ಮಾಜಿ ಸಚಿವ ಕರಣ್ ಸಿಂಗ್ ಪುತ್ರ ವಿಕ್ರಮಾದಿತ್ಯ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ನಾನು ಈ ಮೂಲಕ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತೇನೆ. ರಾಷ್ಟ್ರೀಯ ಹಿತಾಸಕ್ತಿಗಳನ್ನು ಪ್ರತಿಬಿಂಬಿಸುವ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ನನ್ನ ನಿಲುವು ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ವಿಕ್ರಮಾದಿತ್ಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಮಾಜಿ ಸಚಿವ ಕರಣ್ ಸಿಂಗ್ ಪುತ್ರ ವಿಕ್ರಮಾದಿತ್ಯ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ
ವಿಕ್ರಮಾದಿತ್ಯ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 22, 2022 | 7:06 PM

ಕಾಂಗ್ರೆಸ್ ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಹಿಂದಿನ ಮಹಾರಾಜ ಹರಿ ಸಿಂಗ್ ಅವರ ಮೊಮ್ಮಗ ವಿಕ್ರಮಾದಿತ್ಯ ಸಿಂಗ್ (Vikramaditya Singh) ಮಂಗಳವಾರ ಕಾಂಗ್ರೆಸ್ (Congress)  ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಅವರ ಅಭಿಪ್ರಾಯಗಳು ಪಕ್ಷದೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದ ಸಿಂಗ್, ಪಕ್ಷವು ಇಲ್ಲಿನ ನೆಲದ ವಾಸ್ತವಗಳೊಂದಿಗೆ ಸಂಪರ್ಕ ಕಡಿದುಕೊಂಡಿದೆ ಎಂದು ಆರೋಪಿಸಿದರು. ಈ ಬಗ್ಗೆ ಟ್ವೀಟ್ ಮಾಡಿದ ಅವರು ನಾನು ಈ ಮೂಲಕ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತೇನೆ. ರಾಷ್ಟ್ರೀಯ ಹಿತಾಸಕ್ತಿಗಳನ್ನು ಪ್ರತಿಬಿಂಬಿಸುವ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ನನ್ನ ನಿಲುವು ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಿಕೆಯಾಗುವುದಿಲ್ಲ. ಕಾಂಗ್ರೆಸ್ ನೆಲದ ವಾಸ್ತವಗಳೊಂದಿಗೆ ಸಂಪರ್ಕ ಕಡಿದುಕೊಂಡಿದೆ ಎಂದಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದ ಜನರ ಭಾವನೆಗಳು ಮತ್ತು ಆಕಾಂಕ್ಷೆಗಳನ್ನು ಅರಿತುಕೊಳ್ಳಲು ಮತ್ತು ಪ್ರತಿಬಿಂಬಿಸಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ ಎಂಬುದು ನನ್ನ ನಂಬಿಕೆ” ಎಂದು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಸಿಂಗ್ ತಿಳಿಸಿದ್ದಾರೆ.

ವಿಕ್ರಮಾದಿತ್ಯ ಅವರು ಹಿರಿಯ ಕಾಂಗ್ರೆಸ್ ನಾಯಕ ಡಾ. ಕರಣ್ ಸಿಂಗ್ ಅವರ ಪುತ್ರ. ವಿಕ್ರಮಾದಿತ್ಯ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅವರು 2015 ರಲ್ಲಿ ಜಮ್ಮು ಮತ್ತು ಕಾಶ್ಮೀರ್ ಲೆಜಿಸ್ಲೇಟಿವ್ ಕೌನ್ಸಿಲ್ ಸದಸ್ಯರಾಗಿ ನಾಮನಿರ್ದೇಶನಗೊಂಡರು.

ಕಾಂಗ್ರೆಸ್ ಪಕ್ಷಕ್ಕಿಂತ ಮೊದಲು ಅವರು ಆಗಸ್ಟ್ 2015 ರಲ್ಲಿ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಗೆ ಸೇರಿದ್ದರು ಆದರೆ ಅವರು 2017 ರಲ್ಲಿ ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.

ಇದನ್ನೂ ಓದಿ: ದೆಹಲಿಯ ಮೂರು ಕಾರ್ಪೊರೇಷನ್‌ಗಳನ್ನು ವಿಲೀನಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

Published On - 6:47 pm, Tue, 22 March 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ