Natural Farming Conclave ಗ್ರಾಮಗಳು ಬದಲಾವಣೆಗಳನ್ನು ಮುನ್ನಡೆಸಬಲ್ಲವು ಎಂದು ತೋರಿಸಿಕೊಟ್ಟಿವೆ: ಮೋದಿ

ಡಿಜಿಟಲ್ ಇಂಡಿಯಾ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಡಿಜಿಟಲ್ ಇಂಡಿಯಾ ಮಿಷನ್​​ನ ಅಭೂತಪೂರ್ವ ಯಶಸ್ಸು ಗ್ರಾಮಗಳನ್ನು ಬದಲಿಸುವುದು ಅಷ್ಟು ಸುಲಭವಲ್ಲ ಎಂದು ಹೇಳುವವರಿಗೆ ತಕ್ಕ ಉತ್ತರವಾಗಿದೆ.

Natural Farming Conclave ಗ್ರಾಮಗಳು ಬದಲಾವಣೆಗಳನ್ನು ಮುನ್ನಡೆಸಬಲ್ಲವು ಎಂದು ತೋರಿಸಿಕೊಟ್ಟಿವೆ: ಮೋದಿ
ಪ್ರಧಾನಿ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 10, 2022 | 1:15 PM

ನೈಸರ್ಗಿಕ ಕೃಷಿಕರ ಸಮಾವೇಶ (Natural Farming Conclave)ದಲ್ಲಿಂದು ವಿಡಿಯೊ ಸಂವಾದ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಅಮೃತಕಾಲದಲ್ಲಿ ಭಾರತದ ಅಭಿವೃದ್ದಿಯ ವೇಗಕ್ಕೆ ಸಬ್ ಕಾ ಪ್ರಯಾಸ್ (ಎಲ್ಲರ ಪರಿಶ್ರಮ) ಅಡಿಪಾಯವಾಗಿರುತ್ತದೆ. ಗ್ರಾಮಗಳಿಗೆ (Villages) ಮತ್ತು ಬಡವರಿಗಾಗಿ ಮಾಡಬೇಕಾದ ಕಾರ್ಯಗಳ ಜವಾಬ್ದಾರಿಯನ್ನು ನಾಗರಿಕರಿಗೆ ಮತ್ತು ಗ್ರಾಮ ಪಂಚಾಯತ್​​ಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಭಾರತದ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಈ ಸಂದರ್ಭದಲ್ಲಿ ದೇಶವು ವಿವಿಧ ಗುರಿಗಳ ಬಗ್ಗೆ ಕಾರ್ಯಪ್ರವೃತ್ತವಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ನಿಮ್ಮ ಪರಿಶ್ರಮ, ನಿಮ್ಮ ಅನುಭವದಿಂದ ದೇಶದಾದ್ಯಂತವಿರುವ ರೈತರು ಹಲವು ವಿಷಯಗಳನ್ನು ಕಲಿಯುತ್ತಾರೆ ಮತ್ತು ಅರ್ಥ ಮಾಡಿಕೊಳ್ಳುತ್ತಾರೆ. ಸೂರತ್​​ನಲ್ಲಿನ ನೈಸರ್ಗಿಕ ಕೃಷಿ ವಿಧಾನವು ಇಡೀ ಭಾರತಕ್ಕೆ ಮಾದರಿಯಾಗಲಿದೆ  ಎಂದು ಹೇಳಿದ್ದಾರೆ.

ಡಿಜಿಟಲ್ ಇಂಡಿಯಾ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಡಿಜಿಟಲ್ ಇಂಡಿಯಾ ಮಿಷನ್​​ನ ಅಭೂತಪೂರ್ವ ಯಶಸ್ಸು ಗ್ರಾಮಗಳನ್ನು ಬದಲಿಸುವುದು ಅಷ್ಟು ಸುಲಭವಲ್ಲ ಎಂದು ಹೇಳುವವರಿಗೆ ತಕ್ಕ ಉತ್ತರವಾಗಿದೆ. ನಮ್ಮ ಗ್ರಾಮಗಳು ಕೇವಲ ಬದಲಾವಣೆ ಆಗುವುದು ಮಾತ್ರವಲ್ಲದೆ ಬದಲಾವಣೆಯನ್ನು ಮುನ್ನಡೆಸಬಲ್ಲವು ಎಂಬುದನ್ನೂ ತೋರಿಸಿಕೊಟ್ಟಿವೆ ಎಂದು ಮೋದಿ ಹೇಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭುಪೇಂದ್ರ ಪಟೇಲ್ ಮತ್ತು ಗವರ್ನರ್ ಆಚಾರ್ಯ ದೇವ್ರತ್ ಕೂಡಾ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.  ಗುಜರಾತ್​​ನ ಸೂರತ್​​ನಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ರೈತರು ಮತ್ತು ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಇತರ ಉದ್ಯಮಿಗಳು, ವ್ಯಾಪಾರಿಗಳು, ಆಸಕ್ತರು ಪಾಲ್ಗೊಂಡಿದ್ದಾರೆ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ