Vinay Kumar Saxena ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್‌ ಕುಮಾರ್ ಸಕ್ಸೇನಾ ನೇಮಕ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬೈಜಾಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ವಿನಯ್ ಕುಮಾರ್ ಸಕ್ಸೇನಾ ಅವರನ್ನು ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಹೊರಡಿಸಿದ ಹೇಳಿಕೆ ತಿಳಿಸಿದೆ.

Vinay Kumar Saxena ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್‌ ಕುಮಾರ್ ಸಕ್ಸೇನಾ ನೇಮಕ
ವಿನಯ್ ಕುಮಾರ್ ಸಕ್ಸೇನಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 23, 2022 | 10:30 PM

ದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ (Ram Nath Kovind) ಅವರು ಸೋಮವಾರ ಅನಿಲ್ ಬೈಜಾಲ್ (Anil Baijal) ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ (Vinay Kumar Saxena) ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬೈಜಾಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ವಿನಯ್ ಕುಮಾರ್ ಸಕ್ಸೇನಾ ಅವರನ್ನು ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಹೊರಡಿಸಿದ ಹೇಳಿಕೆ ತಿಳಿಸಿದೆ. ಐದು ವರ್ಷ ನಾಲ್ಕು ತಿಂಗಳ ಕಾಲ ದೆಹಲಿಯ ಲೆಫ್ಟಿನೆಂಟ್ ಗವರ್ನರ್  ಸೇವೆ ಸಲ್ಲಿಸಿದ ಬೈಜಾಲ್ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು. ವಿನಯ್ ಕುಮಾರ್ ಸಕ್ಸೇನಾ ತಮ್ಮ ಕಚೇರಿಯ ಜವಾಬ್ದಾರಿಯನ್ನು ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲು ಭಾರತದ ರಾಷ್ಟ್ರಪತಿ ಸಂತೋಷಪಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸಕ್ಸೇನಾ ಅವರು ಅಕ್ಟೋಬರ್ 27, 2015 ರಂದು ಖಾದಿ ಮತ್ತು ಗ್ರಾಮೋದ್ಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ವಿನಯ್ ಕುಮಾರ್ ಸಕ್ಸೇನಾ ಅವರ ಕಿರುಪರಿಚಯ

  1. ಸಕ್ಸೇನಾ ಅವರು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಪ್ರಸ್ತುತ ಅಧ್ಯಕ್ಷರಾಗಿದ್ದಾರೆ, ಇದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಅಡಿಯಲ್ಲಿನ ಸಂಸ್ಥೆಯಾಗಿದೆ.
  2. ಮಾರ್ಚ್ 23, 1958 ರಂದು ಜನನ. ಕಾನ್ಪುರ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ, ಪೈಲಟ್ ಪರವಾನಗಿಯನ್ನೂ ಇವರು ಹೊಂದಿದ್ದಾರೆ.
  3. ಮಾರ್ಚ್ 2021 ರಲ್ಲಿ ಭಾರತದ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿ ಅವರನ್ನು ಕೇಂದ್ರ ಸರ್ಕಾರವು ನೇಮಿಸಿತು. ನವೆಂಬರ್ 2020 ರಲ್ಲಿ ಅವರು 2021 ರ ಪದ್ಮ ಪ್ರಶಸ್ತಿಗಳ ಆಯ್ಕೆ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನಗೊಂಡರು.
  4. ವಿನಯ್ ಕುಮಾರ್ ಸಕ್ಸೇನಾ 1984 ರಲ್ಲಿ ರಾಜಸ್ಥಾನದ ಪ್ರಸಿದ್ಧ ಜೆಕೆ ಗ್ರೂಪ್‌ಗೆ ಸಹಾಯಕ ಅಧಿಕಾರಿಯಾಗಿ ಸೇರಿದರು. ಈ ಸಂಸ್ಥೆಯ ವೈಟ್ ಸಿಮೆಂಟ್ ಸ್ಥಾವರದಲ್ಲಿ ಅವರು 11 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದರು.
  5. 1991 ರಲ್ಲಿ ಅವರು ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್ (NCCL) ಅನ್ನು ಸ್ಥಾಪಿಸಿದರು., ಲಾಭೋದ್ದೇಶವಿಲ್ಲದ ಎನ್ ಜಿಒ ಇದಾಗಿದ್ದು ಅಹಮದಾಬಾದ್‌ನಲ್ಲಿ ಪ್ರಧಾನ ಕಚೇರಿ ಇದೆ. ಎನ್ ಸಿಸಿಎಲ್ ಕಾನೂನು ಮತ್ತು ನ್ಯಾಯ ಸಚಿವಾಲಯದಿಂದ ಅಂಗೀಕಾರ ಪಡೆದಿದೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:54 pm, Mon, 23 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್