾಡಿದ ಪೋರ್ಟಲ್​ನಲ್ಲಿ ಸೆರೆಹಿಡಿಯಲಾದ ಅಂಕಿ-ಅಂಶ ತಿಳಿಸಿದೆ. 37 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ಮೂಲಕ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ 12.07 ಲಕ್ಷ ಮತ್ತು ಗುಜರಾತ್​ನಲ್ಲಿ 11.58 ಲಕ್ಷ ಜನರು ಭಾಗವಹಿಸಿದ್ದಾರೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರೋತ್ಸಾಹದಾಯಕ ಸ್ವಾಗತ ದೊರೆತಿದೆ. ಇಲ್ಲಿಯವರೆಗೆ 9 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ಚಾಲ್ತಿ ನೀಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ವಿಶೇಷತೆಗಳು, ಅದರ ಪ್ರಯೋಜನಗಳು ಏನು?

ದಿನ ಕಳೆದಂತೆ ಹೆಚ್ಚು ಹೆಚ್ಚು ಜನರು ಭಾಗವಹಿಸುತ್ತಿದ್ದಾರೆ. ಈ ಸಂಕಲ್ಪ ಯಾತ್ರೆಯ ಮೊದಲ ವಾರದಲ್ಲಿ 5 ಲಕ್ಷ ನಾಗರಿಕರು ಭಾಗವಹಿಸಿದ್ದರೆ, ಕಳೆದ 10 ದಿನಗಳಲ್ಲಿ ದೇಶಾದ್ಯಂತ 77 ಲಕ್ಷಕ್ಕೂ ಹೆಚ್ಚು ಜನರು ಯಾತ್ರೆಯಲ್ಲಿ ಭಾಗವಹಿಸಿದ್ದರು. ಕಡಿಮೆ ಅವಧಿಯಲ್ಲಿ, 700 ಕ್ಕೂ ಹೆಚ್ಚು ಸ್ಥಳಗಳನ್ನು ತಲುಪಿದೆ ಮತ್ತು ಒಟ್ಟು 79 ಲಕ್ಷ ವ್ಯಕ್ತಿಗಳು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ. ಈ ಅಭೂತಪೂರ್ವ ಪ್ರಯತ್ನದಲ್ಲಿ, ವ್ಯಾನ್​ಗಳನ್ನು ಬಳಸಿಕೊಂಡು 2.60 ಲಕ್ಷಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳು ಮತ್ತು 3600 ಕ್ಕೂ ಅಧಿಕ ನಗರ, ಸ್ಥಳೀಯ ಸಂಸ್ಥೆಗಳನ್ನು ತಲುಪಿ, ಸರ್ಕಾರದ ಯೋಜನೆಗಳನ್ನು ತಮ್ಮ ಅನುಕೂಲಕ್ಕಾಗಿ ಬಳಸಿಕೊಳ್ಳಲು ಜನರಿಗೆ ಕರೆ ನೀಡುತ್ತದೆ.

ಮಹಿಳಾ ಕೇಂದ್ರಿತ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು ಯಾತ್ರೆಯ ಕೇಂದ್ರ ಬಿಂದುವಾಗಿದ್ದು, 46,000 ಕ್ಕೂ ಹೆಚ್ಚು ಫಲಾನುಭವಿಗಳು ಪಿಎಂ ಉಜ್ವಲ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರಗಳು ಸಹ ದೊಡ್ಡ ಆಕರ್ಷಣೆ ಎಂದು ಸಾಬೀತಾಗಿದೆ ಮತ್ತು ಇಲ್ಲಿಯವರೆಗೆ 22 ಲಕ್ಷ ವ್ಯಕ್ತಿಗಳನ್ನು ಪರೀಕ್ಷಿಸಲಾಗಿದೆ. ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಭಾಗವಾಗಿ ಪ್ರದರ್ಶಿಸಲಾದ ರೈತರಿಗಾಗಿ ಡ್ರೋನ್ ಪ್ರದರ್ಶನವು ಹೆಚ್ಚಿನ ಕುತೂಹಲವನ್ನು ಕೆರಳಿಸಿದೆ. 15,000 ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್​ಗಳನ್ನು ಒದಗಿಸುವ ಮತ್ತು ಇಬ್ಬರು ಮಹಿಳಾ ಸದಸ್ಯರಿಗೆ ಅಗತ್ಯ ತರಬೇತಿ ನೀಡುವ ‘ಡ್ರೋನ್ ದೀದಿ ಯೋಜನೆ’ ಪ್ರಾರಂಭಿಸುವುದರೊಂದಿಗೆ, ಹೆಚ್ಚಿನ ಸಂಖ್ಯೆಯ ಮಹಿಳೆಯರು ಡ್ರೋನ್ ಹಾರಾಟವನ್ನು ವೀಕ್ಷಿಸಲು ಮುಂದೆ ಬರುತ್ತಿದ್ದಾರೆ. SHG ಗಳು ಡ್ರೋನ್ ಸೇವೆಗಳನ್ನು ಶುಲ್ಕಕ್ಕೆ ಬಾಡಿಗೆಗೆ ನೀಡುತ್ತವೆ, ಇದು ಸ್ವಸಹಾಯ ಗುಂಪಿನ ಸದಸ್ಯರಿಗೆ ಮತ್ತೊಂದು ಆದಾಯದ ಹೊಳೆಯಾಗಿ ಕಾರ್ಯನಿರ್ವಹಿಸುತ್ತದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್