AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಸಿತ ಭಾರತ ನಿರ್ಮಾಣ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮಕ್ಕಳಿಗೆ ಕೇಂದ್ರ ಶಿಕ್ಷಣ ಸಚಿವರ ಕರೆ

Viksit Bharat Buildathon on October 13th: ಅಕ್ಟೋಬರ್ 13, ಸೋಮವಾರ ಬೆಳಗ್ಗೆ 10ಗಂಟೆಯಿಂದ ರಾತ್ರಿ 11 ಗಂಟೆವರೆಗೆ ವಿಕಸಿತ್ ಭಾರತ್ ಬ್ಯುಲ್ಡಥಾನ್ ನಡೆಯಲಿದೆ. ದೇಶಾದ್ಯಂತ 3 ಲಕ್ಷ ಪ್​ರೌಢಶಾಲೆಗಳ 5 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ರಾಷ್ಟ್ರ ನಿರ್ಮಾಣದ ಐಡಿಯಾ ತಿಳಿಸಲು ವೇದಿಕೆಯಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕನ್ನಡ ಸೇರಿದಂತೆ 10 ಭಾರತೀಯ ಭಾಷೆಗಳಲ್ಲಿ ವಿಡಿಯೋ ಮೆಸೇಜ್ ಕಳುಹಿಸಿದ್ದಾರೆ.

ವಿಕಸಿತ ಭಾರತ ನಿರ್ಮಾಣ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮಕ್ಕಳಿಗೆ ಕೇಂದ್ರ ಶಿಕ್ಷಣ ಸಚಿವರ ಕರೆ
ಧರ್ಮೇಂದ್ರ ಪ್ರಧಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 12, 2025 | 4:18 PM

Share

ನವದೆಹಲಿ, ಅಕ್ಟೋಬರ್ 12: ನಾಳೆ, ಸೋಮವಾರ ಬೆಳಗ್ಗೆ ನಡೆಯಲಿರುವ ವಿಕಸಿತ ಭಾರತ್ ಬ್ಯುಲ್ಡಥಾನ್ (Viksit Bharat Buildathon 2025) ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ರಾಷ್ಟ್ರದ ಯುವಜನರಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಕರೆನೀಡಿದ್ದಾರೆ. 2025ರ ಅಕ್ಟೋಬರ್ 13, ಸೋಮವಾರ ಬೆಳಗ್ಗೆ 10ರಿಂದ ರಾತ್ರಿ 11 ಗಂಟೆಯವರೆಗೆ ವಿಕಸಿತ್ ಭಾರತ್ ಬ್ಯುಲ್ಡಥಾನ್ ನಡೆಯಲಿದೆ.

ತಂತ್ರಜ್ಞಾನ ಅಳವಡಿಕೆ ಮೂಲಕ ಭಾರತೀಯ ಭಾಷೆಗಳನ್ನು ಉತ್ತೇಜಿಸುವಂತಹ ನ್ಯಾಷನಲ್ ಎಜುಕೇಶನ್ ಪಾಲಿಸಿ 2020 ಭಾಗವಾಗಿ ಈ ವಿಕಸಿತ್ ಭಾರತ್ ಬ್ಯುಲ್ಡಥಾನ್ ಅನ್ನು ನಡೆಸಲಾಗುತತಿದೆ. ಭಾರತದಲ್ಲಿ ಸಾಕಷ್ಟು ವೈವಿಧ್ಯಮಯ ಭಾಷೆ ಮತ್ತು ಪ್ರಾದೇಶೀಕ ವೈಶಿಷ್ಟ್ಯತೆಗಳಿವೆ. ಇವುಗಳ ನಡುವೆ ಪ್ರಬಲವಾದ ಸಂವಹನ ಸಾಧಿಸಲು ಈ ಅಭಿಯಾನ ನೆರವಾಗಲಿದೆ.

ಇದನ್ನೂ ಓದಿ: ಹುಡುಗಿಯರು ರಾತ್ರಿ ಹೊರಗೆ ಹೋಗಬಾರದು; ಅತ್ಯಾಚಾರದ ಬಗ್ಗೆ ಮಮತಾ ಬ್ಯಾನರ್ಜಿ ಶಾಕಿಂಗ್ ಹೇಳಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಎಐ ಭಾಷಾಂತರಿಸಿದ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಕನ್ನಡವೂ ಒಳಗೊಂಡಂತೆ ಹತ್ತು ಭಾಷೆಗಳಲ್ಲಿ ಇರುವ ವಿಡಿಯೋ ಸಂದೇಶಗಳನ್ನು ಪ್ರತ್ಯೇಕವಾಗಿ ಪೋಸ್ಟ್ ಮಾಡಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ಎಐ ಭಾಷಾಂತರಿತ ಕನ್ನಡ ವಿಡಿಯೋ ಮೆಸೇಜ್

ವಿವಿಧ ಭಾಷೆಗಳಲ್ಲಿ ಜನರನ್ನು ತಲುಪಲು ಸರ್ಕಾರವು ಎಐ ಅನ್ನು ಸದ್ಬಳಕೆ ಮಾಡಿಕೊಳ್ಳುತ್ತಿದೆ. ಇದರಿಂದ ಶಿಕ್ಷಣದಲ್ಲಿ ತಂತ್ರಜ್ಞಾನ ಸುಧಾರಣೆ ಮತ್ತು ಭಾಷಾ ವೈವಿಧ್ಯತೆಗೆ ಅನುಕೂಲವಾಗಲಿದೆ. ವಿಕಸಿತ ಭಾರತ್ ಬ್ಯುಲ್ಡಥಾನ್​ನಂತಹ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರ ಪಾಲ್ಗೊಳ್ಳುವಿಕೆಗೆ ಉತ್ತೇಜನ ಸಿಕ್ಕಂತಾಗುತ್ತದೆ.

ಇದನ್ನೂ ಓದಿ: ಬಂಗಾಳ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಮಮತಾ ಸರ್ಕಾರಕ್ಕೆ ಒಡಿಶಾ ಸಿಎಂ ಒತ್ತಾಯ

ಏನಿದು ವಿಕಸಿತ್ ಭಾರತ್ ಬ್ಯುಲ್ಡಥಾನ್?

ದೇಶಾದ್ಯಂತ 3 ಲಕ್ಷ ಪ್ರೌಢಶಾಲೆಗಳ 5 ಕೋಟಿಗೂ ಅಧಿಕ ವಿದ್ಯಾರ್ಥಿಗಳು ತಮ್ಮ ಪ್ರಾಯೋಗಿಕ ಪ್ರತಿಭೆಗಳನ್ನು ತೋರ್ಪಡಿಸಲು ಇರುವ ಒಂದು ಅವಕಾಶವಾಗಿದೆ. ಆಸಕ್ತ ಮಕ್ಕಳು ತಮ್ಮ ಶಾಲೆಗಳಲ್ಲಿ ಶಿಕ್ಷಕರ ನೆರವಿನಿಂದ ಈ ಅಭಿಯಾನಕ್ಕೆ ನೊಂದಾಯಿಸಿಕೊಳ್ಳಬಹುದು.

ಸ್ವಾವಲಂಬಿ ಭಾರತ, ಸ್ವದೇಶೀ, ವೋಕಲ್ ಫಾರ್ ಲೋಕಲ್ ಮತ್ತು ಸಮೃದ್ಧ್ ಭಾರತ್, ಈ ನಾಲ್ಕು ಥೀಮ್​ಗಳಲ್ಲಿ ರಾಷ್ಟ್ರ ನಿರ್ಮಾಣಕ್ಕೆ ನೆರವಾಗುವಂತಹ ಯಾವುದಾದರೂ ಐಡಿಯಾ ಇದ್ದರೆ ಮಕ್ಕಳು ಪ್ರಸ್ತುತಪಡಿಸಬಹುದು.

ರಾಷ್ಟ್ರಮಟ್ಟದಲ್ಲಿ 10 ಮಂದಿ ವಿಜೇತರು, ರಾಜ್ಯ ಮಟ್ಟದಲ್ಲಿ 100 ಮಂದಿ ಹಾಗೂ ಜಿಲ್ಲಾ ಮಟ್ಟದಲ್ಲಿ 1,000 ಮಂದಿ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ. ಒಟ್ಟು ಬಹುಮಾನದ ಮೊತ್ತ ಒಂದು ಕೋಟಿ ರೂ ಇರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್