AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕಾಶಿ ಸುರಂಗ ಕುಸಿತದ ಸ್ಥಳಕ್ಕೆ ಸ್ಥಳೀಯ ದೇವತೆಯ ಪಲ್ಲಕ್ಕಿ ತಂದ ಸ್ಥಳೀಯರು

ಉತ್ತರಾಖಂಡ ಸುರಂಗ ಕುಸಿತದಿಂದಾಗಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ರಕ್ಷಣಾ ಕಾರ್ಯಕರ್ತರು ಶತಾಯಗತಾಯ ಶ್ರಮಿಸುತ್ತಿದ್ದಾರೆ.ಇದೀಗ ಗುರುವಾರ ಸಂಜೆ ಆಗರ್ ಡ್ರಿಲ್ಲಿಂಗ್ ಮೆಷಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೊರೆಯುವ ಕೆಲಸ ಸ್ಥಗಿತಗೊಂಡಿದೆ. ಇಲ್ಲಿಯವರೆಗೆ, ರಕ್ಷಕರು ಸಿಲ್ಕ್ಯಾರಾ ಸುರಂಗದಲ್ಲಿ 46.8 ಮೀಟರ್ ವರೆಗೆ ಕೊರೆದಿದ್ದಾರೆ.

ಉತ್ತರಕಾಶಿ ಸುರಂಗ ಕುಸಿತದ ಸ್ಥಳಕ್ಕೆ ಸ್ಥಳೀಯ ದೇವತೆಯ ಪಲ್ಲಕ್ಕಿ ತಂದ ಸ್ಥಳೀಯರು
ಪಲ್ಲಕ್ಕಿ ಹೊತ್ತು ಬಂದ ಸ್ಥಳೀಯರು
ರಶ್ಮಿ ಕಲ್ಲಕಟ್ಟ
|

Updated on: Nov 23, 2023 | 9:53 PM

Share

ಉತ್ತರಕಾಶಿ ನವೆಂಬರ್ 23: ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarkashi)ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದೊಳಗೆ (Uttarakhand tunnel collapse) ಸಿಲುಕಿರುವ 41 ಕಟ್ಟಡ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಗಳು ಭರದಿಂದ ನಡೆಯುತ್ತಿವೆ. ಈ ಹೊತ್ತಿನಲ್ಲೇ ಸಮೀಪದ ಗ್ರಾಮಗಳ ಸ್ಥಳೀಯರು ಸ್ಥಳೀಯ ದೇವತೆಯ ‘ಡೋಲಿ’ (ಪಲ್ಲಕ್ಕಿ) ಅನ್ನು ಹೊತ್ತುಕೊಂಡು ಬಂದು ಸಂತ್ರಸ್ತರ ಸುರಕ್ಷತೆಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಸ್ಥಳೀಯರ ಗುಂಪು ‘ಡೋಲಿ’ಯನ್ನು ಹೊತ್ತುಕೊಂಡು ‘ಧೋಲ್’ ಮತ್ತು ಘಂಟೆ ಬಾರಿಸುತ್ತಾ ರಕ್ಷಣಾ ಸ್ಥಳದ ಕಡೆಗೆ ನಡೆಯುವುದನ್ನು ತೋರಿಸುತ್ತದೆ. ಅವರು ದೇವರಿಗೆ ಘೋಷಣೆಗಳನ್ನು ಕೂಗುವುದನ್ನು ಸಹ ಕೇಳಬಹುದು. ರಕ್ಷಣಾ ಕಾರ್ಯ ನಡೆಯುವ ಸ್ಥಳದಲ್ಲಿ ಸ್ಥಳೀಯ ದೇವತೆ ಬಾಬಾ ಬೌಖ್‌ನಾಗ್‌ನ ದೇವಾಲಯವನ್ನು ಸ್ಥಳೀಯರು ಸ್ಥಾಪಿಸುತ್ತಿರುವುದನ್ನು ಮತ್ತೊಂದು ವಿಡಿಯೊ ತೋರಿಸುತ್ತದೆ.

ಸುರಂಗದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ: ಇಲ್ಲಿವರೆಗಿನ ಅಪ್ಡೇಟ್ಸ್

ಕಳೆದ 11 ದಿನಗಳಿಂದ ಉತ್ತರಕಾಶಿಯ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಮುಂದಿನ ಕೆಲವು ಗಂಟೆಗಳಲ್ಲಿ ಅಥವಾ ನಾಳೆಯೊಳಗೆ ರಕ್ಷಿಸುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಸದಸ್ಯ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೇನ್ ಗುರುವಾರ ಸಂಜೆ ಹೇಳಿದ್ದಾರೆ. ಆದಾಗ್ಯೂ, ಸಿಕ್ಕಿಬಿದ್ದ ಕಾರ್ಮಿಕರು ಮತ್ತು ರಕ್ಷಕರು ಸಮಾನ ಅಪಾಯದಲ್ಲಿದ್ದಾರೆ. ತಮ್ಮ ನಿರೀಕ್ಷೆಗಳೊಂದಿಗೆ ರಕ್ಷಣಾ ತಂಡಗಳ ಮೇಲೆ ಒತ್ತಡ ಹೇರುವುದು ಬೇಡ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಸ್ಥಳಕ್ಕೆ ಭೇಟಿ ನೀಡಿ, ಸಿಕ್ಕಿಬಿದ್ದ ಕಾರ್ಮಿಕರೊಂದಿಗೆ ಮಾತನಾಡಿದ್ದಾರೆ. “ನಾವು ಸುಮಾರು 45 ಮೀಟರ್ (ಅವಶೇಷಗಳ ಮೂಲಕ) ಬಂದಿದ್ದೇವೆ. ನಾವೀಗ ನಿಮಗೆ ತುಂಬಾ ಹತ್ತಿರವಾಗಿದ್ದೇವೆ ಎಂದು ಸಿಎಂ ಅವರಿಗೆ ತಿಳಿಸಿದರು.

ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ (THDC) ಬಾರ್ಕೋಟ್ ತುದಿಯಿಂದ ರಕ್ಷಣಾ ಸುರಂಗದ ನಿರ್ಮಾಣವನ್ನು ಪ್ರಾರಂಭಿಸಿದೆ. ಈಗಾಗಲೇ ನಾಲ್ಕು ಸ್ಫೋಟಗಳು ಪೂರ್ಣಗೊಂಡಿವೆ, ಇದರ ಪರಿಣಾಮವಾಗಿ 9.10 ಮೀಟರ್ ಡ್ರಿಫ್ಟ್ ಆಗಿದೆ. ಅಧಿಕಾರಿಗಳ ಪ್ರಕಾರ, ದಿನಕ್ಕೆ ಮೂರು ಸ್ಫೋಟಗಳನ್ನು ನಡೆಸಲು ಪ್ರಯತ್ನಿಸಲಾಗುತ್ತಿದೆ.

ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಹಾರಿಜಾಂಟಲ್ ಡ್ರಿಲ್ಲಿಂಗ್‌ಗೆ ಅಗತ್ಯವಾದ ಮೈಕ್ರೋ ಟನೆಲಿಂಗ್‌ನ ಉಪಕರಣಗಳು ಗುರುವಾರ ಸ್ಥಳಕ್ಕೆ ತಲುಪಿವೆ. ಶುಕ್ರವಾರದೊಳಗೆ ಪ್ಲಾಟ್‌ಫಾರ್ಮ್ ಪೂರ್ಣಗೊಳ್ಳುವ ಸಾಧ್ಯತೆಯಿದೆ ಮತ್ತು ಶನಿವಾರದೊಳಗೆ ಉಪಕರಣಗಳನ್ನು ಹೊಂದಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಉತ್ತರಕಾಶಿ ಆಡಳಿತವು ರಕ್ಷಣಾ ಸ್ಥಳದ ಬಳಿ 41 ಆಂಬ್ಯುಲೆನ್ಸ್‌ಗಳನ್ನು ವ್ಯವಸ್ಥೆಗೊಳಿಸಿದೆ.

ಇದನ್ನೂ ಓದಿ: ಉತ್ತರಾಖಂಡ ಸುರಂಗ ಕುಸಿತ: ರಕ್ಷಣಾ ತಂಡಗಳ ಮೇಲೆ ಒತ್ತಡ ಹೇರದಂತೆ NDMA ಎಚ್ಚರಿಕೆ

ಆಗರ್ ಡ್ರಿಲ್ಲಿಂಗ್ ಮೆಷಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೊರೆಯುವ ಕೆಲಸ ಸ್ಥಗಿತಗೊಂಡಿದೆ. ಇಲ್ಲಿಯವರೆಗೆ, ರಕ್ಷಕರು ಸಿಲ್ಕ್ಯಾರಾ ಸುರಂಗದಲ್ಲಿ 46.8 ಮೀಟರ್ ವರೆಗೆ ಕೊರೆದಿದ್ದಾರೆ.

ಕೆಲವೇ ಗಂಟೆಗಳಲ್ಲಿ ಅಥವಾ ನಾಳೆಯೊಳಗೆ ಕಾರ್ಮಿಕರನ್ನು ರಕ್ಷಿಸಬಹುದು: NDMA

ಕಳೆದ 11 ದಿನಗಳಿಂದ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ಮುಂದಿನ ಕೆಲವು ಗಂಟೆಗಳಲ್ಲಿ ಅಥವಾ ನಾಳೆಯೊಳಗೆ ರಕ್ಷಿಸುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಸದಸ್ಯ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೇನ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!